
ರಾಯಚೂರು (ಡಿ.18): ತಾಯಿ ಹೇಳಿದ ಬುದ್ದಿಮಾತಿಗೆ ಮನನೊಂದು ಯುವತಿಯೊಬ್ಬಳು ತುಂಗಭದ್ರಾ ಕಾಲುವೆಗೆ ಹಾರಿ ಮೃತಪಟ್ಟ ದುರ್ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ದಿನ್ನಿಭಾವಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಿವಾಸಿ ಬಸಲಿಂಗಮ್ಮ (24) ಆತ್ಮ೧ಹತ್ಯೆ ಮಾಡಿಕೊಂಡ ದುರ್ದೈವಿ. ಮನೆಯಲ್ಲಿ ಸರಿಯಾಗಿ ಇರಬೇಕು, ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಎಂದು ತಾಯಿ ಮಗಳಿಗೆ ಬುದ್ದಿವಾದ ಹೇಳಿ ಸ್ವಲ್ಪ ಗದರಿಸಿದ್ದರು ಎನ್ನಲಾಗಿದೆ. ಇದರಿಂದ ತೀವ್ರವಾಗಿ ಮನನೊಂದ ಬಸಲಿಂಗಮ್ಮ, ಜೀವನದಲ್ಲಿ ಜಿಗುಪ್ಸೆಗೊಂಡು ತುಂಗಭದ್ರಾ ಕಾಲುವೆಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾಳೆ.
ಈ ಘಟನೆಯು ಡಿಸೆಂಬರ್ 16 ರಂದು ಸಂಭವಿಸಿದ್ದು, ಇಂದು ತಡವಾಗಿ ಬೆಳಕಿಗೆ ಬಂದಿದೆ. ಮಗಳ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸಣ್ಣ ವಿಷಯಕ್ಕೆ ಯುವತಿ ಇಂತಹ ಕಠಿಣ ನಿರ್ಧಾರ ಕೈಗೊಂಡಿರುವುದು ಗ್ರಾಮದಲ್ಲಿ ವಿಷಾದ ಮೂಡಿಸಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಮಸ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ