ಪಾರ್ಕಿಂಗ್ ವಿಚಾರಕ್ಕೆ ಕಿರಿಕ್ ತೆಗೆದು ಪೊಲೀಸ್ ಮೇಲೆಯೇ ಹಲ್ಲೆ ಮಾಡಿದ್ದ ಯುವಕ ಅರೆಸ್ಟ್ 

By Suvarna News  |  First Published May 28, 2024, 10:55 PM IST

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾಂಬೆಯ ದರ್ಶನಕ್ಕೆ ಬಂದಿದ್ದ ಬೆಂಗಳೂರು ಮೂಲದ ಪೊಲೀಸ್ ಪೇದೆ ಮೇಲೆ ದೇಗುಲದ  ಮುಂಭಾಗದಲ್ಲೇ ಹಲ್ಲೆ ನಡೆಸಿರುವ ಘಟನೆ ಶೃಂಗೇರಿಯಲ್ಲಿ ನಡೆದಿದೆ. ಹಲ್ಲೆ ನಡೆಸಿದ ಯುವಕನ ಬಂಧಿಸಿದ ಪೊಲೀಸರು 


:ವರದಿ : ಆಲ್ದೂರು ಕಿರಣ್ 

ಚಿಕ್ಕಮಗಳೂರು (ಮೇ.28): ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾಂಬೆಯ ದರ್ಶನಕ್ಕೆ ಬಂದಿದ್ದ ಬೆಂಗಳೂರು ಮೂಲದ ಪೊಲೀಸ್ ಪೇದೆ ಮೇಲೆ ದೇಗುಲದ  ಮುಂಭಾಗದಲ್ಲೇ ಹಲ್ಲೆ ನಡೆಸಿರುವ ಘಟನೆ ಶೃಂಗೇರಿಯಲ್ಲಿ ನಡೆದಿದೆ.ಇದೇ ತಿಂಗಳ 26ನೇ ತಾರೀಖು ರಾತ್ರಿ 12.30ಕ್ಕೆ ದೇವಸ್ಥಾನದ ಮುಂಭಾಗದಲ್ಲಿ ಕಾರು ನಿಲ್ಲಿಸಿದ್ದಾಗ ಈ ಘಟನೆ ನಡೆದಿದ್ದು, ಪೇದೆ ರಾಜೇಗೌಡ, ಪತ್ನಿ ಕುಸುಮ ಹಾಗೂ ಅವರ ಅಣ್ಣ-ಅತ್ತಿಗೆಯ ಮೇಲೂ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

Tap to resize

Latest Videos

undefined

ದೇವಸ್ಥಾನ ಮುಂಭಾಗ ಕಿರಿಕ್ 

ಬೆಂಗಳೂರು ಮೂಲದ ಪೊಲೀಸ್ ಪೇದೆ ರಾಜೇಗೌಡ ಮತ್ತು ಕುಟುಂಬ ಶೃಂಗೇರಿ ಶಾರದಾಂಬೆಯ ದರ್ಶನಕ್ಕೆ ಬಂದಿದ್ದರು. ಈ ವೇಳೆ ರಾತ್ರಿ 12.30ರ ಸುಮಾರಿಗೆ ಪೇದೆಯ ಅಣ್ಣ-ಅತ್ತಿಗೆ ಉಳಿಯಲು ಲಾಡ್ಜ್ ಕೇಳಲು ಹೋಗಿದ್ದರು. ಆಗ ಸ್ಕೂಟಿಯಲ್ಲಿ ಬಂದ ಇಬ್ಬರು ಹಾಗೂ ದೇವಾಲಯದ ಮುಂಭಾಗವಿದ್ದ ಮತ್ತಿಬ್ಬರು ಸೇರಿ ಗಲಾಟೆ ಮಾಡಿದ್ದು, ದೇವಸ್ಥಾನದ ಮುಂಭಾಗ ಇದ್ದ ಕಾರ್ ತೆಗೆಯುವಂತೆ ಖ್ಯಾತೆ ತೆಗೆದಿದ್ದಾರೆ.ಈ ವೇಳೆ ಗಲಾಟೆ ಜೋರಾಗಿ ಕಬ್ಬಿಣದ ರಾಡ್‌ನಿಂದ ಪೇದೆ ರಾಜೇಗೌಡ ಮೇಲೆ ಹಲ್ಲೆಗೆ ಯತ್ನಿಸಿದ್ದು, ಗಲಾಟೆ ಬಿಡಿಸಲು ಬಂದ ಪೇದೆ ಅಣ್ಣ ಉಮೇಶ್ ಮೇಲೂ ಹಲ್ಲೆ ನಡೆಸಿದ್ದಾರೆ. ಪೇದೆ ರಾಜೇಗೌಡ ಹಾಗೂ ಉಮೇಶ್ ಇಬ್ಬರ ಕೈಗೂ ಗಂಭೀರ ಗಾಯಗಳಾಗಿದ್ದು, ಎಲ್ಲರನ್ನೂ ಕೊಲೆ ಮಾಡುವುದಾಗಿ ಸ್ಪರ್ಶಿತ್ ಮತ್ತು ಸಹಚಚರು ಬೆದರಿಕೆ ಹಾಕಿದ್ದಾರೆ.ಅಪರಿಚಿತ ಹಲ್ಲೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಬೆಂಗಳೂರಿನ ರಾಜಗೋಪಾಲನಗರ ಠಾಣೆಯ ಪೇದೆಯಾಗಿರುವ ರಾಜೇಗೌಡ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಹಲ್ಲೆ ಸಂಬಂಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಅಪ್ರಾಪ್ತ ಬಾಲಕಿಯ ಫೋಟೊ ಮಾರ್ಫ್ ಮಾಡಿ ಹರಿಬಿಡ್ತಿದ್ದ ಯುವಕನ ಬಂಧನ!

ಪೊಲೀಸ್ ಪೇದೆಯ ಮೇಲೆ ಮಾಡಿದ್ದ ಯುವಕ ಅರೆಸ್ಟ್ :
 
ಪಾರ್ಕಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸ್ ಪೇದೆಯ ಮೇಲೆ ಹಲ್ಲೆ ಮಾಡಿದ್ದ ಶೃಂಗೇರಿ ಯುವಕನನ್ನು ಬಂಧಿಸಲಾಗಿದೆ. ಶೃಂಗೇರಿ ಪಟ್ಟಣದ ಸ್ಪರ್ಶಿತ್ ಬಂಧಿತ ಆರೋಪಿ.ಶೃಂಗೇರಿ ಪ್ರವಾಸಕ್ಕೆಂದು ಕುಟುಂಬದೊಂದಿಗೆ ಬಂದಿದ್ದ ಬೆಂಗಳೂರಿನ ರಾಜಗೋಪಾಲನಗರ ಠಾಣೆಯ ಪೇದೆ ರಾಜೇಗೌಡ, ಪತ್ನಿ ಕುಸುಮ ಹಾಗೂ ಅಣ್ಣ-ಅತ್ತಿಗೆ ಉಳಿಯಲು ಲಾಡ್ಜ್ ಕೇಳಲು ಹೋಗಿದ್ದ ವೇಳೆ ಸ್ಕೂಟಿಯಲ್ಲಿ ಬಂದ ಇಬ್ಬರು ಹಾಗೂ ದೇವಾಲಯದ ಮುಂಭಾಗವಿದ್ದ ಮತ್ತಿಬ್ಬರಿಂದ ದೇವಸ್ಥಾನದ ಮುಂಭಾಗ ನಿಲ್ಲಿಸಿದ್ದ ಕಾ‌ರ್ ತೆಗೆಯುವಂತೆ ಖ್ಯಾತೆ ತೆಗೆದಿದ್ದಾರೆ.ಅಲ್ಲದೆ ಕಬ್ಬಿಣದ ರಾಡ್ ನಿಂದ ಪೇದೆ ಅವರಿಗೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಹಲ್ಲೆ ತಪ್ಪಿಸಲು ಬಂದ ಪೇದೆ ರಾಜೇಗೌಡ ಅಣ್ಣ ಉಮೇಶ್ ಮೇಲೂ ಕೂಡ ಹಲ್ಲೆ ಮಾಡಿ ಎಲ್ಲರನ್ನೂ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

click me!