
ಬೆಂಗಳೂರು(ಅ.23): ನಗರ ವ್ಯಾಪ್ತಿಯ ವಿವಿಧೆಡೆ ವೇಶ್ಯಾವಾಟಿಕೆ ಅಡ್ಡೆಗಳ ಮೇಲೆ ಸಿಸಿಬಿ, ಸರ್ಕಾರೇತರ ಸಂಘ ಸಂಸ್ಥೆಗಳು ಹಾಗೂ ಸ್ಥಳೀಯ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ 12 ಮಂದಿ ಅಪ್ರಾಪ್ತ ಬಾಲಕಿಯರನ್ನು ರಕ್ಷಿಸಿದ್ದಾರೆ.
ಐದು ತಿಂಗಳ ಆವಧಿಯಲ್ಲಿ ನಗರ ವ್ಯಾಪ್ತಿ 11 ಕಡೆಯಲ್ಲಿ ಈ ಜಂಟಿ ದಾಳಿ ನಡೆದಿದ್ದು, ಈ ವೇಳೆ 14 ರಿಂದ 17 ವರ್ಷ ವಯಸ್ಸಿನ 12 ಅಪ್ರಾಪ್ತ ಬಾಲಕಿಯರನ್ನು ರಕ್ಷಿಸಲಾಗಿದೆ. ಸಂತ್ರಸ್ತ ಬಾಲಕಿಯರಲ್ಲಿ ವಿದೇಶದ ಮಕ್ಕಳು ಸೇರಿದ್ದಾರೆ. ಅಲ್ಲದೆ 26 ಮಂದಿ ಪಿಂಪ್‌ಗಳು ಹಾಗೂ ಐವರು ಗ್ರಾಹಕರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. ಅಪ್ರಾಪ್ತ ಬಾಲಕಿಯರನ್ನು ಸಮಾಜ ಕಲ್ಯಾಣ ಇಲಾಖೆಯ ಪುನರ್ವಸತಿ ಕೇಂದ್ರದ ಸುಪರ್ದಿಗೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಳಗಾವಿ: ಖಾನಾಪುರದ ಲಾಡ್ಜ್‌ನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ, ಐವರು ಮಹಿಳೆಯರ ರಕ್ಷಣೆ
ಮಾಹಿತಿ ನೀಡಿ
ನಗರದಲ್ಲಿ ವೇಶ್ಯಾವಾಟಿಕೆ ಬಗ್ಗೆ ಮಾಹಿತಿ ಇದ್ದರೆ ಪೊಲೀಸರಿಗೆ ನೀಡುವಂತೆ ಸಾರ್ವಜನಿಕರಲ್ಲಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಮನವಿ ಮಾಡಿದ್ದಾರೆ. ಈ ವೇಶ್ಯಾವಾಟಿಕೆ ನಡೆಯುತ್ತಿರುವುದು ಕಂಡು ಬಂದಲ್ಲಿ ಕೂಡಲೇ ಪೊಲೀಸ್ ನಿಯಂತ್ರಣ ಕೊಠಡಿ-112, ಸಿಸಿಬಿಯ ಮಹಿಳಾ ಸಂರಕ್ಷಣಾ ದಳ ಹಾಗೂ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ನಗರದಲ್ಲಿ ವೇಶ್ಯಾವಾಟಿಕೆ ಜಾಲವನ್ನು ಸಂಪೂರ್ಣವಾಗಿ ತೊಡೆದು ಹಾಕಲು ಸಹಕರಿಸ ಬೇಕೆಂದು ಆಯುಕ್ತರು ಕೋರಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ