ಪುಷ್ಪಾ -2 ಕಾಲ್ತುಳಿತ : ನಟ ಅಲ್ಲು ಅರ್ಜುನ್‌ ಆರೋಪಿ ನಂ.11

Kannadaprabha News   | Kannada Prabha
Published : Dec 28, 2025, 04:17 AM IST
allu arjun

ಸಾರಾಂಶ

ಕಳೆದ ವರ್ಷದ ಡಿ.4ರಂದು ಪುಷ್ಪಾ - 2 ಪ್ರೀಮಿಯರ್‌ ಶೋ ವೇಳೆ ಸಂಭವಿಸಿದ ಕಾಲ್ತುಳಿತ ಮತ್ತು ಮಹಿಳೆ ಸಾವಿನ ಪ್ರಕರಣದಲ್ಲಿ ಪ್ರಕರಣದಲ್ಲಿ ಪೊಲೀಸರು ಆರೋಪಪಟ್ಟಿ ಸಲ್ಲಿಸಿದ್ದಾರೆ. ಅದರಲ್ಲಿ 24 ಜನರ ಹೆಸರು ಪ್ರಸ್ತಾಪಿಸಲಾಗಿದ್ದು, ಚಿತ್ರದ ನಾಯಕ ನಟ ಅಲ್ಲು ಅರ್ಜುನ್‌ ಅವರನ್ನು ಆರೋಪಿ ನಂ.11 ಎಂದು ಉಲ್ಲೇಖ

ಹೈದ್ರಾಬಾದ್‌: ಕಳೆದ ವರ್ಷದ ಡಿ.4ರಂದು ಪುಷ್ಪಾ - 2 ಪ್ರೀಮಿಯರ್‌ ಶೋ ವೇಳೆ ಸಂಭವಿಸಿದ ಕಾಲ್ತುಳಿತ ಮತ್ತು ಮಹಿಳೆ ಸಾವಿನ ಪ್ರಕರಣದಲ್ಲಿ ಪ್ರಕರಣದಲ್ಲಿ ಪೊಲೀಸರು ಆರೋಪಪಟ್ಟಿ ಸಲ್ಲಿಸಿದ್ದಾರೆ. ಅದರಲ್ಲಿ 24 ಜನರ ಹೆಸರು ಪ್ರಸ್ತಾಪಿಸಲಾಗಿದ್ದು, ಚಿತ್ರದ ನಾಯಕ ನಟ ಅಲ್ಲು ಅರ್ಜುನ್‌ ಅವರನ್ನು ಆರೋಪಿ ನಂ.11 ಎಂದು ಉಲ್ಲೇಖಿಸಲಾಗಿದೆ.

ಹೈದರಾಬಾದ್‌ನ ಸಂದ್ಯಾ ಥಿಯೇಟರ್‌ನಲ್ಲಿ ನೂಕುನುಗ್ಗಲಿನ ವೇಳೆ ಮಹಿಳೆ ಸಾವನ್ನಪ್ಪಿದ್ದರು

ಹೈದರಾಬಾದ್‌ನ ಸಂದ್ಯಾ ಥಿಯೇಟರ್‌ನಲ್ಲಿ ನಟ ಅಲ್ಲು ಅರ್ಜುನ್‌ ಅಭಿನಯದ ಪುಷ್ಪಾ - 2 ಸಿನಿಮಾದ ಪ್ರೀಮಿಯರ್‌ ಶೋ ವೇಳೆ ಅಲ್ಲು ಅರ್ಜುನ್‌ ಆಗಮಿಸಿದ್ದರು. ಈ ವೇಳೆ ಉಂಟಾದ ನೂಕುನುಗ್ಗಲಿನ ವೇಳೆ ರೇವತಿ ಎನ್ನುವ ಮಹಿಳೆ ಸಾವನ್ನಪ್ಪಿ ಅವರ ಪುತ್ರ ಗಂಭೀರ ಗಾಯಗೊಂಡಿದ್ದರು.

ತನಿಖೆ ಪೂರ್ಣ

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ತನಿಖೆ ಪೂರ್ಣಗೊಳಿಸಿದ್ದು, ಎಚ್ಚರಿಕೆ ನಡುವೆಯೂ ಶೋ ಆಯೋಜಿಸಿದ್ದಕ್ಕೆ ಅಲ್ಲು ಅರ್ಜುನ್‌ ಸೇರಿದಂತೆ ಒಟ್ಟು 24 ಮಂದಿಯ ಹೆಸರನ್ನು ಅರೋಪ ಪಟ್ಟಿಯಲ್ಲಿ ಉಲ್ಲೇಖಿಸಿದ್ದಾರೆ.

ಕಾಲ್ತುಳಿತ ಬಳಿಕ ಪೊಲೀಸರು ಅಲ್ಲು ಅರ್ಜುನ್‌ ಅವರನ್ನು ಬಂಧನವಾಗಿತ್ತು. ಆ ಬಳಿಕ ಮಧ್ಯಂತರ ಜಾಮೀನು ಪಡೆದು ಹೊರ ಬಂದಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ವಿಜಯಪುರದಲ್ಲಿ ವಿಕೃತ ಘಟನೆ, ಹಾಲು ತರಲು ಹೋದ ಮಹಿಳೆಯ ಕಿವಿ ಕತ್ತರಿಸಿ ಚಿನ್ನ ಕದ್ದ ಕಳ್ಳರು!
ಶಿಡ್ಲಘಟ್ಟದ 'ಹನಿ' ಹಿಂದೆ ಹೋದ ಚಿಕ್ಕಬಳ್ಳಾಪುರದ ಬಾಲಾಜಿ, ಟ್ರ್ಯಾಪ್‌ ಆಗಿದ್ದಕ್ಕೆ ಜೀವನವನ್ನೇ ಮುಗಿಸಿದ!