ಬೆಂಗಳೂರು : ಮನೆಗೆ ನುಗ್ಗಿ ಗಂಡಸರ ಕಟ್ಟಿ ಹಾಕಿ ಗ್ಯಾಂಗ್‌ ರೇ*

Kannadaprabha News   | Kannada Prabha
Published : Oct 24, 2025, 06:57 AM IST
crime news

ಸಾರಾಂಶ

ಮನೆಯೊಂದಕ್ಕೆ ನುಗ್ಗಿ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾ*ರ ಹಾಗೂ ಹಣ ಮತ್ತು ಮೊಬೈಲ್ ಫೋನ್‌ಗಳ ದೋಚಿದ ಆರು ಮಂದಿ ದರೋಡೆಕೋರರನ್ನು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದು ಆತನಿಗಾಗಿ ಶೋಧ ನಡೆದಿದೆ.

ದಾಸರಹಳ್ಳಿ : ಮನೆಯೊಂದಕ್ಕೆ ನುಗ್ಗಿ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾ*ರ ಹಾಗೂ ಹಣ ಮತ್ತು ಮೊಬೈಲ್ ಫೋನ್‌ಗಳ ದೋಚಿದ ಆರು ಮಂದಿ ದರೋಡೆಕೋರರನ್ನು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದು ಆತನಿಗಾಗಿ ಶೋಧ ನಡೆದಿದೆ.

ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿಯ ಗಂಗೊಂಡನಹಳ್ಳಿಯ ಮಾರೇಗೌಡರ ಮನೆಯಲ್ಲಿ ನೇಪಾಳಿ ಮೂಲದ ಸಂತ್ರಸ್ತೆ ಮತ್ತು ಅವರ ಕುಟುಂಬ ಬಾಡಿಗೆಗೆ ವಾಸವಿದ್ದರು. ಕಳೆದ ಅ.20ರ ಮಧ್ಯರಾತ್ರಿ ಸಂತ್ರಸ್ತೆ ವಾಸವಿದ್ದ ಮನೆಗೆ ನುಗ್ಗಿದ ಗ್ಯಾಂಗ್, ತಾವು ಪೀಣ್ಯ ಪೊಲೀಸರ ಇನ್ ಫಾರ್ಮರ್ಸ್‌ (ಮಾಹಿತಿದಾರರು) ಎಂದು ಹೇಳಿಕೊಂಡಿದೆ.

ನಿಮ್ಮ ಮನೆಯಲ್ಲಿ ಗಾಂಜಾ ಮತ್ತು ವೇಶ್ಯಾವಾಟಿಕೆ ನಡೆಸುತ್ತಿದ್ದೀರಾ ಎಂದು ಗ್ಯಾಂಗ್‌ ಆರೋಪಿಸಿದೆ. ನಂತರ ಮಾರಕಾಸ್ತ್ರಗಳನ್ನು ತೋರಿಸಿ ಮನೆಯಲ್ಲಿದ್ದವರ ಮೇಲೆ ಹಲ್ಲೆ ನಡೆಸಿದ್ದಾರೆ. ಸಂತ್ರಸ್ತೆಯ 14 ವರ್ಷದ ಮಗ ಹಾಗೂ ಅವರ ಸ್ನೇಹಿತೆಯ ಮೇಲೂ ಹಲ್ಲೆ ಮಾಡಲಾಗಿದೆ. ಮನೆಯಲ್ಲಿದ್ದ ಗಂಡಸರನ್ನು ಕಟ್ಟಿ ಹಾಕಿ ಥಳಿಸಲಾಗಿದೆ.

ಬಳಿಕ ಮೂವರು ದುಷ್ಕರ್ಮಿಗಳು ಮಹಿಳೆಯನ್ನು ಪಕ್ಕದ ಮನೆಗೆ ಎಳೆದೊಯ್ದು ಸಾಮೂಹಿಕ ಅತ್ಯಾ*ರ ಎಸಗಿದ್ದಾರೆ. ಉಳಿದ ಮೂವರು ಆರೋಪಿಗಳು ಮನೆಯಲ್ಲಿದ್ದ ಹಣ ಮತ್ತು ಮೊಬೈಲ್ ಫೋನ್‌ಗಳನ್ನು ದೋಚಿಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ.

ಪೊಲೀಸರಿಗೆ ಮಾಹಿತಿ: ನಂತರ ಸಂತ್ರಸ್ತೆಯ 14 ವರ್ಷದ ಮಗ ಧೈರ್ಯ ಮಾಡಿ ಪೊಲೀಸ್ ತುರ್ತು ಸಹಾಯವಾಣಿ 112 ಕ್ಕೆ ಕರೆ ಮಾಡಿ ವಿಷಯ ತಿಳಿಸಿದ್ದಾನೆ. ಪೊಲೀಸರು ಸ್ಥಳಕ್ಕೆ ಧಾವಿಸುವಷ್ಟರಲ್ಲೇ ಆರೋಪಿಗಳು ಪರಾರಿಯಾಗಿದ್ದರು. ವಿಚಾರ ತಿಳಿದ ಕೂಡಲೇ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಾದನಾಯಕನಹಳ್ಳಿ ಠಾಣೆಯಲ್ಲಿ ಗ್ಯಾಂಗ್‌ ರೇಪ್ ಮತ್ತು ಡಕಾಯಿತಿ ಪ್ರಕರಣ ದಾಖಲಿಸಲಾಗಿದೆ.

ಹಲ್ಲೆಗೊಳಗಾದವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಮೂರು ವಿಶೇಷ ತಂಡ: ಪ್ರಕರಣದ ತನಿಖೆಗಾಗಿ ನೆಲಮಂಗಲ ಡಿವೈಎಸ್ಪಿ ನೇತೃತ್ವದಲ್ಲಿ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ. ತನಿಖೆ ಚುರುಕುಗೊಳಿಸಿದ ಪೊಲೀಸರು, ಕೃತ್ಯ ಎಸಗಿದ ಮಿಥುನ್, ನವೀನ್, ಕಾರ್ತಿಕ್, ಗ್ರೇನ್ ಸುಯೋಗ್, ಸೀನ, ಜಂಗ್ಲಿ ಪೃಥ್ವಿ 7 ಜನ ಆರೋಪಿಗಳಲ್ಲಿ 6 ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಮುಖ ಆರೋಪಿ ಮಿಥುನ್ ಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.

ಆರೋಪಿಗಳು ಮನೆ ಸಮೀಪದವರು

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಕೃತ್ಯದ ಎಲ್ಲ ಆರೋಪಿಗಳು ಸಂತ್ರಸ್ತೆ ವಾಸವಿದ್ದ ಮನೆಯಿಂದ ಸ್ವಲ್ಪ ದೂರದಲ್ಲಿ ವಾಸವಾಗಿದ್ದವರು ಎಂದು ತಿಳಿದುಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕೆಲಸ ಇಲ್ಲದ ಗಂಡನಿಗೆ ಪತ್ನಿ ಶೀಲದ ಮೇಲೆ ಶಂಕೆ: ನಿದ್ರೆಯಲ್ಲಿದ್ದ ಮಗಳ ಕತ್ತು ಸೀಳಿದ ಪತಿ
ಬೆಂಗಳೂರು ಮತ್ತೊಂದು ಲವ್ ಜಿಹಾದ್ ಕೇಸ್; ಇಸ್ಲಾಂಗೆ ಮತಾಂತರ ಆಗದಿದ್ರೆ ಹುಡುಗಿಯನ್ನ 32 ಪೀಸ್ ಮಾಡೋದಾಗಿ ಬೆದರಿಕೆ!