
ಕಲಬುರಗಿ(ಜ.06): ಕೊಲೆ ಆರೋಪಿ ಕಾಲಿಗೆ ಪೊಲೀಸರು ಗುಂಡು ಹೊಡೆದ ಘಟನೆ ಕಲಬುರಗಿಯಲ್ಲಿ ನಿನ್ನೆ(ಗುರುವಾರ) ನಡೆದಿದೆ. ಹಾಡುಹಗಲೇ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಬರ್ಬರ ಕೊಲೆ ಮಾಡಿರುವ ಪ್ರಕರಣದಲ್ಲಿ ಆರೋಪಿ ಕಾಲಿಗೆ ಗುಂಡು ಹೊಡೆದು ಪೊಲೀಸರು ಆತನ್ನು ಬಂಧಿಸಿದಿದ್ದಾರೆ.
ಕೊಲೆ ಪ್ರಕರಣದ ಅರೋಪಿ ಮಂಜುನಾಥ್ ಬಲಗಾಲಿಗೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಆರೋಪಿ ಮಂಜುನಾಥ ಸ್ವಾಮಿಯನ್ನು ಪೊಲೀಸರು ಬಂಧಿಸುವಾಗ ಪೊಲೀಸರ ಮೇಲೆ ಆತ ಹಲ್ಲೆಗೆ ಯತ್ನಿಸಿದ್ದನು. ಈ ವೇಳೆ ಆತ್ಮರಕ್ಷಣೆಗಾಗಿ ಪೊಲೀಸರು ಆರೋಪಿ ಬಲಗಾಲಿಗೆ ಗುಂಡು ಹಾರಿಸಿದ್ದಾರೆ.
ಕಲಬುರಗಿ: ಯುವಕನ ಕೊಲೆ, ಇಬ್ಬರಿಗೆ ಜೀವಾವಧಿ ಶಿಕ್ಷೆ
ಗಾಯಗೊಂಡ ಆರೋಪಿ ಮಂಜುನಾಥ ಸ್ವಾಮಿಯನ್ನ ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯಲ್ಲಿ ಗಾಯಗೊಂಡ ಪೇದೆ ಸಿದ್ರಾಮಯ್ಯ ಸ್ವಾಮಿ ಅವರನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಶಾಂತ್ ಕುಂಬಾರ (30) ಎಂಬ ಯುವಕನ ಮೇಲೆ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಪರಾರಿಯಾಗಿದ್ದ ಆರೋಪಿ ಮಂಜುನಾಥ ಸ್ವಾಮಿ. ಇಂದು ಆರೋಪಿ ಬೆನ್ನಟ್ಟಿದ್ದ ಚೌಕ್ ಪೊಲೀಸ್ ಗುಂಡು ಹಾರಿಸಿ ಆತನನ್ನು ಬಂಧಿಸಿದ್ದಾರೆ. ಕೊಲೆ ಘಟನೆಯ ಪ್ರಕರಣ ಕಲಬುರಗಿ ಚೌಕ್ ಪೋಲಿಸ್ ಠಾಣೆಯಲ್ಲಿ ದಾಖಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ