
ಬೆಂಗಳೂರು,(ಆ.25): ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಅವಹೇಳನಕಾರಿ ಪೋಸ್ಟರ್ ಅಂಟಿಸಿದ್ದವನ್ನು ಪೊಲೀಸರು ಪತ್ತೆ ಮಾಡಿದ್ದಾರೆ.
ಹೌದು..ಯತ್ನಾಳ್ ಅವರ ಬೆಂಗಳೂರಿನ ಶಾಸಕರ ಭವನದ ಕೊಠಡಿಯ ಬಾಗಿಲಿಗೆ ಅವಾಚ್ಯವಾಗಿ ನಿಂದಿಸಿದ ಪೋಸ್ಟರ್ ಅಂಟಿಸಿದ್ದ ಚೆಲುವರಾಜು ಎನ್ನುವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈತ ಕಾಂಗ್ರೆಸ್ ಕಾರ್ಯಕರ್ತ ಎಂದು ತಿಳಿದುಬಂದಿದೆ.
ಯತ್ನಾಳ್ ವಿರುದ್ದ ಅವಹೇಳನಕಾರಿ ಪೋಸ್ಟ್, ಶಾಸಕರ ಕೊಠಡಿಗೆ ಅಂಟಿಸಿದ ಬಿತ್ತಿಪತ್ರ
ಶಾಸಕ ಯತ್ನಾಳ್, ಗಾಂಧಿ ಕುಟುಂಬದವರ ವಿರುದ್ಧ ಅವಹೇಳನಕಾರಿ ಮಾತನಾಡುತ್ತಿದ್ದಾರೆ ಎಂಬ ಹಿನ್ನಲೆಯಲ್ಲಿ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ಕಾರ್ಯಕರ್ತ ಚೆಲುವರಾಜು ಆಕ್ರೋಶ ವ್ಯಕ್ತಪಡಿಸಿದ್ದರು.
ನೀನು ಬಿನ್ ಲಾಡೆನ್ ಗೆ ಹುಟ್ಟಿದವ ಗಾ.....ಎಂದು ಶಾಸಕರ ಭವನದಲ್ಲಿರುವ ಯತ್ನಾಳ್ ಕೊಠಡಿ ಬಾಗಿಲಿಗೆ ಹಾಗೂ ಗೋಡೆಗೆ ಭಿತ್ತಿಪತ್ರ ಅಂಟಿಸಿದ್ದ.
ಅಫ್ಘಾನಿಸ್ತಾನ ವಿಚಾರದಲ್ಲಿ ಮೌನ ವಹಿಸಿರುವ ಬುದ್ದಿಜೀವಿಗಳು, ಚಿತ್ರನಟರಾದ ಅಮಿರ್‌ಖಾನ್, ಶಾರುಖಾನ್, ಸಲ್ಮಾನಖಾನ್, ರಾಹುಲ್ ಗಾಂಧಿ ಮತ್ತು ಸ್ವಾಮೀಜಿಗಳ ವಿರುದ್ಧ ಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹರಿಹಾಯ್ದಿದ್ದರು. ಈ ಹಿನ್ನೆಲೆಯಲ್ಲಿ ಅವಹೇಳನಕಾರಿ ಪೋಸ್ಟರ್ ಅಂಟಿಸಿದ್ದಾನೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ