ಬೆಳಗಾವಿ: ವೇಶ್ಯಾವಾಟಿಕೆಯಲ್ಲಿ ಸಿಲುಕಿದ್ದ ಯುವತಿ, ಪಾಲಕರ ಮಡಿಲು ಸೇರಿಸಿದ ಪೊಲೀಸರು

Asianet Kannada   | Asianet News
Published : Feb 24, 2021, 11:41 AM IST
ಬೆಳಗಾವಿ: ವೇಶ್ಯಾವಾಟಿಕೆಯಲ್ಲಿ ಸಿಲುಕಿದ್ದ ಯುವತಿ, ಪಾಲಕರ ಮಡಿಲು ಸೇರಿಸಿದ ಪೊಲೀಸರು

ಸಾರಾಂಶ

ಹೈಟೆಕ್ ವೇಶ್ಯಾವಾಟಿಕೆ ಜಾಲದ ಮೇಲೆ ದಾಳಿ ಮಾಡಿದ್ದ ಬೆಳಗಾವಿ ಪೊಲೀಸರು| ದಾಳಿ ವೇಳೆ ಇಬ್ಬರು ಯುವತಿಯರನ್ನು ರಕ್ಷಿಸಿದ್ದ ಪೊಲೀಸರು| ಯುವತಿಯನ್ನು ಆಕೆಯ ಪೋಷಕರ ಮಡಿಲು ಸೇರುವಂತೆ ಮಾಡಿದ ಆರಕ್ಷಕರು| 

ಬೆಳಗಾವಿ(ಫೆ.24): ಕಿಡ್ನಾಪ್ ಆಗಿ ವೇಶ್ಯಾವಾಟಿಕೆಯಲ್ಲಿ ಸಿಲುಕಿಕೊಂಡಿದ್ದ ಯುವತಿಯೊಬ್ಬಳನ್ನ ರಕ್ಷಿಸಿ ಮರಳಿ ಪಾಲಕರ ಮಡಿಲು ಸೇರಿಸಿದ ಘಟನೆ ಇಂದು(ಬುಧವಾರ) ನಗರದ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ನಡೆದಿದೆ.

ಫೆ.7ರಂದು ಸದಾಶಿವನಗರದ ಮನೆಯೊಂದರಲ್ಲಿ ನಡೆಯುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ಜಾಲದ ಮೇಲೆ ಬೆಳಗಾವಿ ಪೊಲೀಸರು ದಾಳಿ ಮಾಡಿದ್ದರು. ಈ ವೇಳೆ ಇಬ್ಬರು ಯುವತಿಯರನ್ನು ಪೊಲೀಸರು ರಕ್ಷಿಸಿದ್ದರು. ಎಪಿಎಂಸಿ ಠಾಣೆ‌ ಸಿಪಿಐ ಜಾವೇದ್ ಮುಷಾಪುರೆ ನೇತೃತ್ವದಲ್ಲಿ ನಡೆದಿದ್ದ ದಾಳಿ ಸಂದರ್ಭದಲ್ಲಿ ರಕ್ಷಿಸಿದ್ದ  ಇಬ್ಬರು ಯುವತಿಯರನ್ನು ಮಹಿಳಾ ಸಾಂತ್ವನ ಕೇಂದ್ರಕ್ಕೆ ಶಿಫ್ಟ್ ಮಾಡಲಾಗಿತ್ತು. ವಿಚಾರಣೆ ವೇಳೆ ಓರ್ವ ಯುವತಿಯ ವಿಳಾಸವನ್ನ ಪೊಲೀಸರು ಪತ್ತೆ ಹಚ್ಚಿದ್ದರು. 

ಭಾರತೀಯ ನೌಕಾಪಡೆ ಅಧಿಕಾರಿಯ ಕಿಡ್ನಾಪ್, 10 ಲಕ್ಷ ರೂ ನೀಡದ ಕಾರಣ ಹತ್ಯೆ!

2017ರಲ್ಲಿ ಈ ಯುವತಿ ಅಪಹರಣವಾಗಿದ್ದ ಬಗ್ಗೆ ಕೇಸ್ ದಾಖಲಾಗಿದ್ದರ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಈ ದೂರಿನ ಆಧಾರದ ಮೇಲೆ ಯುವತಿಯನ್ನು ಆಕೆಯ ಪೋಷಕರ ಮಡಿಲು ಸೇರುವಂತೆ ಮಾಡಿದ್ದಾರೆ. ಇಂತಹ ಅಪರೂಪದ ಘಟನೆಗೆ ಸಾಕ್ಷಿಯಾದ ಎಪಿಎಂಸಿ ಪೊಲೀಸರು, ಮಹಿಳಾ ಸಾಂತ್ವನ ಕೇಂದ್ರದ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ