Crime News: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕನ ಬಂಧನ

By Sharath Sharma Kalagaru  |  First Published Oct 27, 2022, 1:26 PM IST

POCSO Case: ಅಪ್ರಾಪ್ತ ಶಾಲಾ ಮಕ್ಕಳ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ. ಸಹಕರಿಸದಿದ್ದರೆ ಪರೀಕ್ಷೆಯಲ್ಲಿ ಫೇಲ್‌ ಮಾಡುತ್ತೀನೆಂದು ಬೆದರಿಸಿ ಕಾಮುಕ ಶಿಕ್ಷಕ ತನ್ನ ತೆವಲು ತೀರಿಸಿಕೊಳ್ಳುತ್ತಿದ್ದನಂತೆ. 


ಗ್ವಾಲಿಯರ್‌: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಕಾಮುಕ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ. ಗ್ವಾಲಿಯರ್‌ನ ಸರ್ಕಾರಿ ಶಾಲೆಯೊಂದರ ಶಿಕ್ಷಕ ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ನಿರಂತರ ಕಿರುಕುಳ ನೀಡುತ್ತಿದ್ದನಂತೆ. ಆತನೊಂದಿಗೆ ಸಹಕರಿಸದಿದ್ದರೆ ಕೊಲೆ ಮಾಡುವುದಾಗಿ ಅಥವಾ ಪರೀಕ್ಷೆಯಲ್ಲಿ ಫೇಲ್‌ ಮಾಡುವುದಾಗಿ ಶಿಕ್ಷಕ ವಿದ್ಯಾರ್ಥಿನಿಯರಿಗೆ ಹೆದರಿಸುತ್ತಿದ್ದನಂತೆ. ಫೇಲ್‌ ಆಗುವ ಭಯದಲ್ಲಿ ವಿದ್ಯಾರ್ಥಿನಿಯರು ಅನಿವಾರ್ಯವಾಗ ಆತ ಹೇಳಿದಂತೆ ಕೇಳುತ್ತಿದ್ದರಂತೆ ಎಂದು ದೂರಿನಲ್ಲಿ ಸಂತ್ರಸ್ಥ ಬಾಲಕಿಯರು ಹೇಳಿದ್ದಾರೆ. 

ಇದನ್ನೂ ಓದಿ: ಅಕ್ರಮ ಸಂಬಂಧ ಬಯಲು; ಹೆಂಡತಿಯ ಮೇಲೆ ಕಾರು ಹತ್ತಿಸಿದ ಸಿನೆಮಾ ನಿರ್ಮಾಪಕ

Tap to resize

Latest Videos

ಬಾಲಕಿಯೊಬ್ಬಳು ತನ್ನ ತಾಯಿಗೆ ಶಾಲೆಯಲ್ಲಿ ಆಗುತ್ತಿರುವ ಲೈಂಗಿಕ ದೌರ್ಜನ್ಯದ ಬಗ್ಗೆ ಹಂಚಿಕೊಂಡ ನಂತರ ಈ ಪ್ರಕರಣ ಬೆಳಕಿಗೆ ಬಂದಿದೆ. ಆರರಿಂದ ಎಂಟು ವರ್ಷದ ಪುಟ್ಟ ಮಕ್ಕಳ ಮೇಲೆ ಶಿಕ್ಷಕ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ. ಶಾಲೆಯ ಖಾಲಿ ಕೊಠಡಿಯೊಳಕ್ಕೆ ಕರೆದೊಯ್ದು ಮಕ್ಕಳ ಬಟ್ಟೆ ಬಿಚ್ಚಿಸುತ್ತಿದ್ದ ಎಂದು ವಿದ್ಯಾರ್ಥಿನಿಯರು ತಮ್ಮ ನೋವು ಹಂಚಿಕೊಂಡಿದ್ದಾರೆ. ಮಕ್ಕಳ ನಗ್ನ ಚಿತ್ರಗಳನ್ನೂ ಆತ ತೆಗೆದುಕೊಳ್ಳುತ್ತಿದ್ದ ಎನ್ನಲಾಗಿದೆ. 

ಇದನ್ನೂ ಓದಿ: 12 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ, ಆರೋಪಿ ವಿರುದ್ಧ ಕೇಸ್‌ ದಾಖಲು

ಪೊಲೀಸರಿಗೆ ದೂರು ನೀಡಿದ ಪೋಷಕರು:
ಮಕ್ಕಳ ಮೇಲೆ ನಡೆಯುತ್ತಿರುವ ನಿರಂತರ ಲೈಂಗಿಕ ದೌರ್ಜನ್ಯದ ಬಗ್ಗೆ ಮಾಹಿತಿ ಸಿಕ್ಕ ತಕ್ಷಣ ಪೋಷಕರು ಉತಿಲಾ ಪೊಲೀಸ್‌ ಠಾಣೆಗೆ ತೆರಳಿ ಪ್ರಕರಣ ದಾಖಲಿಸಿದ್ದಾರೆ. ಶಿಕ್ಷಕನ ವಿರುದ್ಧ ದೂರು ನೀಡಿದ್ದು, ಆತನ ಬಗ್ಗೆ ಮಕ್ಕಳು ಹೇಳಿದ ಅಂಶಗಳನ್ನೆಲ್ಲಾ ದೂರಿನಲ್ಲಿ ಹೇಳಿದ್ದಾರೆ. ಠಾಣಾಧಿಕಾರಿ ಅವಧೇಶ್‌ ಸಿಂಗ್‌ ಕುಶ್ವಾಹಾ ಅವರಿಗೆ ಸಂಪೂರ್ಣ ಮಾಹಿತಿ ನೀಡಿದ್ದು ಶಿಕ್ಷಕನ ವಿರುದ್ಧ ಪೋಕ್ಸೊ ಮತ್ತು ಅತ್ಯಾಚಾರದ ಪ್ರಕರಣ ದಾಖಲಾಗಿದೆ. 

ಇದನ್ನೂ ಓದಿ: Telangana Crime: ಬೇರೆ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದಾಳೆ ಅಂತ 15 ವರ್ಷದ ಮಗಳನ್ನೇ ಕೊಂದ ತಂದೆ

ಪ್ರಕರಣ ದಾಖಲಿಸಿಕೊಂಡ ಪೊಲೀಸರು ತಕ್ಷಣ ಆರೋಪಿ ಶಿಕ್ಷಕನ ಮನೆಗೆ ಭೇಟಿ ನೀಡಿ ಬಂಧಿಸಿದ್ದಾರೆ. ಶಿಕ್ಷಕನಿಗೆ 58 ವರ್ಷ ವಯಸ್ಸಾಗಿದ್ದು ದಶಕಗಳಿಂದ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ. ಈ ವೇಳೆ ಅದೆಷ್ಟು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೋ ಎಂಬುದನ್ನು ಲೆಕ್ಕ ಹಾಕಲೂ ಸಾಧ್ಯವಿಲ್ಲ. ಶಿಕ್ಷಕ ಮಕ್ಕಳಿಗೆ ತಂದೆಯ ಪ್ರೀತಿ ನೀಡಬೇಕು ಆದರೆ ಕಾಮುಕ ಶಿಕ್ಷಕ ಮಕ್ಕಳ ಜೊತೆಗೆ ನಡೆದುಕೊಂಡಿರುವುದು ಶಿಕ್ಷಾರ್ಹ ಅಪರಾಧ, ಆತನಿಗೆ ತಕ್ಕ ಶಾಸ್ತಿ ಆಗಬೇಕು ಎಂಬುದು ಪೋಷಕರ ಅಳಲು.

click me!