ಗರ್ಭಿಣಿ ಪತ್ನಿಯನ್ನು ಹಿಗ್ಗಾಮುಗ್ಗ ಥಳಿಸಿ, ಬೆತ್ತಲೆ ಮೆರವಣಿಗೆ ಮಾಡಿದ ಪಾಪಿ ಪತಿ: ವಿಡಿಯೋ ವೈರಲ್

By BK Ashwin  |  First Published Sep 2, 2023, 1:09 PM IST

ಸಂತ್ರಸ್ತೆ ಪತ್ನಿ 20 ವರ್ಷದ ಮಹಿಳೆಯಾಗಿದ್ದು, ನಾಲ್ಕು ತಿಂಗಳ ಗರ್ಭಿಣಿ ಎಂದು ಹೇಳಲಾಗಿದೆ. ಬಂಧಿತ ಮೂವರು ಆರೋಪಿಗಳಲ್ಲಿ ಸಂತ್ರಸ್ತೆಯ ಪತಿ ಕಾನಾ ಮೀನಾ ಮತ್ತು ಇನ್ನಿಬ್ಬರನ್ನು ನಾಥು ಮೀನಾ ಮತ್ತು ವೆಲಿಯಾ ಮೀನಾ ಎಂದು ಗುರುತಿಸಲಾಗಿದೆ.


ಜೈಪುರ (ಸೆಪ್ಟೆಂಬರ್ 2, 2023): ಮಹಿಳೆಯೊಬ್ಬರನ್ನು ಸಾರ್ವಜನಿಕವಾಗಿ ಥಳಿಸಿ ವಿವಸ್ತ್ರಗೊಳಿಸಿದ ಮತ್ತು ಕ್ಯಾಮರಾದಲ್ಲಿ ಕೃತ್ಯವನ್ನು ದಾಖಲಿಸಿದ ಆಘಾತಕಾರಿ ಕೃತ್ಯ ರಾಜಸ್ಥಾನದಲ್ಲಿ ಬೆಳಕಿಗೆ ಬಂದಿದೆ. ಪ್ರತಾಪ್‌ಗಢ ಜಿಲ್ಲೆಯಲ್ಲಿ ಮಹಿಳೆಯೊಬ್ಬರನ್ನು ಸಾರ್ವಜನಿಕವಾಗಿ ಥಳಿಸಿ ವಿವಸ್ತ್ರಗೊಳಿಸಿದ ಮತ್ತು ಕ್ಯಾಮರಾದಲ್ಲಿ ಕೃತ್ಯವನ್ನು ದಾಖಲಿಸಿದ ಆರೋಪದ ಮೇಲೆ ಪತಿ ಸೇರಿದಂತೆ ಮೂವರನ್ನು ರಾಜಸ್ಥಾನ ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ, ಈ ಪ್ರಕರಣ ಸಂಬಂಧ ಇತರೆ 7 ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಂತ್ರಸ್ತೆ ಪತ್ನಿ 20 ವರ್ಷದ ಮಹಿಳೆಯಾಗಿದ್ದು, ನಾಲ್ಕು ತಿಂಗಳ ಗರ್ಭಿಣಿ ಎಂದು ಹೇಳಲಾಗಿದೆ. ಬಂಧಿತ ಮೂವರು ಆರೋಪಿಗಳಲ್ಲಿ ಸಂತ್ರಸ್ತೆಯ ಪತಿ ಕಾನಾ ಮೀನಾ ಮತ್ತು ಇನ್ನಿಬ್ಬರನ್ನು ನಾಥು ಮೀನಾ ಮತ್ತು ವೆಲಿಯಾ ಮೀನಾ ಎಂದು ಗುರುತಿಸಲಾಗಿದೆ. ಪೊಲೀಸರು ಮೂವರನ್ನು ಬಂಧಿಸಿದಾಗ ಈ ಶಂಕಿತರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ ಎಂದು ರಾಜಸ್ಥಾನ ಪೊಲೀಸರು ಶನಿವಾರ ತಿಳಿಸಿದ್ದಾರೆ.  "ಪೊಲೀಸರಿಂದ ಓಡಿಹೋಗಲು ಯತ್ನಿಸಿದಾಗ ಗಾಯಗೊಂಡ ಮೂವರು ಆರೋಪಿಗಳನ್ನು ಬಂಧಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶೀಘ್ರದಲ್ಲೇ ಇನ್ನಷ್ಟು ಆರೋಪಿಗಳನ್ನು ಬಂಧಿಸಲಾಗುವುದು" ಎಂದು ಬನ್ಸ್ವಾರ ಐಜಿ ಎಸ್. ಪರಿಮಳಾ ತಿಳಿಸಿದ್ದಾರೆ.

Tap to resize

Latest Videos

ಇದನ್ನು ಓದಿ: ಮಗಳಿಗೆ ಲೈಂಗಿಕ ಕಿರುಕುಳ: ವಿರೋಧಿಸಿದ ಪತ್ನಿಯನ್ನೇ ಹೊಡೆದು ಕೊಂದ ಪಾಪಿ ಪತಿ!

ಈ ಘಟನೆ ಆಗಸ್ಟ್ 31 ರಂದು ಸಂಜೆ 5 ಗಂಟೆ ಸುಮಾರಿಗೆ ನಡೆದಿದೆ ಎನ್ನಲಾಗಿದೆ. ಕಳೆದ ವರ್ಷ ವಿವಾಹವಾಗಿದ್ದ ಮಹಿಳೆ ನೆರೆಹೊರೆಯ ಪುರುಷನೊಂದಿಗೆ ಓಡಿಹೋಗಿದ್ದಾಳೆ ಎಂದು ಆರೋಪಿಸಿ ಆಕೆಯ ಪತಿ ಮತ್ತು ಅತ್ತೆಯರು ಥಳಿಸಿದ್ದಾರೆ. ಆರೋಪಿಗಳು ಆಕೆಯನ್ನು ವಿವಸ್ತ್ರಗೊಳಿಸಿ ಗ್ರಾಮದಲ್ಲಿ ಬೆತ್ತಲೆ ಮೆರವಣಿಗೆ ಮಾಡಿದ್ದಾರೆ. 

ಇನ್ನು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಪ್ರಸಾರ ಮಾಡದಂತೆ ಪ್ರತಾಪಗಢ ಪೊಲೀಸರು ಮನವಿ ಮಾಡಿದ್ದಾರೆ. ಈ ಕೃತ್ಯವನ್ನು ಸಂತ್ರಸ್ತೆ ಮಹಿಳೆಯ ಅತ್ತೆ - ಮಾವ ಮಾಡಿದ್ದಾರೆ ಎಂದೂ ಆರೋಪಿಸಲಾಗಿದೆ ಎಂದು ರಾಜಸ್ಥಾನದ ಪ್ರತಾಪ್‌ಗಢ ಡಿಜಿಪಿ ಉಮೇಶ್ ಮಿಶ್ರಾ ಅವರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಅಕ್ಕನಿಗೆ ಬಿಯರ್ ಕುಡಿಸಿ ತಂಗಿಯಿಂದ್ಲೇ ಕೊಲೆ? ಚಿನ್ನ, ಲಕ್ಷಾಂತರ ರೂ. ಹಣದೊಂದಿಗೆ ಬಾಯ್‌ಫ್ರೆಂಡ್‌ ಜತೆ ಪರಾರಿ!

ವಿಡಿಯೋ ವೈರಲ್ ಆದ ನಂತರ ಘಟನೆ ಬೆಳಕಿಗೆ ಬಂದಿದ್ದು, ಬಳಿಕ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಶುಕ್ರವಾರ, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಗಮನಕ್ಕೆ ಬಂದಿದ್ದು, ಆರೋಪಿಗಳು ಮತ್ತು ಅವರ ಕುಟುಂಬದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಇನ್ನೊಂದೆಡೆ, ರಾಜಸ್ಥಾನದ ಬಿಜೆಪಿ ನಾಯಕರು ಘಟನೆ ಬಗ್ಗೆ ಖಂಡಿಸಿದ್ದು, ರಾಜಸ್ಥಾನ ಸಿಎಂ ರಾಜೀನಾಮೆಗೆ ಒತ್ತಾಯಿಸಿದ್ದಾರೆ. 

ಇದನ್ನೂ ಓದಿ: ಹೆಂಡ್ತಿ ತಂಗಿಯನ್ನು ಮುಟ್ತಿದ್ದ ಅಪ್ರಾಪ್ತ ಬಾಲಕನ ಕೊಂದು ಬಾಡಿ ಪೀಸ್‌ ಪೀಸ್‌ ಮಾಡಿದ ಆಟೋ ಡ್ರೈವರ್!

click me!