ಬಳ್ಳಾರಿ: ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಪೊಲೀಸ್‌ ಪೇದೆ

By Suvarna News  |  First Published Mar 15, 2021, 1:30 PM IST

ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಚಿಕ್ಕ ಅಂತಾಪುರ ಗ್ರಾಮದಲ್ಲಿ ನಡೆದ ಘಟನೆ| ರಾತ್ರಿ ಮನೆಯಲ್ಲಿ ಮಲಗಿದ್ದ ವೇಳೆ ಬಸವನಗೌಡ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಬಸವನಗೌಡ| ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ| 


ಬಳ್ಳಾರಿ(ಮಾ.15): ಪೊಲೀಸ್ ಕಾನ್‌ಸ್ಟೇಬಲ್‌ವೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಸಂಡೂರು ತಾಲೂಕಿನ ಚಿಕ್ಕ ಅಂತಾಪುರ ಗ್ರಾಮದಲ್ಲಿ ಇಂದು(ಸೋಮವಾರ) ನಡೆದಿದೆ. ಬಸವನಗೌಡ(35) ಎಂಬುವರೇ ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ.

ಮೂಲತಃ ಸಂಡೂರು ತಾಲೂಕಿನ ಚಿಕ್ಕ ಅಂತಾಪುರ ಗ್ರಾಮದ ನಿವಾಸಿಯಾದ ಬಸವನಗೌಡ ಅವರು ನಿನ್ನೆ(ಭಾನುವಾರ) ಊರಿಗೆ ತೆರಳಿದ್ದರು ಎಂದು ತಿಳಿದು ಬಂದಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಬಸವನಗೌಡ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

Tap to resize

Latest Videos

undefined

ಮೈಸೂರು ವಿವಿ ಹಾಸ್ಟೆಲ್‌ನಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಥಿ ಆತ್ಮಹತ್ಯೆ

ನಿನ್ನೆ ರಾತ್ರಿ ಮನೆಯಲ್ಲಿ ಮಲಗಿದ್ದ ವೇಳೆ ಬಸವನಗೌಡ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಮೃತ ಬಸವನಗೌಡ ಬಳ್ಳಾರಿ ಗಾಂದಿ ನಗರ ಪೊಲೀಸ್ ಠಾಣೆಯಲ್ಲಿ ಕೆಲಸ‌ ನಿರ್ವಹಿಸುತ್ತಿದ್ದರು. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
 

click me!