
ಕಲಘಟಗಿ(ಫೆ.17): ಪಟ್ಟಣದ ಬಸ್ ನಿಲ್ದಾಣದ ಹತ್ತಿರ ಇರುವ ಅಂಚೆ ಕಚೇರಿಗೆ ಸೋಮವಾರ ತಡರಾತ್ರಿ ಕನ್ನ ಹಾಕಿದ ಖದೀಮರು 1.40 ಲಕ್ಷ ನಗದು ಹಾಗೂ ಸಿಸಿ ಕ್ಯಾಮೆರಾ ಡಿವಿಆರ್ ಕಳ್ಳತನ ಮಾಡಿದ್ದಾರೆ.
ಅಂಚೆ ಕಚೇರಿಯ ಹಿಂಬದಿಯ ಕಿಟಕಿಯ ಕಬ್ಬಿಣದ ಸರಳುಗಳನ್ನು ಮುರಿದು ಒಳನುಗ್ಗಿ ಈ ಕಳ್ಳತನ ಮಾಡಿದ್ದಾರೆ. ಸಿಸಿ ಕ್ಯಾಮೆರಾಕ್ಕೆ ಬಟ್ಟೆ ಮುಸುಕು ಹಾಕಿ ಭದ್ರತೆಯ ಕೊಠಡಿಯಲ್ಲಿದ್ದ ಸೇಫ್ ಲಾಕರ್ ಒಡೆದು ಈ ಕಳ್ಳತನ ನಡೆಸಿದ್ದಾರೆ. ಜತೆಗೆ ಸುಳಿವು ಬಿಡಬಾರದೆಂದು ಸಿಸಿ ಟಿವಿ ಡಿವಿಆರ್ ಸಹ ಕದ್ದೊಯ್ದಿದ್ದಾರೆ.
ಪೊಲೀಸ್ ಠಾಣೆ ಪಕ್ಕದಲ್ಲೇ ವಾಸವಿದ್ದ ಎಟಿಎಂ ಕಳ್ಳ..!
ಈ ವಿಷಯ ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದ್ದು, ಸ್ಥಳಕ್ಕೆ ಜಿಲ್ಲಾ ಉಪಪೊಲೀಸ್ ವರಿಷ್ಠಾಧಿಕಾರಿ ರಾಮನಗೌಡ ಹಟ್ಟಿಹಾಗೂ ಅಂಚೆ ಕಚೇರಿಯ ಮೇಲಧಿಕಾರಿಗಳು ಬಂದು ಪರಿಶೀಲಿಸಿದರು. ಈ ಕುರಿತು ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಪಿಐ ಪ್ರಭು ಸೂರಿನ ಪ್ರಕರಣದ ತನಿಖೆ ಕೈಗೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ