ಹೊರಗೆ ಹೋಟೆಲ್..ಒಳಗೆ ವೇಶ್ಯಾವಾಟಿಕೆ.. ಹುಬ್ಬಳ್ಳಿ ಕರಾಮತ್ತು!

By Suvarna News  |  First Published Mar 2, 2022, 8:39 PM IST

* ಹುಬ್ಬಳ್ಳಿ, ಮಂಗಳೂರಿನಲ್ಲಿ ವೇಶ್ಯಾವಾಟಿಕೆದಂಧೆ
* ಲಾಡ್ಜ್ ಮಾಲೀಕ ಸೇರಿ ಹಲವರ ಬಂಧನ
* ಹುಬ್ಬಳ್ಳಿ ಹಾಗೂ ಮಂಗಳೂರಿನಲ್ಲಿ ಪ್ರತ್ಯೇಕವಾಗಿ ನಡೆದ ದಾಳಿ


ಹುಬ್ಬಳ್ಳಿ/ಮಂಗಳೂರು, (ಮಾ.02): ಹುಬ್ಬಳ್ಳಿ ಹಾಗೂ ಮಂಗಳೂರಿನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ (Prostitution) ದಂಧೆ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಹುಬ್ಬಳ್ಳಿ (Hubballi) ಹಾಗೂ ಮಂಗಳೂರಿನಲ್ಲಿ (Mangaluru) ಪ್ರತ್ಯೇಕವಾಗಿ ದಾಳಿಯಾಗಿದ್ದು, ಈ ಎರಡು ಘಟನೆಯ ಬಗ್ಗೆ ಮಾಹಿತಿ ಈ ಕೆಳಗಿನಂತಿದೆ.

ಹುಬ್ಬಳ್ಳಿಯಲ್ಲಿ ಹೈಟೆಕ್ ವೇಶಾವಾಟಿಕೆ ದಂಧೆ
ಜಿಲ್ಲೆಯ ಎಸ್.ಜಿ.ಟವರ್ಸ್, ಅಮೃತ ಡಿಲಕ್ಸ್ ಹೋಟೆಲ್‌ನಲ್ಲಿ ಹೈಟೆಕ್‌ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಲಾಡ್ಜ್ ಮಾಲೀಕ ಸೇರಿ ಹಲವರನ್ನು ಪೊಲೀಸರು ಬಂಧಿಸಿದ್ದಾರೆ.

Latest Videos

undefined

Bengaluru Crime: ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಪಾ ಮೇಲೆ ಸಿಸಿಬಿ ದಾಳಿ

ಲಾಡ್ಜ್ ಮಾಲೀಕ ವೆಂಕಟೇಶ ನಾಯ್ಕ, ಮ್ಯಾನೇಜರ್ ವಿರೇಶ್​ ಮುರುಡೇಶ್ವರ, ಕೆ.ಎಮ್.ಪ್ರದೀಪ್ ಗೌಡ, ಮಂಜುನಾಥ್ ಗೌಡ ಬಂಧಿತ ಆರೋಪಿಗಳು.

ಆರೋಪಿಗಳು ಬೇರೆ ರಾಜ್ಯದಿಂದ ಅಮಾಯಕ ಯುವತಿಯರನ್ನು ಕರೆತಂದು ಈ ದಂಧೆ ನಡೆಸುತ್ತಿದ್ದು, ಆನ್‌ಲೈನ್‌ ಮೂಲಕ ವ್ಯವಹಾರ ಮಾಡುತ್ತಿದ್ದರು.

ಹುಬ್ಬಳ್ಳಿ ತಾಲೂಕಿನ ವರೂರ ಗ್ರಾಮದಲ್ಲಿನ ಎಸ್.ಜಿ.ಟವರ್ಸ್ ಹಾಗೂ ಅಮೃತ ಕಂಫರ್ಟ್‌ ಹೋಟೆಲ್​ ಮೇಲೆ ದಾಳಿ ಮಾಡಿದ ಗ್ರಾಮೀಣ ಪೋಲಿಸರ ತಂಡ ಆರೋಪಿಗಳನ್ನು ಬಂಧಿಸಿದ್ದಾರೆ. ಸದ್ಯ ಯುವತಿಯರನ್ನು ರಕ್ಷಿಸಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಮಂಗಳೂರಿನಲ್ಲೂ ವೇಶ್ಯಾವಾಟಿಕೆ ದಂಧೆ
ಮಂಗಳೂರು: ಇಲ್ಲಿನ ಬೆಂದೋರ್‌ವೆಲ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆಯನ್ನು ಸಿಸಿಬಿ ಪೊಲೀಸರು ಮಾರ್ಚ್ 1 ಮಂಗಳವಾರ ಭೇದಿಸಿದ್ದು, ದಂಧೆಯಲ್ಲಿ ತೊಡಗಿದ್ದ ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.

ಬಂಧಿತರು ವಿಟ್ಲ ಪಡ್ನೂರಿನ ಕೆಪಿ ಹಮೀದ್ (54), ಆಕಾಶಭವನದ ಅನುಪಮಾ ಶೆಟ್ಟಿ (46), ಸುಬ್ರಹ್ಮಣ್ಯ ಕುಲ್ಕುಂದದ ನಿಶ್ಮಿತಾ (23) ಎಂಬುವರಾಗಿದ್ದಾರೆ.

ಬೆಂದೋರ್‌ವೆಲ್‌ನಲ್ಲಿರುವ ಪಿಇಇಬಿಐ ರೆಸಿಡೆನ್ಸಿಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ನಾಲ್ವರು ಯುವತಿಯರನ್ನು ರಕ್ಷಿಸಲಾಗಿದ್ದು, ಆರೋಪಿಗಳಿಂದ ಮಾರುತಿ 800 ಕಾರು, ಐದು ಮೊಬೈಲ್ ಫೋನ್ ಗಳು ಹಾಗೂ 50,000 ರೂ.ನಗದನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಈ ಕುರಿತು ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಪಾ ಮೇಲೆ ಸಿಸಿಬಿ ದಾಳಿ
ಬೆಂಗಳೂರು(ಮಾ.02): ಸ್ಪಾವೊಂದರ(Spa) ಮೇಲೆ ದಾಳಿ ನಡೆಸಿ ವೇಶ್ಯಾವಾಟಿಕೆಯಲ್ಲಿ(Prostitution) ತೊಡಗಿದ್ದ ಮಹಿಳೆಯನ್ನು ಸಿಸಿಬಿ ಪೊಲೀಸರು(CCB Police) ಬಂಧಿಸಿದ್ದಾರೆ.

ಟಿ.ದಾಸರಹಳ್ಳಿ ಸಮೀಪ ಐಶ್ವರ್ಯ ಅಲಿಯಾಸ್‌ ರಿಷಪ್ಸನಿಸ್ಟ್‌ ಬಂಧಿತಳಾಗಿದ್ದು(Arrest), ಟಿ.ದಾಸರಹಳ್ಳಿ ಸಮೀಪದ ಹೆಸರಘಟ್ಟ ಮುಖ್ಯರಸ್ತೆಯಲ್ಲಿ ಸ್ಕೈ ಯುನಿಸೆಕ್ಸ್‌ ಸಲೂನ್‌ ಮತ್ತು ಸ್ಪಾ(Sky Unisex Salon and Spa) ಹೆಸರಿನಲ್ಲಿ ಆಕೆ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದಳು. 

ಈ ದಾಳಿ ವೇಳೆ(Raid) ಮೂವರು ಮಹಿಳೆಯರನ್ನು(Women) ರಕ್ಷಿಸಲಾಗಿದೆ ಎಂದು ಸಿಸಿಬಿ ಅಧಿಕಾರಿಗಳು ಹೇಳಿದ್ದಾರೆ. ಇನ್ನು ಈ ಸ್ಪಾ ಪರವಾನಿಗೆ(License) ರದ್ದುಪಡಿಸುವಂತೆ ಬಿಬಿಎಂಪಿಗೆ(BBMP) ವರದಿ ಸಲ್ಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು: ಅನೈತಿಕ ಚಟುವಟಿಕೆಗಳ ಶಂಕೆ ಹಿನ್ನೆಲೆಯಲ್ಲಿ ನಗರದ ಮೂರು ‘ಸ್ಪಾ’ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು, ವಿದೇಶಿಯರು(Foreigners) ಸೇರಿ 13 ಮಂದಿ ಮಹಿಳೆಯರನ್ನು ರಕ್ಷಿಸಿದ ಘಟನೆ ಫೆ.4 ರಂದು ನಡೆದಿತ್ತು 
ಉತ್ತರ ಭಾರತ ಮೂಲದ ದೇವೆಂದರ್‌, ಅಭಿಜಿತ್‌ ಬಂಧಿತರು. ನಗರದ ರಾಯಲ್‌ ಸ್ಪಾ ಆ್ಯಂಡ್‌ ಸಲೂನ್‌, ಅಸ್ತೇಟಿಕ್‌ ಯೂನಿಸೆಕ್ಸ್‌ ಸೆಲೂನ್‌ ಆ್ಯಂಡ್‌ ಸ್ಪಾ, ನಿಸರ್ಗ ಆಯುರ್ವೇದಿಕ್‌ ಕ್ಲಿನಿಕ್‌ಗಳ ಮೇಲೆ ಸಿಸಿಬಿ ದಾಳಿ ನಡೆಸಿದೆ. ಕೆಲಸದ ನೆಪದಲ್ಲಿ ಯುವತಿಯರನ್ನು ಕರೆತಂದು ಅಕ್ರಮ ಚಟುವಟಿಕೆಗೆ ಬಳಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದು ಸಿಸಿಬಿಯ ಮಹಿಳಾ ಸಂರಕ್ಷಣಾ ದಳ ಕಾರ್ಯಾಚರಣೆ ನಡೆಸಿತು ಎಂದು ಅಧಿಕಾರಿಗಳು ಹೇಳಿದ್ದರು.

ದಾಳಿ ವೇಳೆ ನೇಪಾಳ(Nepal) ಹಾಗೂ ಟರ್ಕಿ(Turkey) ದೇಶದ ಇಬ್ಬರು ಮಹಿಳೆಯರು, ನಾಗಾಲ್ಯಾಂಡ್‌ನ(Nagaland) ಇಬ್ಬರು, ಅಸ್ಸಾಂನ(Assam) ಮೂವರು ಮಹಿಳೆಯರು, ದೆಹಲಿಯ ಒಬ್ಬರು, ಪಶ್ಚಿಮ ಬಂಗಾಳದ ಮೂವರು ಹಾಗೂ ಸ್ಥಳೀಯ ಇಬ್ಬರು ಮಹಿಳೆಯರನ್ನು ರಕ್ಷಿಸಲಾಗಿದೆ. ಈ ಸಂಬಂಧ 9 ಮಂದಿ ವಿರುದ್ಧ ಎಚ್‌ಎಸ್‌ಆರ್‌ ಲೇಔಚ್‌, ಅಶೋಕ ನಗರ ಹಾಗೂ ಮಡಿವಾಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದರು.

click me!