
ರಾಯಚೂರು, (.26): ರಾಯಚೂರು ಜಿಲ್ಲೆಯ ಹಟ್ಟಿ ಪೊಲೀಸರು ಕುಖ್ಯಾತ ಮನೆಗಳ್ಳನೊಬ್ಬನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೊಪ್ಪಳ ಜಿಲ್ಲೆಯ 21 ವರ್ಷದ ಮಸ್ತಾನ್ ಬಂಧಿತ ಮನೆಗಳ್ಳ. ಖದೀಮನಿಂದ 4.67 ಲಕ್ಷ ರೂಪಾಯಿ ಮೌಲ್ಯದ 51 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ.
ಮಸ್ತಾನ್, ಪೇಂಟಿಂಗ್ ಕೆಲಸದ ನೆಪದಲ್ಲಿ ಊರಿನ ಬೀಗ ಹಾಕಿದ ಮನೆಗಳನ್ನು ಗುರಿಯಾಗಿಸಿ, ಯೋಜಿತವಾಗಿ ಕಳ್ಳತನಕ್ಕೆ ಸ್ಕೆಚ್ ಹಾಕುತ್ತಿದ್ದ. ಏಪ್ರಿಲ್ 14, 2025 ರಂದು ಫಯಾಜ್ ಎಂಬವರ ಮನೆಯಲ್ಲಿ ಕಳ್ಳತನ ಮಾಡಿದ್ದ. ಈ ಪ್ರಕರಣ ಹಟ್ಟಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಆರೋಪಿಯು ಕಳ್ಳತನ ಹಣವನ್ನು ಮೋಜು-ಮಸ್ತಿಗೆ ಖರ್ಚು ಮಾಡುತ್ತಿದ್ದ ಎಂದು ತನಿಖೆಯಿಂದ ತಿಳಿದುಬಂದಿದೆ.
ಮಸ್ತಾನ್‌ನ ವಿರುದ್ಧ ಈಗಾಗಲೇ ಹಲವು ಕಳ್ಳತನದ ಪ್ರಕರಣಗಳು ದಾಖಲಾಗಿದ್ದು, ತನಿಖೆಯಿಂದ ಇನ್ನಷ್ಟು ಪ್ರಕರಣಗಳು ಬೆಳಕಿಗೆ ಬರುವ ಸಾಧ್ಯತೆಯಿದೆ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಹಟ್ಟಿ ಪೊಲೀಸರು, ಆರೋಪಿಯ ಚಲನವಲನಗಳನ್ನು ಗಮನಿಸಿ, ಕಾರ್ಯಾಚರಣೆ ನಡೆಸಿ ಮಸ್ತಾನ್‌ನನ್ನು ಬಂಧಿಸಿದ್ದಾರೆ. ಖದೀಮನಿಂದ ಜಪ್ತಿಮಾಡಲಾದ ಚಿನ್ನಾಭರಣವು ಕಳ್ಳತನದ ಒಡವೆಗಳಾಗಿವೆ. ಈ ಯಶಸ್ವಿ ಕಾರ್ಯಾಚರಣೆಗೆ ಸ್ಥಳೀಯರು ಪೊಲೀಸರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ