ಸೈನ್ಸ್ ಓದಲು ಇಷ್ಟವಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಪಿಯುಸಿ ವಿದ್ಯಾರ್ಥಿನಿ ನೇಣಿಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ನಾಗರಬೆಟ್ಟ ಗ್ರಾಮದ ಖಾಸಗಿ ಕಾಲೇಜಿನಲ್ಲಿ ನಡೆದಿದೆ.
ವಿಜಯಪುರ (ಜ.23): ಸೈನ್ಸ್ ಓದಲು ಇಷ್ಟವಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಪಿಯುಸಿ ವಿದ್ಯಾರ್ಥಿನಿ ನೇಣಿಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ನಾಗರಬೆಟ್ಟ ಗ್ರಾಮದ ಖಾಸಗಿ ಕಾಲೇಜಿನಲ್ಲಿ ನಡೆದಿದೆ.
ಪದ್ಮಾವತಿ ಸಂಜಯ ಮೇಟಿ(Padmavati sanjay meti) (17) ನೇಣಿಗೆ ಶರಣಾದ ವಿದ್ಯಾರ್ಥಿನಿ. ನಾಗರಬೆಟ್ಟದ ಆಕ್ಸಫರ್ಡ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ (PUC) ಸೈನ್ಸ್ ಓದುತ್ತಿದ್ದಳು. ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ಕೋಲ ಮಾಪುರ ಮೂಲದವರಾಗಿರುವ ಪದ್ಮಾವತಿ, ಡೆತ್‍ನೋಟ್ ಬರೆದಿಟ್ಟು ವಸತಿ ನಿಲಯದ ಶೌಚಾಲಯದಲ್ಲಿ ನೇಣಿಗೆ ಶರಣಾಗಿದ್ದಾಳೆ.
7ನೇ ಮಹಡಿಯಿಂದ ಜಿಗಿದು ಎಲ್‌ಎಲ್‌ಬಿ ವಿದ್ಯಾರ್ಥಿನಿ ಆತ್ಮಹತ್ಯೆ!
ನನ್ನ ಸಾವಿಗೆ ನಾನೇ ಕಾರಣ. ನನಗೆ ಸೈನ್ಸ್ ಓದಲು ಇಷ್ಟವಿಲ್ಲ. ಪರೀಕ್ಷೆಯಲ್ಲಿ ಕಡಿಮೆ ಅಂಕ ಬರಲಿವೆ. ಆದ್ದರಿಂದ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದಿರುವ ವಿದ್ಯಾರ್ಥಿನಿ. ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ತಿಳಿದು ಸ್ಥಳಕ್ಕೆ ಮುದ್ದೇಬಿಹಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ.