ಪಿಯುಸಿ ಫೇಲ್ ಆಗಿದ್ದಕ್ಕೆ ಗೆಳತಿ ಸಾವು: ಸಾವಿನ ಸುದ್ದಿ ಕೇಳಿ ಇವಳೂ ಆತ್ಮಹತ್ಯೆಗೆ ಯತ್ನ!

Published : Apr 27, 2023, 12:37 PM ISTUpdated : Apr 27, 2023, 12:40 PM IST
ಪಿಯುಸಿ ಫೇಲ್ ಆಗಿದ್ದಕ್ಕೆ ಗೆಳತಿ ಸಾವು: ಸಾವಿನ ಸುದ್ದಿ ಕೇಳಿ ಇವಳೂ ಆತ್ಮಹತ್ಯೆಗೆ ಯತ್ನ!

ಸಾರಾಂಶ

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣವಾಗಿದ್ದಕ್ಕೆ ಮನನೊಂದು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡು ಸಾವಿಗೆ ಶರಣಾಗಿದ್ದು,ತನ್ನ ಗೆಳತಿಯ ಸಾವಿನ ಸುದ್ದಿ ತಿಳಿದು ಅನುತ್ತೀರ್ಣಳಾಗಿದ್ದ ಮತ್ತೋರ್ವ ವಿದ್ಯಾರ್ಥಿನಿಯು ವಿಷ ಸೇವಿಸಿ ಸಾವು ಬದುಕಿನ ನಡುವೆ ಹೋರಾಡುತ್ತಿರುವ ಘಟನೆ ಕಳಸ ತಾಲೂಕಿನಲ್ಲಿ ಬುಧವಾರ ನಡೆದಿದೆ.

ಚಿಕ್ಕಮಗಳೂರು (ಏ.27) : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣವಾಗಿದ್ದಕ್ಕೆ ಮನನೊಂದು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡು ಸಾವಿಗೆ ಶರಣಾಗಿದ್ದು,ತನ್ನ ಗೆಳತಿಯ ಸಾವಿನ ಸುದ್ದಿ ತಿಳಿದು ಅನುತ್ತೀರ್ಣಳಾಗಿದ್ದ ಮತ್ತೋರ್ವ ವಿದ್ಯಾರ್ಥಿನಿಯು ವಿಷ ಸೇವಿಸಿ ಸಾವು ಬದುಕಿನ ನಡುವೆ ಹೋರಾಡುತ್ತಿರುವ ಘಟನೆ ಕಳಸ ತಾಲೂಕಿನಲ್ಲಿ ಬುಧವಾರ ನಡೆದಿದೆ.

ಕಳಸ ಸರ್ಕಾರಿ ಪದವಿಪೂರ್ವ ಕಾಲೇಜಿ(Kalasa govt pu collage)ನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಸಮೀಪದ ಎಸ್‌.ಕೆ. ಮೇಗಲ್‌ ಗ್ರಾಮ(SK Megal village)ದ ಚಂದ್ರರಾಜಯ್ಯ ಎಂಬುವವರ ಪುತ್ರಿ ಸ್ಪರ್ಶ ವಿಷ ಸೇವಿಸಿ ಆತ್ಮಹತ್ಯೆ(Suicide)ಗೆ ಶರಣಾಗಿದ್ದಾರೆ.

ಅದೇ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಜಾಂಬ್ಳೆ ಗ್ರಾಮ(Jamble village)ದ ಸವಿತಾ ಎಂಬುವವರ ಪುತ್ರಿ ದೀಕ್ಷಿತ ಸ್ಪರ್ಶ ಸಾವಿನ ಸುದ್ದಿ ಕೇಳಿ, ಆತ್ಮಹತ್ಯೆಗೆ ಯತ್ನಿಸಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಿಇಟಿ ತಯಾರಿಯಲ್ಲಿದ್ದ ವಿದ್ಯಾರ್ಥಿನಿ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಆತ್ಮಹತ್ಯೆ!

ಜೀವಶಾಸ್ತ್ರ ವಿಭಾಗದಲ್ಲಿ ಅನುತ್ತೀರ್ಣಗಳಾಗಿದ್ದ ಸ್ಪರ್ಶ ಏ.21 ರಂದು ಮನೆಯಲ್ಲಿ ವಿಷ ಸೇವಿಸಿ ತನ್ನ ತಂದೆಗೆ ತಿಳಿಸಿದ್ದಳು. ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಬೆಳಿಗ್ಗೆ ಮೃತಪಟ್ಟಿದ್ದಾಳೆ. ಗೆಳತಿ ಸ್ಪರ್ಶ ಸಾವಿನ ಸುದ್ದಿ ತಿಳಿದು ದೀಕ್ಷಿತ ಮನೆಯಲ್ಲಿದ್ದ ಕಳೆನಾಶಕ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. 

ದೀಕ್ಷಿತ ಸಹ ಅನುತ್ತೀರ್ಣಳಾಗಿದ್ದು ಮರುಪರೀಕ್ಷೆಗೆ ಕಟ್ಟಿಬಂದಿದ್ದಳು ಎಂದು ತಿಳಿದು ಬಂದಿದೆ. ಆದರೆ ಬುಧವಾರ ಮಧ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ವಿಷ ಸೇವಿಸಿದ್ದು ತೀವ್ರ ಅಸ್ವಸ್ಥಳಾಗಿದ್ದು, ವಿಷಯ ತಿಳಿದ ಪೋಷಕರು ಮಂಗಳೂರಿನ ಆಸ್ಪತ್ರೆಗೆ ರವಾನಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ನಾನು ಸತ್ತ ಮೇಲಾದ್ರೂ ಕಾಮ ಪಿಶಾಚಿಗಳನ್ನು ಶಿಕ್ಷಿಸಿ ಎಂದು ಡೆತ್‌ನೋಟ್‌ ಬರೆದು ಆತ್ಮಹತ್ಯೆ ಮಾಡ್ಕೊಂಡ ವಿದ್ಯಾರ್ಥಿನಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!