Hassan ಕಾಲೇಜು ವಿದ್ಯಾರ್ಥಿ ಹಾಸ್ಟೆಲ್‌ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ, ವಾರ್ಡನ್‌ ಕಾರಣವೆಂದು ಪೋಷಕರ ದಾಂಧಲೆ

By Suvarna News  |  First Published Feb 22, 2024, 1:13 PM IST

ಹಾಸನ ಜಿಲ್ಲೆಯ ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಯೊರ್ವನ ಶವ  ನೇಣುಬಿಗಿದ ಸ್ಥಿತಿಯಲ್ಲಿ  ಪತ್ತೆಯಾಗಿದೆ. ವಿದ್ಯಾರ್ಥಿ ಸಾವಿಗೆ ಹಾಸ್ಟೆಲ್ ವಾರ್ಡನ್ ಕಾರಣ ಎಂದು ಆರೋಪಿಸಲಾಗಿದ್ದು, ವಿದ್ಯಾರ್ಥಿಯ ಪೋಷಕರು ಬಂದು ದಾಂಧಲೆ ನಡೆಸಿದ್ದಾರೆ.


ಹಾಸನ (ಫೆ.22): ಹಾಸನ ಜಿಲ್ಲೆಯ ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಯೊರ್ವನ ಶವ  ನೇಣುಬಿಗಿದ ಸ್ಥಿತಿಯಲ್ಲಿ  ಪತ್ತೆಯಾಗಿದೆ. ಖಾಸಗಿ ಕಾಲೇಜಿನಲ್ಲಿ ದ್ವೀತಿಯ ಪಿಯುಸಿ ವಿಜ್ಞಾನ ವಿಭಾಗ ಓದುತ್ತಿದ್ದ ವಿದ್ಯಾರ್ಥಿ  ವಿಕಾಶ್(18) ಎಂಬಾತನ ಶವ ಕಾಲೇಜಿನ ಹಾಸ್ಟೆಲ್‌ನಲ್ಲಿ ಪತ್ತೆಯಾಗಿದ್ದು,  ಹಾಸನ ನಗರದ ಉದಯಗಿರಿಯಲ್ಲಿರುವ ಮಾಸ್ಟರ್ ಪಿಯು ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಘಟನೆ ನಡೆದಿದೆ. ವಿದ್ಯಾರ್ಥಿ ಸಾವಿಗೆ ಹಾಸ್ಟೆಲ್ ವಾರ್ಡನ್ ಕಾರಣ ಎಂದು ಆರೋಪಿಸಲಾಗಿದ್ದು, ವಿದ್ಯಾರ್ಥಿಯ ಪೋಷಕರು ಬಂದು ದಾಂಧಲೆ ನಡೆಸಿದ್ದಾರೆ.

ಬೆಂಗಳೂರಲ್ಲಿ ಕೆಲಸ ಹುಡುಕುತ್ತಿರೋ ಯುವಕರೇ ಇವರ ಟಾರ್ಗೆಟ್, ಸರ್ಕಾರಿ ನೌಕರಿ ಹೆಸರಲ್ಲಿ ಕೋಟ್ಯಾಂತರ ವಂಚನೆ!

Tap to resize

Latest Videos

ಚನ್ನರಾಯಪಟ್ಟಣ ತಾಲ್ಲೂಕು, ಬೆಳಗುಲಿ ಗ್ರಾಮದ ಸುರೇಶ್, ಮಮತಾ ದಂಪತಿ ಏಕೈಕ ಪುತ್ರ ವಿಕಾಸ್ ಮಾಸ್ಟರ್ ಕಾಲೇಜಿನಲ್ಲಿ ದ್ವೀತಿಯ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ. ಇಂದು ಕಾಲೇಜಿಗೆ ತೆರಳಿ ನಂತರ ಒಬ್ಬನೇ ಹಾಸ್ಟೆಲ್‌ಗೆ ಮರಳಿ ಬಂದಿದ್ದ. ಹಾಸ್ಟೆಲ್‌ಗೆ ವಾಪಸ್ ಬಂದ ಬಳಿಕ ವಿದ್ಯಾರ್ಥಿ ಸಾವಾಗಿದೆ.

ಬೆಟ್ಟಿಂಗ್‌ ಜತೆ ಹೆಣ್ಣಿನ ಚಟ, ಹಗಲು ದರೋಡೆಗಿಳಿದ ಬೆಂಗಳೂರು ರಿಯಲ್‌ ಎಸ್ಟೇಟ್‌ ಉದ್ಯಮಿ ಉದ್ಯೋಗಸ್ಥರೇ ಟಾರ್ಗೆಟ್‌!

ಘಟನೆ ವಿಚಾರ ತಿಳಿದ ತಕ್ಷಣ ಕಾಲೇಜಿನ ಆಡಳಿತ ಮಂಡಳಿ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿ ಸಾವಿಗೆ ಹಾಸ್ಟೆಲ್ ವಾರ್ಡನ್ ಕಾರಣ ಎಂದು ಆರೋಪಿಸಿ ದಾಂಧಲೆ ನಡೆಸಿದ್ದಾರೆ. ಪುತ್ರನ ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹಾಸನ ಖಾಸಗಿ ಕಾಲೇಜು ಅದೀನದ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಟೆಲ್ ಹಾಗು ಕಾಲೇಜು ಆಡಳಿತ ಮಂಡಳಿ ವಿರುದ್ಧ ಕುಟುಂಬ ಸದಸ್ಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಡಳಿತ ಮಂಡಳಿ ಪ್ರಮುಖರು ಬರೋ ವರೆಗೆ ಮೃತದೇಹ ತೆಗೆಯಲು ಬಿಡಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಪೊಲೀಸರ ಜೊತೆಗೂ ಸಂಬಂಧಿಕರು ವಾಗ್ವಾದ ನಡೆಸಿದ್ದಾರೆ. ಕೂಡಲೇ ಆಡಳಿತ ಮಂಡಳಿಯವರು ಬರಬೇಕು ಎಂದು ಒತ್ತಾಯಿಸಿದ್ದಾರೆ. ಘಟನೆ ನಡೆದು ಮೂರು ಗಂಟೆಯಾದರೂ  ಆಡಳಿತ ಮಂಡಳಿಯರು ಇನ್ನೂ ಬಂದಿಲ್ಲ ಎಂದು ಕಿಡಿಕಾರಿದ್ದು ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಪರಿಸ್ಥಿತಿ ನಿಭಾಯಿಸಲು ಪೊಲೀಸರ ಹರಸಾಹಸ ಪಟ್ಟಿದ್ದಾರೆ. ಮತ್ತೊಂದೆಡೆ ಹಾಸನ ಆಡಳಿತ ಮಂಡಳಿ ಪರವಾಗಿ ಮಾತನಾಡಿದ್ದಾರೆಂದು ಆರೋಪಿಸಿ ವ್ಯಕ್ತಿಯನ್ನು ಸುತ್ತುವರೆದು ಹಲ್ಲೆ ನಡೆಸಲು ಯತ್ನಿದಸಲಾಗಿದೆ. ಕೂಡಲೆ ಎಚ್ಚೆತ್ತು ಸ್ಥಳದಿಂದ ವ್ಯಕ್ತಿ ಯನ್ನು ಕರೆದೊಯ್ದರು. ಈ ವೇಳೆ ಪೊಲೀಸ್ ಜೀಪ್ ಸುತ್ತು ವರೆದು ಆಕ್ರೋಶ ಹೊರಹಾಕಿದ್ದಾರೆ.

click me!