Bengaluru: ಮಹಿಳೆ ಖಾಸಗಿ ವಿಡಿಯೋ ಇಟ್ಕೊಂಡು ಕಿರುಕುಳ: ಪ್ರತಿಷ್ಠಿತ ದೇವಾಲಯದ ಅರ್ಚಕ ಅರೆಸ್ಟ್

Published : Jun 16, 2025, 09:07 AM ISTUpdated : Jun 16, 2025, 09:09 AM IST
Bellandur

ಸಾರಾಂಶ

ಬೆಂಗಳೂರು ಕ್ರೈಂ ನ್ಯೂಸ್: ಮಹಿಳೆಯ ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ದೇವಾಲಯದ ಅರ್ಚಕನನ್ನು ಬಂಧಿಸಲಾಗಿದೆ. 

ಬೆಂಗಳೂರು: ಮಹಿಳೆಯ ಖಾಸಗಿ ವಿಡಿಯೋ ಇಟ್ಕೊಂಡು ಬ್ಲಾಕ್‌ಮೇಲ್ ಮಾಡುತ್ತಿದ್ದ ದೇವಾಲಯದ ಅರ್ಚಕನನ್ನು ಬೆಳ್ಳಂದೂರು ಪೊಲೀಸುರ ಬಂಧಿಸಿದ್ದಾರೆ. ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಓರ್ವನನ್ನು ಬಂಧಿಸಿದ್ದು, ಮುಖ್ಯ ಅರ್ಚಕ ಪರಾರಿಯಾಗಿದ್ದಾನೆ. ಪರಾರಿಯಾಗಿರುವ ಅರ್ಚಕನ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ. ಬಂಧಿತ ಆರೋಪಿ ಅರುಣ್‌ ಕೇರಳದ ತ್ರಿಶೂರ್ ನ ಪ್ರತಿಷ್ಠಿತ ಪೆರಿಗೊಟ್ಟುಕ್ಕಾರ ದೇವಾಲಯದ ಅರ್ಚಕ ಎಂದು ತಿಳಿದು ಬಂದಿದೆ. ಮುಖ್ಯ ಅರ್ಚಕ ಉನ್ನಿ ದಾಮೋದರನ್ ಪರಾರಿಯಾಗಿದ್ದಾನೆ.

ಏನಿದು ಪ್ರಕರಣ?

ಪೂಜಾ (ಹೆಸರು ಬದಲಾಯಿಸಲಾಗಿದೆ) ಎಂಬ ಮಹಿಳೆ ತಮಗೆ ಮಾಟಮಂತ್ರ ಮಾಡಿಸಿದ್ದಾರೆ ಎಂದು ದೇವಸ್ಥಾನಕ್ಕೆ ತೆರಳಿದ್ದರು. ಈ ವೇಳೆ ಪೂಜಾ ಅವರಿಗೆ ದೇವಾಲಯದ ಅರ್ಚಕ ಅರುಣ್ ಪರಿಚಯ ಆಗಿದ್ದಾನೆ. 24 ಸಾವಿರ ರೂಪಾಯಿ ನೀಡಿದ್ರೆ ಪೂಜೆ ಮಾಡೋದಾಗಿ ಅರ್ಚಕ ಅರುಣ್ ಹೇಳಿದ್ದಾನೆ. ಫೋನ್ ಮಾಡಿದಾಗ ಪೂಜೆಗೆ ಬರಬೇಕೆಂದು ಅರ್ಚಕ ಅರುಣ್ ಹೇಳಿದ್ದನು. ಅರುಣ್ ಮಾತು ನಂಬಿದ ಪೂಜಾ ಆತನಿಗೆ ತಮ್ಮ ಮೊಬೈಲ್ ನಂಬರ್ ನೀಡಿದ್ದಾರೆ.

ಬೆತ್ತಲೆಯಾಗಿ ವಿಡಿಯೋ ಕಾಲ್

ಪೂಜಾ ಅವರ ನಂಬರ್ ಪಡೆದ ಅರ್ಚಕ ಅರುಣ್, ತಡರಾತ್ರಿಯಲ್ಲಿ ನಿರಂತರವಾಗಿ ವಾಟ್ಸಪ್ ಕರೆ ಮಾಡಿದ್ದಾರೆ. ರಾತ್ರಿ ಬೆತ್ತಲೆಯಾಗಿ ಪೂಜಾ ಅವರಿಗೆ ಅರ್ಚಕ ಕರೆ ಮಾಡುತ್ತಿದ್ದ ಎಂದು ಮಹಿಳೆ ಆರೋಪಿಸಿದ್ದಾರೆ. ನಿಮಗೆ ಮಾಡಿರೋ‌ ಮಾಟಮಂತ್ರ ಹೋಗಬೇಕು ಅಂದ್ರೆ ಬೆತ್ತಲಾಗುವಂತೆ ಒತ್ತಾಯಿಸುತ್ತಿದ್ದನು. ಅರ್ಚಕ ಅರುಣ್ ಬೆದರಿಕೆಯಿಂದ ಮಹಿಳೆ ವಿಡಿಯೋ ಕಾಲ್‌ನಲ್ಲಿ ಬೆತ್ತಲೆಯಾಗಿದ್ದರು. ಇದನ್ನೇ ರೆಕಾರ್ಡ್ ಮಾಡಿಕೊಂಡಿದ್ದ ಅರುಣ್, ಕರೆದಾಗಲೆಲ್ಲಾ ಕೇರಳಕ್ಕೆ ಬರಬೇಕು. ಇಲ್ಲವಾದ್ರೆ ವಿಡಿಯೋ ಲೀಕ್ ಮಾಡೋದಾಗಿ ಬೆದರಿಕೆ ಹಾಕಿದ್ದನು.

ಮಾಟಮಂತ್ರ ರಿವರ್ಸ್ ಮಾಡೋದಾಗಿ ಬೆದರಿಕೆ

ಕೇರಳಕ್ಕೆ ಬರುವಾಗ ಮುಂಚಿತವಾಗಿ ಹೇಳು ರೂಮ್ ಬುಕ್ ಮಾಡುತ್ತೇನೆ ಎಂದು ಮಹಿಳೆಗೆ ಅಸಭ್ಯವಾಗಿ ಮೆಸೇಜ್ ಕಳುಹಿಸುತ್ತಿದ್ದನು. ಅರ್ಚಕ ಅರುಣ್ ಹಿಂಸೆ ತಾಳಲಾರದೇ ಪೂಜಾ ಒಮ್ಮೆ ಕೇರಳಕ್ಕೂ ಹೋಗಿದ್ದರು. ಈ ವೇಳೆ ಮಹಿಳೆಯನ್ನು ಕಾರ್‌ನಲ್ಲಿ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಲಾಗಿದೆ. ಅರುಣ್ ಜೊತೆ ಸೇರಿ ಮುಖ್ಯ ಅರ್ಚಕ ಉನ್ನಿ ದಾಮೋದರ್ ಸಹ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ. ಹೇಳಿದಂತೆ ಕೇಳದಿದ್ದರೆ ಮಾಟಮಂತ್ರವನ್ನು ನಿನ್ನ ಮಕ್ಕಳಿಗೆ ರಿವರ್ಸ್ ಆಗುವಂತೆ ಮಾಡುತ್ತೆ ಎಂದು ಹೆದರಿಸಿದ್ದಾರೆ.

ಅರುಣ್ ಬಂಧನ, ಓರ್ವ ಎಸ್ಕೇಪ್

ಅರುಣ್ ಮತ್ತು ಮುಖ್ಯ ಅರ್ಚಕ ಉನ್ನಿ ದಾಮೋದರ್ ಕಿರುಕುಳದಿಂದ ಬೇಸತ್ತ ಪೂಜಾ, ಬೆಂಗಳೂರಿನ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ದೂರು ದಾಖಲಿಸಿದ್ದಾರೆ. ಎಫ್‌ಐಆರ್ ದಾಖಲಿಸಿಕೊಂಡ ಪೊಲೀಸರು ಓರ್ವನನ್ನು ಬಂಧಿಸಿದ್ದು, ಮತ್ತೊಬ್ಬನಿಗಾಗಿ ಬಲೆ ಬೀಸಿದ್ದಾರೆ.

ಪರೋಪಕಾರಿ ಕಳ್ಳ: 20 ಮಕ್ಕಳ ಸ್ಕೂಲ್‌ ಫೀಜ್‌

ಮನೆಗಳವು ಮಾಡಿ ಸಂಪಾದಿಸಿದ ಹಣದಲ್ಲಿ ತನ್ನ ಸ್ನೇಹಿತರಿಗೆ ಆಟೋ ಹಾಗೂ 20 ಮಕ್ಕಳ ವಿದ್ಯಾಭ್ಯಾಸಕ್ಕಾಗಿ 14 ಲಕ್ಷ ರು.ಗಳನ್ನು ನೆರವು ನೀಡಿದ್ದ ‘ಆಧುನಿಕ ರಾಬಿನ್‌ಹುಡ್’ ಹಾಗೂ ಆತನ ಇಬ್ಬರು ಸಹಚರರು ಈಗ ಸೆಂಟ್ರಲ್‌ ಜೈಲು ಸೇರಿದ್ದಾರೆ. ಬೆಂಗಳೂರಿನ ಬೇಗೂರು ನಿವಾಸಿ ಶಿವರಸನ್ ಅಲಿಯಾಸ್ ಶಿವು, ಆತನ ಸಹಚರರಾದ ಅನಿಲ್ ಅಲಿಯಾಸ್ ಜಗ್ಗ ಹಾಗೂ ವಿವೇಕಾನಂದ ಅಲಿಯಾಸ್ ಬಂಧಿತರಾಗಿದ್ದು, ಆರೋಪಿಗಳಿಂದ 24 ಲಕ್ಷ ರು. ಮೌಲ್ಯದ ಚಿನ್ನಾಭರಣ ಹಾಗೂ ಆಟೋ ಜಪ್ತಿ ಮಾಡಲಾಗಿದೆ.

ಕೆಲ ದಿನಗಳ ಹಿಂದೆ ಬ್ಯಾಡರಹಳ್ಳಿ ಸಮೀಪದ ಮನೆಯಲ್ಲಿ ಕಳ್ಳತನವಾಗಿತ್ತು. ಈ ಬಗ್ಗೆ ತನಿಖೆಗಿಳಿದ ಪೊಲೀಸರು, ತಾಂತ್ರಿಕ ಮಾಹಿತಿ ಆಧರಿಸಿ ಶಿವು ಗ್ಯಾಂಗ್ ಅನ್ನು ಸೆರೆ ಹಿಡಿದು ವಿಚಾರಣೆಗೊಳಪಡಿಸಿದಾಗ ಆತನ ಪರೋಪಕಾರಿ ಅವತಾರ ಬಯಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!
ಕೆಲಸ ಇಲ್ಲದ ಗಂಡನಿಗೆ ಪತ್ನಿ ಶೀಲದ ಮೇಲೆ ಶಂಕೆ: ನಿದ್ರೆಯಲ್ಲಿದ್ದ ಮಗಳ ಕತ್ತು ಸೀಳಿದ ಪತಿ