ಬೆಂಗಳೂರು: 10ನೇ ತರಗತಿಗೆ ತೇರ್ಗಡೆಗೆ ಲಂಚ: ಪ್ರಾಂಶುಪಾಲ ಪೊಲೀಸರ ಬಲೆಗೆ

By Kannadaprabha News  |  First Published Jun 1, 2023, 1:54 PM IST

ರಾಜಾಜಿನಗರದ ಬಸವೇಶ್ವರ ಪ್ರೌಢಶಾಲೆ ಅನುದಾನಿತ ಶಾಲೆಯ ಪ್ರಾಂಶುಪಾಲ ವಿ.ನಾರಾಯಣ ಪೊಲೀಸರ ಬಂಧನಕ್ಕೊಳಗಾಗಿದ್ದಾರೆ. ನಂದೀಶ್‌ ಎಂಬ ವಿದ್ಯಾರ್ಥಿಯ ತಾಯಿ ದಿವ್ಯಾ ನೀಡಿದ ದೂರಿನ ಮೇರೆಗೆ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ಕೈಗೊಂಡು ಬಂಧಿಸಿ ಕ್ರಮ ಕೈಗೊಂಡಿದ್ದಾರೆ.

ಬೆಂಗಳೂರು(ಜೂ.01): ವಿದ್ಯಾರ್ಥಿಯೊಬ್ಬನಿಗೆ ವರ್ಗಾವಣೆ ಪತ್ರ ನೀಡಲು ಮತ್ತು 10ನೇ ತರಗತಿಗೆ ತೇರ್ಗಡೆ ಮಾಡಲು .5 ಸಾವಿರ ಲಂಚ ಸ್ವೀಕರಿಸುತ್ತಿದ್ದ ನಗರದ ಬಸವೇಶ್ವರ ಪ್ರೌಢಶಾಲೆಯ ಪ್ರಾಂಶುಪಾಲ ಲೋಕಾಯುಕ್ತ ಪೊಲೀಸರ ಬಲೆಗೆ ಸಿಕ್ಕಿದಿದ್ದಾರೆ.

ರಾಜಾಜಿನಗರದ ಬಸವೇಶ್ವರ ಪ್ರೌಢಶಾಲೆ ಅನುದಾನಿತ ಶಾಲೆಯ ಪ್ರಾಂಶುಪಾಲ ವಿ.ನಾರಾಯಣ ಪೊಲೀಸರ ಬಂಧನಕ್ಕೊಳಗಾಗಿದ್ದಾರೆ. ನಂದೀಶ್‌ ಎಂಬ ವಿದ್ಯಾರ್ಥಿಯ ತಾಯಿ ದಿವ್ಯಾ ನೀಡಿದ ದೂರಿನ ಮೇರೆಗೆ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ಕೈಗೊಂಡು ಬಂಧಿಸಿ ಕ್ರಮ ಕೈಗೊಂಡಿದ್ದಾರೆ.

Tap to resize

Latest Videos

ಗಂಡನ ಬಿಟ್ಟು ಸೋಷಿಯಲ್ ಮೀಡಿಯಾ ಫ್ರೆಂಡ್ ಹಿಂದೆ ಹೋದ ಸುಂದರಿ, ಹೆಣವಾಗಿ ಸಿಕ್ಕಳು!

ನಂದೀಶ್‌ ಒಂಭತ್ತನೇ ತರಗತಿ ವಿದ್ಯಾರ್ಥಿಯಾಗಿದ್ದು, ಆತನ ವರ್ಗಾವಣೆ ಪತ್ರ ನೀಡಲು ಮತ್ತು 10ನೇ ತರಗತಿಗೆ ತೇರ್ಗಡೆ ಮಾಡುವ ಸಂಬಂಧ ಬಂಧಿತ ಆರೋಪಿ 5 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಲಂಚ ನೀಡಲು ಇಷ್ಟವಿಲ್ಲದ ಕಾರಣ ದೂರುದಾರರಾದ ದಿವ್ಯಾ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನ ಮೇರೆಗೆ ಉಪ ಪೊಲೀಸ್‌ ವರಿಷ್ಠಾಧಿಕಾರಿ ಬಸವರಾಜ ಮಗದುಮ್‌ ನೇತೃತ್ವದ ತಂಡವು ಕಾರ್ಯಾಚರಣೆ ಕೈಗೊಂಡು ಲಂಚ ಸ್ವೀಕರಿಸುತ್ತಿದ್ದ ವೇಳೆ ಆರೋಪಿಯನ್ನು ಬಂಧಿಸಿ ಭ್ರಷ್ಟಾಚಾರ ನಿಗ್ರಹ ತಡೆ ಕಾಯ್ದೆಯನ್ವಯ ಕ್ರಮ ಕೈಗೊಳ್ಳಲಾಗಿದೆ.

click me!