ಬೆಂಗಳೂರು: ಸಶಸ್ತ್ರ ಮೀಸಲು ಶಸ್ತ್ರಾಗಾರಕ್ಕೆ ನುಗ್ಗಿ ಅಪರಿಚಿತ ದರ್ಪ!

Published : Feb 13, 2024, 03:39 AM IST
ಬೆಂಗಳೂರು: ಸಶಸ್ತ್ರ ಮೀಸಲು ಶಸ್ತ್ರಾಗಾರಕ್ಕೆ ನುಗ್ಗಿ ಅಪರಿಚಿತ ದರ್ಪ!

ಸಾರಾಂಶ

ನಗರದ ಉಲ್ಲಾಳ ಉಪನಗರದಲ್ಲಿನ ನಗರ ಸಶಸ್ತ್ರ ಮೀಸಲು ಪಡೆ(ಸಿಎಆರ್) ಪಶ್ಚಿಮ ಘಟಕದ ಆವರಣದಲ್ಲಿರುವ ಶಸ್ತ್ರಗಾರಕ್ಕೆ ಅತಿಕ್ರಮ ಪ್ರವೇಶ ಮಾಡಿ ಕರ್ತವ್ಯ ನಿರತ ಕಾನ್‌ಸ್ಟೇಬಲ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇರೆಗೆ ಸುಮಾರು 60-70 ಮಂದಿ ಅಪರಿಚಿತರ ವಿರುದ್ಧ ಜ್ಞಾನಭಾರತಿ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

 ಬೆಂಗಳೂರು (ಫೆ.13): ನಗರದ ಉಲ್ಲಾಳ ಉಪನಗರದಲ್ಲಿನ ನಗರ ಸಶಸ್ತ್ರ ಮೀಸಲು ಪಡೆ(ಸಿಎಆರ್) ಪಶ್ಚಿಮ ಘಟಕದ ಆವರಣದಲ್ಲಿರುವ ಶಸ್ತ್ರಗಾರಕ್ಕೆ ಅತಿಕ್ರಮ ಪ್ರವೇಶ ಮಾಡಿ ಕರ್ತವ್ಯ ನಿರತ ಕಾನ್‌ಸ್ಟೇಬಲ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇರೆಗೆ ಸುಮಾರು 60-70 ಮಂದಿ ಅಪರಿಚಿತರ ವಿರುದ್ಧ ಜ್ಞಾನಭಾರತಿ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಸಿಎಆರ್‌ ಪಶ್ಚಿಮ ಘಟಕದ ಕಾನ್‌ಸ್ಟೇಬಲ್‌ ರುದ್ರೇಶ್‌ ನಾಯ್ಕ್‌ ನೀಡಿದ ದೂರಿನ ಮೇರೆಗೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಿರುವ ಪೊಲೀಸರು, ಆರೋಪಿಗಳ ಪತ್ತೆಗೆ ಶೋಧಿಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Hubli: 11 ಜನರ ಮೇಲೆ ಪೊಲೀಸರಿಂದ ದೌರ್ಜನ್ಯ ಆರೋಪ: ಹಣಕ್ಕಾಗಿ ಕಾಯುವ ರಕ್ಷಕರೇ ರೌಡಿಗಳಂತೆ ವರ್ತಿಸಿದ್ರಾ ?

ಏನಿದು ಘಟನೆ?:
ಸಿಎಆರ್‌ ಕಾನ್‌ಸ್ಟೇಟೇಬಲ್‌ ರುದ್ರೇಶ್‌ ಅವರು ಉಲ್ಲಾಳ ಉಪನಗರದ ಸಿಎಆರ್‌ ಪಶ್ಚಿಮ ಘಟಕದ ಶಸ್ತ್ರಗಾರದಲ್ಲಿ ಫೆ.8ರಂದು ಬೆಳಗ್ಗೆ 8 ಗಂಟೆಗೆ ಕರ್ತವ್ಯಕ್ಕೆ ವರದಿ ಮಾಡಿಕೊಂಡಿದ್ದರು. ಈ ವೇಳೆ ಅಧಿಕಾರಿಗಳು ನಿಯಂತ್ರಣ ಕೊಠಡಿಯ ಪಕ್ಕದ ಶಸ್ತ್ರಗಾರದ ಬಳಿ ರುದ್ರೇಶ್‌ ಅವರನ್ನು ಕರ್ತವ್ಯಕ್ಕೆ ನಿಯೋಜಿಸಿದ್ದಾರೆ. ಬೆಳಗ್ಗೆ 10 ಗಂಟೆಗೆ ಸುಮಾರು 15-20 ಮಂದಿ ಅಪರಿಚಿತರು ಏಕಾಏಕಿ ಶಸ್ತ್ರಗಾರಕ್ಕೆ ಅತಿಕ್ರಮ ಪ್ರವೇಶ ಮಾಡಿದ್ದಾರೆ. ‘ಈಗ ಜಾಗ ನಮಗೆ ಸೇರಿದ್ದು, ಈ ಕೂಡಲೇ ನೀವು ಜಾಗ ಖಾಲಿ ಮಾಡಬೇಕು’ ಎಂದು ದರ್ಪದಿಂದ ಏರುದನಿಯಲ್ಲಿ ಹೇಳಿದ್ದಾರೆ.

ಸಮವಸ್ತ್ರ ಹಿಡಿದು ಕರ್ತವ್ಯಕ್ಕೆ ಅಡ್ಡಿ:
ಆಗ ರುದ್ರೇಶ್‌ ಅವರು ‘ನಮ್ಮ ಹಿರಿಯ ಅಧಿಕಾರಿಗಳ ಜತೆಗೆ ಮಾತನಾಡಿ. ನನ್ನ ಜತೆ ಏಕೆ ದರ್ಪದಿಂದ ಮಾತನಾಡುತ್ತಿದ್ದೀರಿ’ ಎಂದು ಪ್ರಶ್ನಿಸಿದ್ದಾರೆ. ಆಗ ಆ ಅಪರಿಚಿತರು ರುದ್ರೇಶ್‌ ಅವರ ಸಮವಸ್ತ್ರ ಹಿಡಿದು ಎಳೆದಾಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಬಳಿಕ ‘ಈ ಸ್ವತ್ತು ಇಂದಿನಿಂದ ನಮಗೆ ಸೇರಿದ್ದು. ಈ ಸ್ವತ್ತಿನ ವಿಚಾರದಲ್ಲಿ ಯಾರನ್ನೂ ಸುಮ್ಮನೆ ಬಿಡುವುದಿಲ್ಲ’ ಎಂದು ಬೆದರಿಕೆ ಹಾಕಿದ್ದಾರೆ.ಸ್ಥಳದಲ್ಲಿ ಜೆಸಿಬಿ ಯಂತ್ರ, ನೀರಿನ ಟ್ಯಾಂಕರ್‌

ಈ ವೇಳೆ ರುದ್ರೇಶ್‌ ಶಸ್ತ್ರಗಾರದಿಂದ ಹೊರಗೆ ಬಂದಾಗ, ಅಲ್ಲಿ ಸುಮಾರು 60 ಮಂದಿ ಅಪರಿಚಿತರು ಗುಂಪು ಗೂಡಿದ್ದು, ‘ಈ ಜಾಗದಲ್ಲಿ ಇದ್ದರೆ ಹಲ್ಲೆ ಮಾಡುವುದಾಗಿ’ ಬೆದರಿಸಿದ್ದಾರೆ. ಈ ಅಪರಿಚಿತರು ನಾಲ್ಕು ಜೆಸಿಬಿ ಯಂತ್ರಗಳು, ಎರಡು ಕ್ಯಾಂಟರ್‌, ಒಂದು ಲಾರಿ, ಒಂದು ನೀರಿನ ಟ್ಯಾಂಕರ್‌ ಜತೆಗೆ ಬಂದಿದ್ದರು. ಶಸ್ತ್ರಗಾರಕ್ಕೆ ಅತಿಕ್ರಮ ಪ್ರವೇಶ, ಮಾಡಿ ನನ್ನ ಮೇಲೆ ಹಲ್ಲೆ ಮಾಡಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಜೀವ ಬೆದರಿಕೆ ಹಾಕಿದ ದುಷ್ಕರ್ಮಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ರುದ್ರೇಶ್‌ ದೂರಿನಲ್ಲಿ ಕೋರಿದ್ದಾರೆ. ಈ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಶೋಧಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

ಸಂವಿಧಾನ ಜಾಥಾ ಕಾರ್ಯಕ್ರಮದಲ್ಲಿ ಜೈ ಶ್ರೀರಾಮ್ ಘೋಷಣೆ; ಪರಸ್ಪರ ಬಡಿದಾಡಿಕೊಂಡ ಎರಡು ಗುಂಪುಗಳು!

ವಿವಾದಿತ ಜಾಗದಲ್ಲಿ ಶಸ್ತ್ರಗಾರ?
ಉಲ್ಲಾಳ ಉಪನಗರದಲ್ಲಿರುವ ಪಶ್ಚಿಮ ಸಿಎಆರ್ ಆವರಣದಲ್ಲಿರುವ ಶಸ್ತ್ರಗಾರ ವಿವಾದಿತ ಸ್ಥಳದಲ್ಲಿದೆ. ಈ ಜಾಗದ ಸಂಬಂಧ ಪ್ರಕರಣ ಹೈಕೋರ್ಟ್‌ನಲ್ಲಿದೆ. ಇತ್ತೀಚೆಗೆ ಹೈಕೋರ್ಟ್ ಆರೋಪಿಗಳ ಪರವಾಗಿ ಆದೇಶ ನೀಡಿದೆ ಎನ್ನಲಾಗಿದೆ. ಹೀಗಾಗಿ ಆರೋಪಿಗಳು ಶಸ್ತ್ರಗಾರಕ್ಕೆ ನುಗ್ಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!
ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕನಿಗೆ ಪೋಷಕರಿಂದ ಧರ್ಮದೇಟು!