ನಗರದಲ್ಲಿ ಹೆಚ್ಚಾಗಿರುವ ಕ್ರೈಂ ಚಟುವಟಿಕೆ ಹಾಗೂ ಗಾಂಜಾ ಪ್ರಕರಣಗಳ ಹಿನ್ನಲೆಯಲ್ಲಿ ಪೊಲೀಸರು ಬೆಳ್ಳಂ ಬೆಳ್ಳಗೆ ರೌಡಿಶೀಟರ್‌ಗಳಿಗೆ ಶಾಕ್ ನೀಡಿದ್ದು, ಅವರ ಮನೆ ಮೇಲೆ ದಾಳಿ ನಡೆಸಿದ್ದಾರೆ.
ಬೆಂಗಳೂರು (ಜೂ.08): ನಗರದಲ್ಲಿ ಹೆಚ್ಚಾಗಿರುವ ಕ್ರೈಂ ಚಟುವಟಿಕೆ ಹಾಗೂ ಗಾಂಜಾ ಪ್ರಕರಣಗಳ ಹಿನ್ನಲೆಯಲ್ಲಿ ಪೊಲೀಸರು ಬೆಳ್ಳಂ ಬೆಳ್ಳಗೆ ರೌಡಿಶೀಟರ್‌ಗಳಿಗೆ ಶಾಕ್ ನೀಡಿದ್ದು, ಅವರ ಮನೆ ಮೇಲೆ ದಾಳಿ ನಡೆಸಿದ್ದಾರೆ. ನಗರದ ಪೂರ್ವ ವಿಭಾಗದ ಪೋಲಿಸರು ಹಲಸೂರು, ಪುಲಕೇಶಿನಗರ, ಡಿಜೆ ಹಳ್ಳಿ, KG ಹಳ್ಳಿ ಠಾಣಾ ವ್ಯಾಪ್ತಿಯ ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಡಿಸಿಪಿ ಭೀಮಾಶಂಕರ ಗುಳೇದ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
ಇನ್ನು ಆಗ್ನೇಯ ವಿಭಾಗದ ರೌಡಿಶೀಟರ್‌ಗಳ ಮನೆಗಳ ಮೇಲೂ ದಾಳಿ ನಡೆಸಲಾಗಿದೆ. ಚುನಾವಣಾ ಸಂಧರ್ಭದಲ್ಲಿ ಜೈಲು ಸೇರಿ ಬಿಡುಗಡೆಗೊಂಡಿರುವ ರೌಡಿಶೀಟರ್‌ಗಳಿಗೆ ಮತ್ತೆ ಎಚ್ಚರಿಕೆ ಕೊಡುವ ಸಲುವಾಗಿ ದಾಳಿ ಮಾಡಿ ಪರಿಶೀಲನೆ ನಡೆಸಿದ್ದು, ರೌಡಿ ಆಕ್ಟಿವಿಟಿಗಳಲ್ಲಿ ಭಾಗಿಯಾಗದಂತೆಯೂ ಎಚ್ಚರಿಕೆ ಕೊಡಲಾಗಿದೆ. ಡಿಸಿಪಿ ಸಿಕೆ ಬಾಬ ನೇತೃತ್ವದಲ್ಲಿ ದಾಳಿ ಮಾಡಿ ಪರಿಶೀಲನೆ ನಡೆಸಿದ್ದು, ರಮಂಗಲ, ಮಡಿವಾಳ, ಆಡುಗೋಡಿ, ಮೈಕೋ ಲೇ ಔಟ್ ಸೇರಿ ಎಲ್ಲಾ ಠಾಣಾ ವ್ಯಾಪ್ತಿಯಲ್ಲಿ ದಾಳಿ ಮಾಡಲಾಗಿದೆ. ಸದ್ಯ ಹಲವು ರೌಡಿಶೀಟರ್‌ಗಳ ಮನೆಗಳಲ್ಲಿ ಮಾರಕಾಸ್ತ್ರ ಪತ್ತೆಯಾಗಿದೆ.
ಇನ್ನು ಪೊಲೀಸ್ ಆಯುಕ್ತ ಬಿ ದಯಾನಂದ ಸೂಚನೆ ಮೇರೆಗೆ ನಗರದ ಎಂಟು ವಿಭಾಗದ ಪೊಲೀಸರಿಂದ ಸುಮಾರು ಒಂದು ಸಾವಿರಕ್ಕೂ ಹೆಚ್ಚು ರೌಡಿಗಳ ನಿವಾಸದ ಮೇಲೆ ದಾಳಿ ನಡೆಸಲಾಗಿದ್ದು, ಈ ವೇಳೆ ಹಲವಾರು ರೌಡಿಗಳ ನಿವಾಸದಲ್ಲಿ ಮಾರಕಾಸ್ತ್ರಗಳು ಮತ್ತು ಗಾಂಜಾ ಪತ್ತೆಯಾಗಿದೆ. ಎಂಟು ವಿಭಾಗದ ಪೊಲೀಸರು ದಾಳಿಯಲ್ಲಿ ಭಾಗಿಯಾಗಿದ್ದರು.
ಜಾತಿ ಗಣತಿ ವರದಿ ಅಂಗೀಕರಿಸಿ ಮೀಸಲಾತಿ ಗೊಂದಲಕ್ಕೆ ತೆರೆ: ಸಿಎಂ ಸಿದ್ದರಾಮಯ್ಯ ಭರವಸೆ
106 ಆರೋಪಿಗಳ ಸೆರೆ, 2.69 ಕೋಟಿ ವಸ್ತು ಜಪ್ತಿ ಮಾಡಿದ ಕೇಂದ್ರ ವಿಭಾಗ: ಇತ್ತೀಚೆಗೆ ದರೋಡೆ, ಕಳ್ಳತನ, ಮನೆಗಳ್ಳತನ ಹಾಗೂ ಸರಗಳವು ಸೇರಿದಂತೆ ವಿವಿಧ ಪ್ರಕರಣಗಳಲ್ಲಿ 106 ಆರೋಪಿಗಳನ್ನು ಬಂಧಿಸಿ .2.69 ಕೋಟಿ ಮೌಲ್ಯದ ವಸ್ತುಗಳನ್ನು ಕೇಂದ್ರ ವಿಭಾಗದ ಪೊಲೀಸರು ಜಪ್ತಿ ಮಾಡಿದ್ದಾರೆ. ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಆಯುಕ್ತ ಬಿ.ದಯಾನಂದ್ ಅವರು, ಕೇಂದ್ರ ವಿಭಾಗದ ಪೊಲೀಸರು ನಡೆಸಿದ ಕಾರ್ಯಾಚರಣೆ ಮಾಹಿತಿ ನೀಡಿ, ಪ್ರಕರಣಗಳನ್ನು ಪತ್ತೆ ಹಚ್ಚಿದ ಪೊಲೀಸರಿಗೆ ಅಭಿನಂದಿಸಿದರು.
ಕೇಂದ್ರ ವಿಭಾಗದ 10 ಠಾಣೆಗಳ ವ್ಯಾಪ್ತಿಯಲ್ಲಿ 103 ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ. ಇದರಲ್ಲಿ 106 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳಿಂದ 2 ಕೇಜಿ 110 ಗ್ರಾಂ ಚಿನ್ನ, 105 ಕೇಜಿ ಬೆಳ್ಳಿ, 1 ಕಾರು, 5 ದ್ವಿಚಕ್ರ ವಾಹನಗಳು ಹಾಗೂ .2.12 ಲಕ್ಷ ನಗದು ಸೇರಿದಂತೆ .2.69 ಕೋಟಿ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಆಯುಕ್ತರು ವಿವರಿಸಿದ್ದಾರೆ. ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತ (ಪಶ್ಚಿಮ) ಸಂದೀಪ್ ಪಾಟೀಲ್ ಹಾಗೂ ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ಉಪಸ್ಥಿತರಿದ್ದರು.
ಪೆಟ್ಟು ತಿಂದಿದ್ದೇನೆ, ಲೋಕಸಭೆಗೆ ಸ್ಪರ್ಧೆ ಮಾಡೋಲ್ಲ: ವಿ.ಸೋಮಣ್ಣ
ಆಯುಕ್ತರ ಕಚೇರಿ ಬಳಿಯೇ ಪಿಸ್ತೂಲ್ ಮಾರಾಟಕ್ಕೆ ಯತ್ನ!: ನಗರದ ಪೊಲೀಸ್ ಆಯುಕ್ತರ ಕಚೇರಿ ಸಮೀಪದಲ್ಲೇ ಅಕ್ರಮವಾಗಿ ಪಿಸ್ತೂಲ್ ಮಾರಾಟಕ್ಕೆ ಯತ್ನಿಸಿದ್ದ ಕಿಡಿಗೇಡಿಯೊಬ್ಬನನ್ನು ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ನೀರಜ್ ಎಂಬಾತನಿಂದ 3 ಪಿಸ್ತೂಲ್ ಹಾಗೂ 99 ಜೀವಂತ ಗುಂಡುಗಳನ್ನು ಜಪ್ತಿ ಮಾಡಲಾಗಿದೆ. ಜೂ.6 ರಂದು ಬೆಳಗ್ಗೆ 10 ಗಂಟೆಯಲ್ಲಿ ನಗರದ ಪೊಲೀಸ್ ಆಯುಕ್ತರ ಕಚೇರಿ ಸಮೀಪದ ಕ್ವಿನ್ಸ್ ರಸ್ತೆಯ ಬಸ್ ನಿಲ್ದಾಣ ಮುಂದೆ ವ್ಯಕ್ತಿಯೊಬ್ಬ ಪಿಸ್ತೂಲ್ ಮಾರಾಟಕ್ಕೆ ಯತ್ನಿಸಿರುವ ಬಗ್ಗೆ ಖಚಿತ ಮಾಹಿತಿ ಪಡೆದು ಪಿಎಸ್‌ಐ ಈಶ್ವರ್ ವಣ್ಣೂರು ತಂಡ ದಾಳಿ ನಡೆಸಿ ಬಂಧಿಸಿತು. ಈ ಜಾಲದಲ್ಲಿ ತಪ್ಪಿಸಿಕೊಂಡಿರುವ ಕೆಲವರ ಪತ್ತೆಗೆ ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.