
ರಾಯಚೂರು (ಫೆ.4): ಯಲ್ಲಮ್ಮ ದೇವಿಯ ಜಾತ್ರೆಯಲ್ಲಿ ಬಾಡೂಟ ಸವೆದು ಹೊರಟಿದ್ದ ಬೈಕ್ ಸವಾರ ಭೀಕರ ಆಪಘಾತದಲ್ಲಿ ಸ್ಥಳದಲ್ಲೇ ದುರ್ಮರಣಕ್ಕೀಡಾದ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಯಕ್ಲಾಸಪುರ ಬಳಿ ನಡೆದಿದೆ.
ಬಸವರಾಜ್ (31) ಮೃತ ದುರ್ದೈವಿ. ಮೃತ ಬಸವರಾಜ್ ದೇವದುರ್ಗ ತಾಲೂಕಿನ ಚಡಕಲಗುಡ್ಡ ಗ್ರಾಮದವರು ಎಂದು ಗುರುತಿಸಲಾಗಿದೆ. ಸಿರವಾರ ತಾಲೂಕಿನ ಕುರಕುಂದ ಗ್ರಾಮದಿದಂದ ಪಾಮನಕಲ್ಲೂರಿಗೆ ಹೊರಟಿದ್ದ ವೇಳೆ ದುರಂತ ಸಂಭವಿಸಿದೆ.
ಇದನ್ನೂ ಓದಿ: ರಾಯಚೂರು: ಲವ್ ಫೇಲ್ ಅಂತ ರೈಲು ಹಳಿ ಮೇಲೆ ಮಲಗಿ ಪ್ರಾಣ ಬಿಟ್ಟ ನೀರಮಾನ್ವಿ ಯುವತಿ!
ವೇಗವಾಗಿ ಬಂದ ಟಿಪ್ಪರ್ ಡಿಕ್ಕಿ
ಕುರಕುಂದ ಗ್ರಾಮದಿಂದ ಪಾಮನಕಲ್ಲೂರಿಗೆ ಹೊರಟಿದ್ದ ವೇಳೆ ಎದುರಿನಿಂದ ವೇಗವಾಗಿ ಬಂದ ಟಿಪ್ಪರ್ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಬೈಕ್ ಸವಾರನ ದೇಹ ಛಿದ್ರವಾಗಿದೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ತೊಡಗಿರುವ ಖಾಸಗಿ ಕಂಪನಿಗೆ ಸೇರಿ ಟಿಪ್ಪರಿ ಚಾಲಕನ ನಿರ್ಲಕ್ಶ್ಯವೇ ದುರಂತಕ್ಕೆ ಕಾರಣ ಎನ್ನಲಾಗಿದೆ. ಘಟನೆ ಬಳಿಕ ಸ್ಥಳದಿಂದ ಎಸ್ಕೇಪ್ ಆಗಿರುವ ಟಿಪ್ಪರ್ ಡ್ರೈವರ್.
ಘಟನೆ ಸಂಬಂಧ ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ