ರಾಮನಗರ: ಎಸ್ಕೇಪ್‌ಗೆ ಯತ್ನ, ಆರೋಪಿ ಮೇಲೆ ಪೊಲೀಸರ ಫೈರಿಂಗ್‌

Published : Aug 13, 2023, 10:45 PM IST
ರಾಮನಗರ: ಎಸ್ಕೇಪ್‌ಗೆ ಯತ್ನ, ಆರೋಪಿ ಮೇಲೆ ಪೊಲೀಸರ ಫೈರಿಂಗ್‌

ಸಾರಾಂಶ

ಮಹಜರು ಮಾಡುವ ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಿ ಎಸ್ಕೇಪ್‌ ಆಗಲು ಯತ್ನಿಸಿದ ಸಂದರ್ಭದಲ್ಲಿ ಆರೋಪಿ ಮತೀನ್‌ ಕಾಲಿಗೆ ಎರಡು ಸುತ್ತು ಗುಂಡು ಹೊಡೆದ ಡಿವೈಎಸ್ಪಿ ದಿನಕರ್‌ ಶೆಟ್ಟಿ

ರಾಮನಗರ(ಆ.13): ಕಳ್ಳತನ ಪ್ರಕರಣ ಸಂಬಂಧ ಸ್ಥಳ ಮಹಜರು ವೇಳೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ರೌಡಿಶೀಟರ್‌ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ನಗರದ ಹೊರ ವಲಯದ ವಡೇರಹಳ್ಳಿಯಲ್ಲಿ ನಡೆದಿದೆ. ನಗರದ ನಾಲಬಂದವಾಡಿ ವಾಸಿ ಮತೀನ್‌ (20) ಗುಂಡೇಟು ತಿಂದವನು. 

ಜಿಲ್ಲಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬೆಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆರೋಪಿ ಮತೀನ್‌ ಕೊಲೆ ಹಾಗೂ ಕಳ್ಳತನ ಪ್ರಕರಣ ಆರೋಪಿಯಾಗಿದ್ದನು. ಅವನ ಮೇಲೆ ರಾಮನಗರ ಟೌನ್‌ ಪೋಲಿಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 

ರಾಮನಗರ: ರೈಲಿಗೆ ತಲೆಕೊಟ್ಟು ಪ್ರೇಮಿಗಳ ಆತ್ಮಹತ್ಯೆ

ಶನಿವಾರ ಸಂಜೆ ಸ್ಥಳ ಮಹಜರು ಮಾಡುವ ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಿ ಎಸ್ಕೇಪ್‌ ಆಗಲು ಯತ್ನಿಸಿದ ಸಂದರ್ಭದಲ್ಲಿ ಡಿವೈಎಸ್ಪಿ ದಿನಕರ್‌ ಶೆಟ್ಟಿರವರು ಆರೋಪಿ ಮತೀನ್‌ ಕಾಲಿಗೆ ಎರಡು ಸುತ್ತು ಗುಂಡು ಹೊಡೆದಿದ್ದಾರೆ.
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಾರ್ತಿಕ್‌ ರೆಡ್ಡಿ, ಎಎಸ್ಪಿ ಸುರೇಶ್‌ ರವರು ಎಫ್‌ಎಸ್‌ಎಲ್‌ ತಂಡದೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ