
ಬೆಂಗಳೂರು(ಜೂ.13): ಹಾಸನ ಜಿಲ್ಲೆ ಜಿಪಂ ಮಾಜಿ ಸದಸ್ಯೆ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಆರು ದಿನಗಳ ಕಾಲ ವಿಶೇಷ ತನಿಖಾ ದಳ (ಎಸ್‌ಐಟಿ) ವಶಕ್ಕೆ ಪಡೆದಿದೆ.
2ನೇ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್‌ರನ್ನು ಬಂಧನಕ್ಕೊಳಪಡಿಸಿದ ಎಸ್ಐಟಿ, ಬಳಿಕ ನ್ಯಾಯಾಲಯದ ಬಾಡಿ ವಾರಂಟ್ ಮೇರೆಗೆ ಅವರನ್ನು ವಶಕ್ಕೆ ಪಡೆದಿದೆ.
ಸೆಕ್ಸ್ ಪೆನ್‌ಡ್ರೈವ್ ಹಂಚಿಕೆ ಮಹಾಪಾಪ: ಹೈಕೋರ್ಟ್ ಬೇಸರ
ಈ ಕೃತ್ಯದಲ್ಲಿ ಹಾಸನಕ್ಕೆ ಕರೆದೊಯ್ದು ಪ್ರಜ್ವಲ್ ಅವರನ್ನು ಮತ್ತೆ ಎಸ್‌ಐಟಿ ತನಿಖೆ ನಡೆಸಲಿದೆ. ಪ್ರಜ್ವಲ್ ವಿರುದ್ಧ ಮೂರು ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಈಗಾಗಲೇ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಮನೆಗೆಲಸದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್‌ರನ್ನು ಬಂಧಿಸಿದ್ದರು. ಈಗ ಜಿಪಂ ಮಾಜಿ ಸದಸ್ಯೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಅವರನ್ನು 2ನೇ ಬಾರಿಗೆ ಬಂಧಿಸಲಾಗಿದೆ. ಇನ್ನುಳಿದ ಕೆ.ಆರ್.ನಗರ ತಾಲೂಕಿನ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ ಬಾಕಿ ಉಳಿದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ