
ಬೈಲಹೊಂಗಲ(ಜೂ.12): ಪಟ್ಟಣದ ತಹಶೀಲ್ದಾರ ಕಚೇರಿಯ ಸಭಾಭವನದ ಆವರಣದಲ್ಲಿರುವ ಮರಕ್ಕೆ ಕುಡಿದ ಅಮಲಿನಲ್ಲಿ ಪೊಲೀಸ್ ಪೇದೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳವಾರ ನಡೆದಿದೆ.
ಮುರಕಿಬಾಂವಿ ಗ್ರಾಮದ ಬಸನಗೌಡ ಈರಪ್ಪ ಗೌಡರ (40) ಆತ್ಮಹತ್ಯೆ ಮಾಡಿಕೊಂಡ ಪೇದೆ. ತಾಲೂಕಿನ ದೊಡವಾಡ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಮಾನಸಿಕ ಖಿನ್ನತೆಯಿಂದ ಹಳಿಗೆ ಜಿಗಿದು ಆತ್ಮಹತ್ಯೆ ಯತ್ನಿಸಿದ ವ್ಯಕ್ತಿ; ಕೆಲ ಕಾಲ ಮೆಟ್ರೋ ಸಂಚಾರ ಸ್ಥಗಿತ!
ಚುನಾವಣೆ ಕರ್ತವ್ಯ ಮುಗಿದ ಮೇಲೆ ರಜೆ ಪಡೆದಿದ್ದರು. ಜೀವನದಲ್ಲಿ ಜಿಗುಪ್ಸೆ ಹೊಂದಿ ಕುಡಿದ ಮತ್ತಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಮೃತ ಪೊಲೀಸ್ ಪೇದೆ ಪತ್ನಿ, ಸಂಬಂಧಿಕರು ಕಣ್ಣೀರಾದರು. ಕುಡಿಯೋದ ಬಿಡಿ, ಮಕ್ಕಳು, ಮಡದಿ ಬಗ್ಗೆ ಗಮನ ಕೊಡಿ, ಮಕ್ಕಳ ಶಾಲೆ ಫೀ ತುಂಬಬೇಕು ಎಂದು ಹೇಳಿದ್ದೆ ಅಷ್ಟೇ ಎಂದು ಮೃತ ಪೇದೆ ಪತ್ನಿ ಪೊಲೀಸರ ಎದುರು ತಿಳಿಸಿ ದುಃಖಿತರಾದರು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ