ಕುಟುಂಬಸ್ಥರು ಜಾಮೀನು ಕೊಡಿಸಿ ಬಿಡಿಸದ್ದಕ್ಕೆ ಜೈಲಲ್ಲೇ ವ್ಯಕ್ತಿ ಆತ್ಮಹತ್ಯೆ

Published : May 17, 2022, 05:56 AM IST
ಕುಟುಂಬಸ್ಥರು ಜಾಮೀನು ಕೊಡಿಸಿ ಬಿಡಿಸದ್ದಕ್ಕೆ ಜೈಲಲ್ಲೇ ವ್ಯಕ್ತಿ ಆತ್ಮಹತ್ಯೆ

ಸಾರಾಂಶ

*  ದರೋಡೆ ಕೇಸ್‌ನಲ್ಲಿ ಜೈಲು ಸೇರಿದ್ದ ಮನೋಜ್‌ *  ಶೌಚಾಲಯದಲ್ಲಿ ನೇಣು * ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆದ ಘಟನೆ   

ಬೆಂಗಳೂರು(ಮೇ.17):  ದರೋಡೆಗೆ(Robbery) ಯತ್ನ ಪ್ರಕರಣದಲ್ಲಿ ಜೈಲು ಸೇರಿದ್ದ ವಿಚಾರಣಾಧೀನ ಕೈದಿಯೊಬ್ಬ ಜೈಲಿನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟನೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ.

ಆಜಾದ್‌ ನಗರದ ಮನೋಜ್‌ ಅಲಿಯಾಸ್‌ ಹೂವಾ (22) ಆತ್ಮಹತ್ಯೆ ಮಾಡಿಕೊಂಡವನು. ಸೋಮವಾರ ಬೆಳಗ್ಗೆ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದ 8ನೇ ಬ್ಯಾರಕ್‌ನ ಶೌಚಾಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು ಬಿಜೆಪಿ ಮುಖಂಡ ಆತ್ಮಹತ್ಯೆಗೆ ಬಿಗ್ ಟ್ವಿಸ್ಟ್, ಡೆತ್​ನೋಟ್​ನಲ್ಲಿ ಹೆಣ್ಣಿನ ರಹಸ್ಯ ಬಯಲು

ಚಾಮರಾಜಪೇಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಇತ್ತೀಚೆಗೆ ದರೋಡೆಗೆ ಯತ್ನ ಪ್ರಕರಣದಲ್ಲಿ ಚಾಮರಾಜಪೇಟೆ ಠಾಣೆ ಪೊಲೀಸರು(Police) ಮನೋಜ್‌ ಸೇರಿದಂತೆ ಐವರನ್ನು ಬಂಧಿಸಿ ಜೈಲಿಗಟ್ಟಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಜೈಲು(Jail) ಸೇರಿದ ಬಳಿಕ ಮನೆಯವರು ಜಾಮೀನು ನೀಡಿ ಬಿಡಿಸುತ್ತಾರೆ ಎಂದು ಮನೋಜ್‌ ಭಾವಿಸಿದ್ದ. ಆದರೆ, ಜೈಲು ಸೇರಿ 15 ದಿನ ಕಳೆದರೂ ಮನೆಯವರು ಸಂಪರ್ಕ ಮಾಡಲಿಲ್ಲ. ಹೀಗಾಗಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮನೋಜ್‌ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಪರಪ್ಪನ ಅಗ್ರಹಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?
ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ