
ವಿಜಯಪುರ (ಜೂ.14): ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಸಾಂಗವಿ ಬಾರ್ ಅಂಡ್ ಲಾಡ್ಜ್‌ನಲ್ಲಿ ಇಬ್ಬರು ಮಹಿಳೆಯರನ್ನು ಅಕ್ರಮವಾಗಿ ಇಟ್ಟುಕೊಂಡು ಹಾಡುಹಗಲೇ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇಲೆ ಮುದ್ದೇಬಿಹಾಳ ಶಹರ ಪೊಲೀಸರು ಯಶಸ್ವಿ ದಾಳಿ ನಡೆಸಿದ ಘಟನೆ ನಡೆದಿದೆ.
ಸಿಪಿಐ ಮಹಮ್ಮದ್ ಫಸಿವುದ್ದೀನ್ ಮತ್ತು ಪಿಎಸ್‌ಐ ಸಂಜಯ ತಿಪ್ಪಾರೆಡ್ಡಿ ನೇತೃತ್ವದಲ್ಲಿ ನಡೆದ ಈ ದಾಳಿಯಲ್ಲಿ ಬಾಗಲಕೋಟೆ ಮತ್ತು ಚಿಕ್ಕಮಗಳೂರು ಮೂಲದ ಇಬ್ಬರು ಮಹಿಳೆಯರನ್ನು ರಕ್ಷಿಸಲಾಗಿದೆ.
ದಾಳಿಯ ಸಂದರ್ಭದಲ್ಲಿ ಕೆಲವು ಶಂಕಿತರನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು, ಪ್ರಕರಣದ ತನಿಖೆ ಮುಂದುವರೆದಿದೆ. ಪೊಲೀಸರು ಈ ದಂಧೆಯ ಹಿಂದಿನ ರೂವಾರಿಗಳನ್ನು ಪತ್ತೆಹಚ್ಚಲು ತೀವ್ರ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮುಂದಿನ ಕಾನೂನು ಕ್ರಮಕ್ಕಾಗಿ ಪರಿಶೀಲನೆ ನಡೆಯುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ