
ಮೈಸೂರು( ನ. 08) ಕಾವೇರಿ ನದಿಯಲ್ಲಿ ಫೋಟೋ ಶೂಟ್ ಮಾಡುತ್ತಿದ್ದ ವಧು-ವರ ನೀರು ಪಾಲಾಗಿದ್ದಾರೆ. ಮುಡುಕುತೊರೆ ನಿಸರ್ಗಧಾಮ ರೆಸಾರ್ಟ್ ಬಳಿ ಅವಘಡ ನಡೆದಿದೆ. ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನ ಮುಡುಕುತೊರೆಯಲ್ಲಿ ಅವಘಡ ನಡೆದಿದೆ.
ಕಾವೇರಿ ನದಿಯಲ್ಲಿ ತೆಪ್ಪದ ಮೇಲೆ ನಿಂತು ಪೋಟೋ ಶೂಟ್ ಮಾಡಲಾಗುತ್ತಿತ್ತು. ಈ ವೇಳೆ ಆಯತಪ್ಪಿ ಹುಡುಗಿ ಆಯತಪ್ಪಿ ನದಿಗೆ ಬಿದ್ದಿದ್ದಾರೆ. ಹುಡುಗಿ ಹಿಡಿಯಲು ಹೋಗಿ ಹುಡುಗ ಸಹ ನದಿಗೆ ಬಿದ್ದಿದ್ದೇನೆ. ಚಂದ್ರು (28), ಶಶಿಕಲಾ (20) ನೀರುಪಾಲಾಗಿದ್ದಾರೆ.
ಕೆಸರು ಗದ್ದೆಗೆ ಇಳಿದ ನವಜೋಡಿ.. ಪ್ರೀ ವೆಡ್ಡಿಂಗ್ ಶೂಟ್ ಅಂತೆ!
ಇಬ್ಬರೂ ಮೈಸೂರಿನ ಕ್ಯಾತಮಾರನಹಳ್ಳಿ ನಿವಾಸಿಗಳು. ಇಬ್ಬರಿಗಾಗಿ ನದಿಯಲ್ಲಿ ಶೋಧ ಕಾರ್ಯ ನಡೆಯುತ್ತಿದೆ. ಪ್ರಿವೆಡ್ಡಿಂಗ್ ಶೂಟಿಂಗ್ ವೇಳೆ ಮುಡುಕುತೊರೆ ಬಳಿ ತೆಪ್ಪ ಮಗುಚಿ ವಧು, ವರ ಸಾವು. ನ.22ರಂದು ಚಂದ್ರು, ಶಶಿಕಲಾ ಮದುವೆ ನಿಶ್ಚಯವಾಗಿತ್ತು. ತಲಕಾಡು ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಹುಡುಕಾಟ ನಡೆಸಿದ್ದು ಶವ ಪತ್ತೆಯಾಗಿದೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ