
ವಿಜಯನಗರ(ಜು.25): ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಂಡು 14 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸುವ ಮೂಲಕ ಆರೋಪಿಯ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹಗರಿಬೊಮ್ಮನಹಳ್ಳಿಯ ಇಲಿಯಾಸ್ ಬಂಧಿತ ಆರೋಪಿ. 4 ಕಳ್ಳತನ ಪ್ರಕರಣಗಳಲ್ಲಿ ಆರೋಪಿ ಇಲಿಯಾಸ್ ಪೊಲೀಸರಿಗೆ ಬೇಕಾಗಿದ್ದ. ವಿಚಾರಣೆಗಾಗಿ ಪೊಲೀಸರು ಕಸ್ಟಡಿಗೆ ಪಡೆದಿದ್ದಾಗ ಆರೋಪಿ ಇಲಿಯಾಸ್ ಪರಾರಿಯಾಗಿದ್ದ. ಕಳೆದ 14 ವರ್ಷಗಳಿಂದ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹೆಬ್ಬೂರು ಗ್ರಾಮದಲ್ಲಿ ವಾಸವಿದ್ದ, ಮದುವೆ ಮಾಡಿಕೊಂಡು ಹೆಂಡತಿ, ಮಕ್ಕಳ ಜೊತೆ ವಾಸವಿದ್ದ ಆರೋಪಿ.
ಮೈಸೂರು: ಕ್ಷುಲ್ಲಕ ಕಾರಣಕ್ಕೆ ಗಲಾಟೆ, ಪ್ರೇಮಿಗಳಿಬ್ಬೂರು ಆತ್ಮಹತ್ಯೆಗೆ ಶರಣು..!
ಆರೋಪಿ ಪತ್ತೆಗಾಗಿ ವಿಜಯನಗರ ಎಸ್ಪಿ ಶ್ರೀಹರಿಬಾಬು ಎರಡು ಪ್ರತ್ಯೇಕ ತಂಡಗಳನ್ನ ರಚಿಸಿದ್ದರು. ವೈಜ್ಞಾನಿಕ ತಂತ್ರಜ್ಞಾನಗಳನ್ನ ಬಳಸಿಕೊಂಡು ಸತತ ಕಾರ್ಯಾಚರಣೆ ಮೂಲಕ ಆರೋಪಿ ಪತ್ತೆ ಹಚ್ಚಿದ್ದಾರೆ ಪೊಲೀಸರು. ಸದ್ಯ ಆರೋಪಿಯನ್ನ ಬಂಧಿಸಿ ನ್ಯಾಯಂಗ ಬಂಧನಕ್ಕೆ ಒಪ್ಪಿಸಿದ್ದಾರೆ ಪೊಲೀಸರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ