ಸರಣಿ ಮನೆಗಳ ಕಳ್ಳತನ ನಡೆಸಿದ್ದ ವಂಚಕನನ್ನು ಪೊಲೀಸರು ಕಾರ್ಯಾಚರಣೆಯ ಮೂಲಕ ಬಂಧಿಸಿ, ಆರೋಪಿಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಆಭರಣಗಳನ್ನು ವಶಕ್ಕೆ ಪಡೆದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.
ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು
ಚಿಕ್ಕಮಗಳೂರು (ಅ.22): ಸರಣಿ ಮನೆಗಳ ಕಳ್ಳತನ ನಡೆಸಿದ್ದ ವಂಚಕನನ್ನು ಪೊಲೀಸರು ಕಾರ್ಯಾಚರಣೆಯ ಮೂಲಕ ಬಂಧಿಸಿ, ಆರೋಪಿಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಆಭರಣಗಳನ್ನು ವಶಕ್ಕೆ ಪಡೆದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.
undefined
ಲಕ್ಷಾಂತರ ಮೌಲ್ಯದ ಚಿನ್ನದ ಆಭರಣಗಳನ್ನು ವಶಕ್ಕೆ ಪಡೆದ ಪೊಲೀಸರು: ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಯಗಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2018ರಲ್ಲಿ ಚೌಳಹಿರಿಯೂರು ಗ್ರಾಮದಲ್ಲಿ ನಡೆದ ಮನೆ ಕಳ್ಳತನ ಪ್ರಕರಣವನ್ನು ಬೇಧಿಸುವ ಸಲುವಾಗಿ ಸಿ.ಪಿ.ಐ. ಬೀರೂರು ಇವರ ನೇತೃತ್ವದ ಪೊಲೀಸ್ ತಂಡ ಕಾರ್ಯಾಚರಣೆಯನ್ನು ಆರಂಭಿಸಿತ್ತು. ಜಾಡು ಹಿಡಿದ ಪೊಲೀಸರಿಗೆ ಕೂಲಿ ಕೆಲಸ ಮಾಡುತ್ತಿದ್ದ, ತುಮಕೂರು ಪಟ್ಟಣದ ಆರೋಪಿ ಮಾರುತಿ ಬಿನ್ ದುರುಗಪ್ಪನ ಕುರಿತು ಸುಳಿವು ದೊರೆತಿದ್ದು, ಈತನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ಮಾಡಿದಾಗ ಕಳ್ಳತನ ನಡೆಸಿರುವ ಕುರಿತು ಬಾಯ್ಬಿಟ್ಟಿದ್ದಾನೆ.
ಪುನೀತ ಪರ್ವ ಕಾರ್ಯಕ್ರಮ ನೋಡುವಾಗಲೇ ಹೃದಯಾಘಾತದಿಂದ ಯುವಕ ಸಾವು
ಆರೋಪಿಯು 2018ರಲ್ಲಿ ಯಗಟಿ ಮತ್ತು 2022ರಲ್ಲಿ ಲಕ್ಕವಳ್ಳಿ ಪೊಲೀಸ್ ಠಾಣಾ ಸರಹದ್ದಿನಲ್ಲಿ ಮನೆ ಕಳ್ಳತನ ಮತ್ತು 2021ರಲ್ಲಿ ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿರುವುದು ಕಂಡು ಬಂದಿರುತ್ತದೆ. ಬಂಧಿತ ಆರೋಪಿಯಿಂದ 5.30 ಲಕ್ಷ ಮೌಲ್ಯದ 129 ಗ್ರಾಂ ಬಂಗಾರದ ಒಡವೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು. ಪೊಲೀಸರ ಈ ತಂಡದಲ್ಲಿ ಸಿ.ಪಿ.ಐ. ಬೀರೂರು ವೃತ್ತ ಗುರುಪ್ರಸಾದ್ ಎನ್, ಬೀರೂರು ಪೊಲೀಸ್ ಠಾಣೆಯ ಪಿ.ಎಸ್.ಐ ವಿಶ್ವನಾಥ್ ಎನ್. ಸಿ. ಬಸವರಾಜಪ್ಪ ಹೆಚ್, ಯಗಟಿ ಪೊಲೀಸ್ ಠಾಣೆಯ ಪಿ.ಎಸ್.ಐ ಶಶಿಕುಮಾರ್ ವೈ. ಎಸ್. ನಂಜಾನಾಯ್ಕ ಮತ್ತು ಸಿಬ್ಬಂದಿಗಳಾದ ಮಹಮ್ಮದ್ ರಫೀಕ್, ಶಿವಕುಮಾರ್, ಮಧು, ಶ್ರೀನಿವಾಸ ಮತ್ತು ವಿಜಯ್ ಭಾಗವಹಿಸಿದ್ದರು.
ಕೆಪಿಟಿಸಿಎಲ್ ಪರೀಕ್ಷಾ ಅಕ್ರಮ: ಬೆಳಗಾವಿಯಲ್ಲಿ 6 ಮಂದಿ ಸೆರೆ
ಅಪರಿಚಿತರು, ಅಮಾಮಾನಸ್ಪದ ವ್ಯಕ್ತಿಗಳ ಮಾಹಿತಿ ನೀಡುವಂತೆ ಮನವಿ: ಜಿಲ್ಲಾದ್ಯಾಂತರ ಕೆಲ ಅಪರಿಚಿತರ ಓಡಾಟ ಹೆಚ್ಚಾಗಿದ್ದು, ಈ ಬಗ್ಗೆ ಅಲರ್ಟ್ ಆಗಿರುವ ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಮಾಹಿತಿಯನ್ನು ರವಾನೆ ಮಾಡಿದೆ. ಅಪರಿಚಿತರು, ಅನುಮಾನಾಸ್ಪದ ವ್ಯಕ್ತಿಗಳು ಯಾರೇ ಕಂಡರೂ ತಡ ಮಾಡದೆ ಹತ್ತಿರದ ಠಾಣೆಗಳ ಪೊಲೀಸರಿಗೆ ಮಾಹಿತಿ ನೀಡುವಂತೆ ಪೊಲೀಸ್ ಅಧಿಕಾರಿಗಳು ಸಾರ್ವಜನಿಕರಿಗೆ ಸೂಚಿಸಿದ್ದಾರೆ.