Crime: ರೇಪ್‌ ಮಾಡಿ ಮಹಿಳೆಗೆ ಬೆಂಕಿ ಹಚ್ಚಿದ ರಾಕ್ಷಸ: ಆಸ್ಪತ್ರೆಯಲ್ಲಿ ಬಲಿಯಾದ ಸಂತ್ರಸ್ತೆ

By BK Ashwin  |  First Published Apr 8, 2023, 3:08 PM IST

ಮಹಿಳೆ ಮೃತಪಟ್ಟ ಹಿನ್ನೆಲೆ ಎಫ್‌ಐಆರ್‌ನಲ್ಲಿ ಸೆಕ್ಷನ್ 302 (ಕೊಲೆಗೆ ಶಿಕ್ಷೆ) ಅನ್ನು ಕೂಡ ಸೇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶವಪರೀಕ್ಷೆ ನಡೆಸಿದ ಬಳಿಕ ಮೃತದೇಹವನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗುವುದು ಎಂದೂ ಮಾಹಿತಿ ನೀಡಿದ್ದಾರೆ. 


ಜೈಪುರ(ಏಪ್ರಿಲ್ 8, 2023): ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ಗುರುವಾರ ವ್ಯಕ್ತಿಯೊಬ್ಬ 30 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಮಾಡಿ ಬೆಂಕಿ ಹಚ್ಚಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಇನ್ನು, ಜೋಧ್‌ಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಶುಕ್ರವಾರ ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಸಂತ್ರಸ್ತೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಇನ್ನು, ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬೆಳವಣಿಗೆಯನ್ನು ಬಾರ್ಮರ್ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ನಿತೇಶ್ ಆರ್ಯ ಖಚಿತಪಡಿಸಿದ್ದಾರೆ. ಅಲ್ಲದೆ, ಮಹಿಳೆ ಮೃತಪಟ್ಟ ಹಿನ್ನೆಲೆ ಎಫ್‌ಐಆರ್‌ನಲ್ಲಿ ಸೆಕ್ಷನ್ 302 (ಕೊಲೆಗೆ ಶಿಕ್ಷೆ) ಅನ್ನು ಕೂಡ ಸೇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶವಪರೀಕ್ಷೆ ನಡೆಸಿದ ಬಳಿಕ ಮೃತದೇಹವನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗುವುದು ಎಂದೂ ಮಾಹಿತಿ ನೀಡಿದ್ದಾರೆ. 

Tap to resize

Latest Videos

ಇದನ್ನು ಓದಿ: ಛೀ ಪಾಪಿ..! ಬಿಹಾರದಲ್ಲಿ ಬೀದಿ ನಾಯಿಯ ಮೇಲೆ ಕಾಮುಕನಿಂದ ಅತ್ಯಾಚಾರ: ವಿಡಿಯೋ ವೈರಲ್‌ ಬಳಿಕ ಪೊಲೀಸರಿಂದ ತನಿಖೆ

ಮಹಿಳೆಯ ಪತಿ ದಾಖಲಿಸಿದ ಎಫ್‌ಐಆರ್‌ನ ಪ್ರಕಾರ, ಗುರುವಾರದಂದು ಅವರ ಪತ್ನಿ ಮನೆಯಲ್ಲಿ ಒಬ್ಬರೇ ಇದ್ದರು. ತಾನು ಕೆಲಸಕ್ಕಾಗಿ ಹೊರಗೆ ಹೋಗಿದ್ದೆ ಹಾಗೂ ಮಕ್ಕಳು ಸಹ ಶಾಲೆಯಲ್ಲಿದ್ದರು ಎಂದು ದೂರಿದ್ದಾರೆ. ಆರೋಪಿಯನ್ನು ಶಕುರ್ ಖಾನ್ ಎಂದು ಗುರುತಿಸಲಾಗಿದ್ದು, ಮನೆಗೆ ನುಗ್ಗಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಪತ್ನಿಯ ಚೀರಾಟ ಕೇಳಿ ನೆರೆಮನೆಯವರು ಸ್ಥಳಕ್ಕಾಗಮಿಸಿ ಆಕೆಯನ್ನು ರಕ್ಷಿಸಲು ಮುಂದಾದಾಗ ಆರೋಪಿ ನೆರೆಮನೆಯವರನ್ನು ತಳ್ಳಿ ಆ್ಯಸಿಡ್ ತರಹದ ರಾಸಾಯನಿಕವನ್ನು ಪತ್ನಿಯ ಮೇಲೆ ಸುರಿದು ಬೆಂಕಿ ಹಚ್ಚಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. 

ಇನ್ನು, ಗುರುವಾರ ಮುಂಜಾನೆ 1.30 ರ ಸುಮಾರಿಗೆ ಸಂತ್ರಸ್ತೆಯ ಕುಟುಂಬ ಸದಸ್ಯರು ಸಂಪರ್ಕಿಸಿದರೂ, ಅವರು ದೂರು ದಾಖಲಿಸಿಕೊಳ್ಳಲಿಲ್ಲ. ಮಹಿಳೆಯ ಪರಿಸ್ಥಿತಿ ಚಿಂತಾಜನಕವಾದ ಬಳಿಕ ಎಫ್‌ಐಆರ್‌ ದಾಖಲಿಸಿದರು ಎಂಬ ಆರೋಪ ಕೇಳಿಬಂದಿದೆ. ಆದರೆ, ಘಟನೆಯ ಬಗ್ಗೆ ನಮಗೆ ಮುಂಜಾನೆ 3.30 ರ ಸುಮಾರಿಗೆ ಮಾಹಿತಿ ಸಿಕ್ಕಿತು ಮತ್ತು ಶುಕ್ರವಾರ ನಸುಕಿನಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿಕೊಂಡಿದ್ದಾರೆ. 

ಇದನ್ನೂ ಓದಿ: 5 ವರ್ಷದ ನಿರಂತರ ಸಮ್ಮತಿ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ: ಕರ್ನಾಟಕ ಹೈಕೋರ್ಟ್

ಇಬ್ಬರು ಮಕ್ಕಳನ್ನು ಹೊಂದಿರುವ ಮಹಿಳೆಗೆ ದಾಳಿಯಲ್ಲಿ 40-50 % ಸುಟ್ಟ ಗಾಯಗಳಾಗಿವೆ. ಆಕೆಯನ್ನು ಮೊದಲು ಬಲೋತ್ರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು ಮತ್ತು ನಂತರ ಜೋಧ್‌ಪುರದ ಉನ್ನತ ವೈದ್ಯಕೀಯ ಸಂಸ್ಥೆಗೆ ಕರೆದೊಯ್ಯಲಾಯಿತು. ಅಲ್ಲಿ ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ ಎಂದೂ ತಿಳಿದುಬಂದಿದೆ. 

ಆರೋಪಿ ಶಕುರ್ ಖಾನ್ ಹಾಗೂ ಮೃತ ಮಹಿಳೆ ಇಬ್ಬರೂ ಒಂದೇ ಗ್ರಾಮದವರು ಎಂದು ಪೊಲೀಸರು ತಿಳಿಸಿದ್ದು, ಶುಕ್ರವಾರ ತಡರಾತ್ರಿ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಈ ಮಧ್ಯೆ, ಬಿಜೆಪಿ ಸಂಸದ ಮತ್ತು ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಸಚಿವ ಕೈಲಾಶ್ ಚೌಧರಿ ಘಟನೆಯನ್ನು ಖಂಡಿಸಿದ್ದಾರೆ. "ಬಲೋತ್ರಾದಲ್ಲಿ ದಲಿತ ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ಆಸಿಡ್ ಸುಟ್ಟ ಘಟನೆಯು ರಾಜಸ್ಥಾನಕ್ಕೆ ಕಪ್ಪು ಚುಕ್ಕೆಯಾಗಿದೆ ಮತ್ತು ರಾಜ್ಯದಲ್ಲಿ ಕಾನೂನು ಹಾಗೂ ಸುವ್ಯವಸ್ಥೆ ಹದಗೆಟ್ಟಿದೆ ಎಂಬುದಕ್ಕೆ ಸಾಕ್ಷಿಯಾಗಿದೆ" ಎಂದು ಅವರು ಹೇಳಿದರು.

ಇದನ್ನೂ ಓದಿ: ಹತ್ರಾಸ್‌ ಗ್ಯಾಂಗ್‌ರೇಪ್‌, ಕೊಲೆ ಕೇಸ್‌: ಮೂವರನ್ನು ಖುಲಾಸೆಗೊಳಿಸಿದ ಕೋರ್ಟ್‌; ಒಬ್ಬರು ಮಾತ್ರ ದೋಷಿ

ಅಲ್ಲದೆ, “ಇಂದು ರಾಜ್ಯದ ದುರಾಡಳಿತದಲ್ಲಿ ನಡೆಯುತ್ತಿರುವ ಈ ಜಂಗಲ್ ರಾಜ್ ರಾಜ್ಯದ ಪ್ರತಿಯೊಬ್ಬ ಶ್ರೀಸಾಮಾನ್ಯನ ಶಾಪವಾಗಿ ಪರಿಣಮಿಸಿದೆ ಮತ್ತು (ಮುಖ್ಯಮಂತ್ರಿ ಅಶೋಕ್) ಗೆಹ್ಲೋಟ್ ಜೀ ಅವರು ಗೃಹ ಸಚಿವ ಸ್ಥಾನದಲ್ಲಿದ್ದರೂ ರಾಜ್ಯದ ಕಾನೂನು ಸುವ್ಯವಸ್ಥೆ ಕುರಿತು ಕಣ್ಣು ಮುಚ್ಚಿ ಕುಳಿತಿದ್ದಾರೆ’’ ಎಂದೂ ಆರೋಪಿಸಿದರು.

click me!