ತುಮಕೂರು: ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕ ಪೊಲೀಸಪ್ಪ ಅರೆಸ್ಟ್..!

By Girish Goudar  |  First Published Jun 29, 2022, 10:59 PM IST

*  ತುಮಕೂರು ಜಿಲ್ಲೆ ತಿಪಟೂರು ತಾಲ್ಲೂಕಿನಲ್ಲಿ ನಡೆದ ಘಟನೆ
*  ಸಂತ್ರಸ್ತ‌ ಮಹಿಳೆಯೊಂದಿಗೆ ಅಸಭ್ಯವರ್ತನೆ ತೋರಿದ ಪೊಲೀಸ್ ಕಾನ್‌ಸ್ಟೇಬಲ್‌
*  ಕಿಬ್ಬನಹಳ್ಳಿ ಪೊಲೀಸ್ ಠಾಣೆಗೆ ಸಂತ್ರಸ್ತೆ ದೂರು 


ತುಮಕೂರು(ಜೂ.29): ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪೊಲೀಸ್ ಕಾನ್‌ಸ್ಟೇಬಲ್‌ವೊಬ್ಬ ಜೈಲು ಸೇರಿದ್ದಾನೆ. ತುಮಕೂರು ಜಿಲ್ಲೆ ತಿಪಟೂರು ತಾಲ್ಲೂಕಿನ ಕೆ.ಬಿ ಕ್ರಾಸ್ ಪೊಲೀಸ್ ಠಾಣೆಯ ಪೊಲೀಸ್ ಕಾನ್ಸ್ ಟೇಬಲ್ ಮಂಜುನಾಥ್ (ಮಿಲ್ಟ್ರಿ) ಬಂಧಿತ ಪೊಲೀಸ್ ಸಿಬ್ಬಂದಿ. 

ಕಿಬ್ಬನಹಳ್ಳಿಯಲ್ಲಿ ಪೊಲೀಸ್ ಠಾಣೆಯಲ್ಲಿ ತಿಪಟೂರು ಡಿವೈಎಸ್‌ಪಿಗೆ ಎಸ್ ಬಿ ಕಾನ್ ಸ್ಟೇಬಲ್ ಆಗಿ ಕೆಲಸ ಮಾಡ್ತಿದ್ದ‌ ಮಂಜುನಾಥ್, ನಿನ್ನೆ ಬೆಳಗ್ಗೆ 10 ಗಂಟೆಗೆ ಕಿಬ್ಬನಹಳ್ಳಿಯಲ್ಲಿ ಹೋಟೆಲ್ ನಡೆಸಿಕೊಂಡಿದ್ದ ಸಂತ್ರಸ್ತ‌ ಮಹಿಳೆಯೊಂದಿಗೆ ಅಸಭ್ಯವರ್ತನೆ ತೋರಿದ್ದಾನೆ. ಸಂತ್ರಸ್ತ ಮಹಿಳೆಯ ಗಂಡ ತಿಪಟೂರಿಗೆ ಹೋಟೆಲ್ ಸಾಮಾನುಗಳನ್ನ ತರಲು ಹೋದ ವೇಳೆ, ತಿಂಡಿ‌ ತಿನ್ನುವ ನೆಪದಲ್ಲಿ ಹೋಟೆಲ್ ಬಳಿ ಬಂದಿದ್ದ ಮಂಜುನಾಥ್, ಮಹಿಳೆಯ ಜೊತೆ ಅನುಚಿತವಾಗಿ ವರ್ತಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಜೊತೆಗೆ ಸೆಕ್ಸ್‌ಗೆ ಸಹಕರಿಸದಿದ್ದರೇ ಹೊಟೇಲ್ ಬಂದ್ ಮಾಡಿಸೋದಾಗಿ ಮಹಿಳೆಗೆ ಕೊಲೆ‌ ಬೆದರಿಕೆ ಹಾಕಿದ್ದಾನೆ. ಸಂತ್ರಸ್ತೆ ಕೂಡಲೇ ತನ್ನ ಪತಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ.

Tap to resize

Latest Videos

Hubli Crime News: ಕಾರ್ಪೋರೆಟರ್ ಹತ್ಯೆಗೆ ಪತಿಯಿಂದಲೇ ಯತ್ನ: ದೂರು ದಾಖಲು

ಬಳಿಕ ಘಟನೆ ಸಂಬಂಧ ಕಿಬ್ಬನಹಳ್ಳಿ ಪೊಲೀಸ್ ಠಾಣೆಗೆ ಸಂತ್ರಸ್ತೆ ದೂರು ನೀಡಿದ್ದಾರೆ. ಮಹಿಳೆಯ ದೂರಿನ ಆಧಾರದ ಮೇಲೆ, ಐಪಿಸಿ ಸೆಕ್ಷನ್ 354(a), 354(b), 448, 506,509, ಹಾಗೂ SC,ST ಆಕ್ಟ್ ಅಡಿ ಕೇಸ್ ದಾಖಲಾಗಿದೆ. ಸದ್ಯ ಪೊಲೀಸ್ ಕಾನ್ ಸ್ಟೇಬಲ್ ಮಂಜುನಾಥ್ ನನ್ನ ಬಂಧಿಸಿ ತುಮಕೂರು ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಲಾಗಿದೆ.
 

click me!