ಮಾಜಿ ಸಚಿವ ವರ್ತೂರ್ ಪ್ರಕಾಶ್ ಕಿಡ್ನಾಪ್ ಕೇಸ್: ಕಿಂಗ್​ಪಿನ್ ಅರೆಸ್ಟ್

Published : Dec 12, 2020, 02:57 PM IST
ಮಾಜಿ ಸಚಿವ ವರ್ತೂರ್ ಪ್ರಕಾಶ್ ಕಿಡ್ನಾಪ್ ಕೇಸ್: ಕಿಂಗ್​ಪಿನ್ ಅರೆಸ್ಟ್

ಸಾರಾಂಶ

ಮಾಜಿ ಸಚಿವ ವರ್ತೂರು ಪ್ರಕಾಶ್ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ ಪ್ರಕರಣದ ಪ್ರಮುಖ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಕೋಲಾರ, (ಡಿ.12): ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣದ ಕಿಂಗ್​ಪಿನ್​ನನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನಲ್ಲಿ ಪ್ರಕರಣದ ಕಿಂಗ್​ಪಿನ್ ಕವಿರಾಜ್​ ಅರೆಸ್ಟ್​ ಆಗಿದ್ದಾನೆ.

ಕವಿರಾಜ್ ವರ್ತೂರ್ ಪ್ರಕಾಶ್ ಪರಿಚಯಸ್ಥ ಎಂಬ ಮಾಹಿತಿ ಲಭ್ಯವಾಗಿದೆ. ಕವಿರಾಜ್​ ಬಂಧನದ ಬಗ್ಗೆ ಕೇಂದ್ರ ವಲಯದ‌ ಐಜಿಪಿ ಸೀಮಂತ್ ಕುಮಾರ್‌ ಮಾಹಿತಿ ನೀಡಿದ್ದಾರೆ.

ವರ್ತೂರು ಪ್ರಕಾಶ್ ಕಿಡ್ನಾಪ್ ಕೇಸ್: ಮತ್ತೆ ನಾಲ್ವರ ಅರೆಸ್ಟ್...!

ವರ್ತೂರು ಪ್ರಕಾಶ್ ಅಪಹರಣ  ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು ಆರೋಪಿಗಳಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದರು. ಇದರಂತೆ ಇಂದು (ಶನಿವಾರ) ಬೆಳಿಗ್ಗೆ ಪ್ರಕರಣದ ಪ್ರಕರಣದ ಪ್ರಮುಖ ಆರೋಪಿ ಎಂದೇ ಹೇಳಲಾಗುತ್ತಿರುವ ಕವಿರಾಜ್‌ನನ್ನು ತಮಿಳುನಾಡಿನಲ್ಲಿ ಬಂಧಿಸಿಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಮಾಹಿತಿ ಹೊರಬರಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮೈಸೂರು ಕೆನರಾ ಬ್ಯಾಂಕ್‌ನಲ್ಲಿ ಅಡವಿಟ್ಟಿದ್ದ ಬಂಗಾರಕ್ಕೆ ಕನ್ನ! 85 ಗುಂಡು ಕೊಟ್ಟರೆ 77 ಮಾತ್ರ ವಾಪಸ್
ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!