
ಕಲಬುರಗಿ(ಡಿ.08): ಸೇಡಂ ರಸ್ತೆಯ ಸೂರ್ಯನಗರ ಕಾಲೋನಿಯ ಈಶ್ವರ ಗುಡಿ ಹತ್ತಿರದ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಮೇಲೆ ಸಿಸಿಬಿ ಘಟಕದ ಪಿಐ ದಿಲೀಪ ಬಿ.ಸಾಗರ ಅವರು ಸಿಸಿಬಿ ಘಟಕದ ಸಿಬ್ಬಂದಿ ಮತ್ತು ಸಿಇಎನ್ ಠಾಣೆಯ ಮಹಿಳಾ ಸಿಬ್ಬಂದಿಯೊಂದಿಗೆ ದಾಳಿ ನಡೆಸಿ ಮೂವರು ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ.
ಗಿರಾಕಿಗಳಿಂದ ಹಣ ಪಡೆದು ವೇಶ್ಯಾವಾಟಿಕೆ ನಡೆಸುತ್ತಿದ್ದ ನಗರದ ಶಹಾಬಜಾರ ಖಟಗರಪುರದ ಗೀತಾಬಾಯಿ ಡೊಳ್ಳೆ, ರಾಮತೀರ್ಥ ನಗರದ ರಾಧಾ ಪಾಟೀಲ ಮತ್ತು ಆಳಂದ ತಾಲೂಕಿನ ಶಾಖಾಪುರದ ದಯಾನಂದ ಪ್ರಭು ಸಿಂಗೆ ವಿರುದ್ಧ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು ಜೈಲಿನಲ್ಲಿದ್ದುಕೊಂಡು ವೇಶ್ಯಾವಾಟಿಕೆ ದಂಧೆ ನಡೆಸ್ತಿದ್ದ ಸಂಜು: ಪಿಂಪ್ ಮಂಜುನಾಥ್‌ಗೆ ಸಾಥ್ ಕೊಟ್ಟೋರಾರು?
ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ಮಾಡಿ ಮೂವರು ಮಹಿಳೆಯರನ್ನು ರಕ್ಷಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ