
ಹಾವೇರಿ(ಫೆ.29): ಬೆಂಗಳೂರಿನ ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಅವರ ಬೆಂಬಲಿಗ ಮಹ್ಮದ ನಾಶೀಪುಡಿ ಎಂಬಾತನನ್ನ ನಿನ್ನೆ(ಬುಧವಾರ) ತಡರಾತ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಿಲ್ಲೆಯ ಮೋಟೆಬೆನ್ನೂರ ಬಳಿಯಿರುವ SAN ಕೋಲ್ಡ್ ಸ್ಟೋರೇಜ್‌ನಲ್ಲಿ ಮಹ್ಮದ ನಾಶೀಪುಡಿಯನ್ನ ಪೋಲಿಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರು ಮತ್ತು ಬ್ಯಾಡಗಿ ಪೋಲಿಸರ ಜಂಟೀ ಕಾರ್ಯಾಚರಣೆ ನಡೆಸಿದ್ದಾರೆ.
ಧ್ವನಿ ಹೋಲಿಕೆ ವಿಚಾರಣೆ ಹಿನ್ನಲೆಯಲ್ಲಿ ಮಹ್ಮದ ನಾಶೀಪುಡಿಯನ್ನ ಪೋಲಿಸರು ಬೆಂಗಳೂರಿಗೆ ಕರೆದೊಯ್ದಿದ್ದಾರೆ. ಪಾಕಿಸ್ತಾನ ಜಿಂದಾಬಾದ್ ಘೋಷಣೆ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನ ತೀವ್ರಗೊಳಿಸಿದ್ದಾರೆ.
ಪಾಕ್ ಪರ ಘೋಷಣೆ ಕೂಗಿದವರು ಯಾವ ಪಕ್ಷದವರಾದ್ರೂ ಶಿಕ್ಷೆ ಆಗಬೇಕು: ಸಂತೋಷ್ ಲಾಡ್
ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಬೆಂಬಲಿಗ ಮಹ್ಮದ ನಾಶೀಪುಡಿಯನ್ನ ವಿಚಾರಣೆಗೆ ಪೊಲೀಸರು ಬೆಂಗಳೂರಿಗೆ ಕರೆದೊಯ್ದಿದ್ದಾರೆ. ನಿನ್ನೆ ತಡರಾತ್ರಿ ಮಹ್ಮದ ಶಫಿ ನಾಶೀಪುಡಿ ಎಂಬ ವ್ಯಕ್ತಿಯನ್ನು ಧ್ವನಿ ಪರೀಕ್ಷೆಗಾಗಿ ಪೊಲೀಸರು ಬೆಂಗಳೂರಿಗೆ ಕರೆದೊಯ್ದಿದ್ದಾರೆ.
ಬಂಧಿತ ಮಹಮದ್ ಶಫಿ ನಾಶಿಪುಡಿ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಬೆಂಬಲಿನಾಗಿದ್ದಾನೆ. ಮಹಮದ್ ಶಫಿ ನಾಶಿಪುಡಿ ಹಾವೇರಿ ಜಿಲ್ಲೆಯ ಬ್ಯಾಡಗಿಯಲ್ಲಿ ಮೆಣಸಿನಕಾಯಿ ವರ್ತಕರಾಗಿದ್ದಾರೆ. ಪಾಕಿಸ್ತಾನದ ಪರ ಫೋಷಣೆ ಕೂಗಿದ್ದಾರೆಂದು ಮಹಮದ್ ಶಫಿ ವಿರುದ್ಧ ಬ್ಯಾಡಗಿ ಬಿಜೆಪಿ ಮುಖಂಡರು ಆರೋಪಿಸಿದ್ದರು. ನಾನು ನಾಸೀರ್ ಸಾಬ್ ಜಿಂದಾಬಾದ್ ಎಂದು ಕೂಗಿದ್ದೇನೆ. ನನ್ನ ತಾಯಾಣೆಗೂ ಆತರ ದೇಶದ್ರೋಹಿ ಘೋಷಣೆ ಕೂಗಿಲ್ಲ ಎಂದು ಮಹಮದ್ ಶಫಿ ನಾಶಿಪುಡಿ ತಿಳಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ