
ಚಾಮರಾಜನಗರ (ಆ.16): ಅಂಬೇಡ್ಕರ್ ಭವನ ನಿರ್ಮಾಣ ಮಾಡುವುದಕ್ಕೆ ಜಮೀನು ವಶಕ್ಕೆ ಪಡೆದಿದ್ದಕ್ಕೆ ಮನನೊಂದು ಮಹಿಳೆಯೋರ್ವಳು ನೇಣುಬಿಗಿದುಕೊಂಡು ಸಾವನ್ನಪ್ಪಿದ ದುರ್ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ದೊಡ್ಡ ಆಲತ್ತೂರಿನಲ್ಲಿ ನಡೆದಿದೆ.
52 ವರ್ಷದ ರಾಜಮ್ಮ ಮೃತ ಮಹಿಳೆ. ರಾಜಮ್ಮರಿಗೆ ಪಿತ್ರಾರ್ಜಿತವಾಗಿ 90 ಸೆಂಟ್ ಭೂಮಿ ಬಂದಿತ್ತು. ಇದ್ದ ಚೂರುಪಾರು ಭೂಮಿಯಲ್ಲಿ ಕುಟುಂಬ ವ್ಯವಸಾಯ ಮಾಡಿ ಜೀವನ ನಡೆಸುತ್ತಿದರು. ಕಳೆದವಾರ ಇದ್ದಕ್ಕಿದ್ದ ಹಾಗೆ ಬಂದ ಕಂದಾಯ ಇಲಾಖೆಯ ಅಧಿಕಾರಿಗಳು ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ 20 ಸೆಂಟ್ ಭೂಮಿ ವಶಪಡಿಸಿಕೊಂಡಿರುವುದಾಗಿ ಹೇಳಿದ್ದರು. ಈ ಘಟನೆಯಿಂದ ಮನನೊಂದ ರಾಜಮ್ಮ ಇಂದು ಮುಂಜಾನೆ ತಮ್ಮ ಜಮೀನಿನಲ್ಲಿ ನೇಣಿಗೆ ಶರಣಾಗಿದ್ದಾರೆ.
ರಾಜಮ್ಮರ ಶವವಿಟ್ಟು ಗ್ರಾಮಸ್ಥರು ಪ್ರತಿಭಟನೆ:
ಈ ಘಟನೆಯಿಂದ ಕುಪಿತರಾದ ಗ್ರಾಮಸ್ಥರು ರಾಜಮ್ಮರ ಶವವನ್ನಿಟ್ಟು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ.ರಾಜಮ್ಮರಿಗೆ ಪಿತ್ರಾರ್ಜಿತವಾಗಿ 90 ಸೆಂಟ್ ಜಮೀನು ಬಂದಿತ್ತು. ಈ ಚೂರುಪಾರು ಭೂಮಿಯಲ್ಲಿ ಅವರ ಕುಟುಂಬ ವ್ಯವಸಾಯ ಮಾಡಿಕೊಂಡು ಜೀವನ ಸಾಗಿಸುತ್ತಿತ್ತು. ಆದರೆ ಅಧಿಕಾರಿಗಳು ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ ರಾಜಮ್ಮರ 20 ಸೆಂಟ್ ಭೂಮಿಯನ್ನು ವಶಪಡಿಸಿಕೊಂಡಿದ್ದು ರಾಜಮ್ಮರ ಸಾವಿಗೆ ಅಧಿಕಾರಿಗಳು ಕಾರಣವೆಂದು ಆರೋಪಿಸಿರುವ ಗ್ರಾಮಸ್ಥರು, ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬರುವವರೆಗೆ ಯಾವುದೇ ಕಾರಣಕ್ಕೂ ಶವವನ್ನು ತೆಗೆಯುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಪ್ರಕರಣ ರಾಮಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ.ಈ ಘಟನೆಯಿಂದ ಗ್ರಾಮದಲ್ಲಿ ಆಕ್ರೋಶದ ವಾತಾವರಣ ಸೃಷ್ಟಿಯಾಗಿದ್ದು, ಜಿಲ್ಲಾಡಳಿತದಿಂದ ತಕ್ಷಣದ ಕ್ರಮಕ್ಕೆ ಒತ್ತಾಯವಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ