ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆ ಕೊಟ್ಟಿದ್ದ ಬಳ್ಳಾರಿ ಮೂಲದ ಸಾಮಾಜಿಕ ಕಾರ್ಯಕರ್ತ ರಾಜಶೇಖರ್ ಮುಲಾಲಿಗೆ ಬೆಂಗಳೂರು ಪೊಲೀಸರು ಬಿಗ್ ಶಾಕ್ ಕೊಟ್ಟಿದ್ದಾರೆ.
ಬೆಂಗಳೂರು, (ಮಾ.06): ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಸಿ.ಡಿ. ರಾಜಕಾರಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಇದರ ಮಧ್ಯೆ ಇನ್ನೂ ಹಲವರ ರಾಸಲೀಲೆ ಸಿಡಿ ಇವೆ ಎಂದು ಹೇಳಿದ್ದ ಸಾಮಾಜಿಕ ಕಾರ್ಯಕರ್ತ ರಾಜಶೇಖರ ಮುಲಾಲಿಗೆ ಕಬ್ಬನ್ ಪಾರ್ಕ್ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ಹೌದು..ಕಾಂಗ್ರೆಸ್ ನಾಯಕ ಎಚ್‌ವೈ ಮೇಟಿ ರಾಸಲೀಲೆ ವಿಡಿಯೋ ಬಿಡುಗಡೆ ಮಾಡಿದ್ದ ಬಳ್ಳಾರಿ ಮೂಲದ ಸಾಮಾಜಿಕ ಕಾರ್ಯಕರ್ತ ರಾಜಶೇಖರ ಮುಲಾಲಿ ಅವರು ಹಲವರ 19 ರಾಸಲೀಲೆ ಸಿಡಿ ಇವೆ ಎಂದು ಹೇಳಿದ್ದರು.
MLA,MP ಸೇರಿದಂತೆ ಹಲವರ ಸಿ.ಡಿ. ಇವೆ: ಹೊಸ ಬಾಂಬ್ ಸಿಡಿಸಿದ ಮತ್ತೋರ್ವ ಸಾಮಾಜಿಕ ಕಾರ್ಯಕರ್ತ
ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ರಾಜಶೇಖರ ಮುಲಾಲಿಗೆ ವಿಚಾರಣೆಗೆ ಹಾಜರಾಗುವಂತೆ ವಾಟ್ಸಪ್ ಮೂಲಕ ನೋಟಿಸ್ ನೀಡಿದ್ದು, ಸೋಮವಾರ ಬೆಳಗ್ಗೆ 11 ಗಂಟೆಗೆ ಬರುಂತೆ ತಿಳಿಸಿದ್ದಾರೆ.
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತೀವ್ರ ತನಿಖೆ ಆರಂಭಿಸಿದ್ದು, ಸಿಡಿಯಲ್ಲಿರುವ ಲೇಡಿಗಾಗಿ ಬೆಂಗಳೂರಿನ ಎಲ್ಲಾ ಪಿಜಿಯನ್ನು ಜಾಲಾಡಿದ್ದಾರೆ ಎಂದು ತಿಳಿದುಬಂದಿದೆ. ಇದರ ನಡುವೆ ರಾಜಶೇಖರ್ ಮುಲಾಲಿ ನನ್ನ ಬಳಿ 19 ಸೆಕ್ಸ್ ಸಿಡಿಗಳಿದೆ ಎಂದು ಹೊಸ ಬಾಂಬ್ ಸಿಡಿಸಿದ್ದರು. ಈ ಬೆನ್ನಲ್ಲೇ ಈ ನೋಟಿಸ್ ಜಾರಿಯಾಗಿದೆ.