ರಮೇಶ್‌ ಜಾರಕಿಹೊಳಿ ಸಿ.ಡಿ. ಕೇಸ್: ಅರ್ಜಿ ವಿಚಾರಣೆ ಮುಂದೂಡಿದ ಕೋರ್ಟ್

By Suvarna News  |  First Published Sep 15, 2021, 10:55 PM IST

* ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ರಾಸಲೀಲೆ ಸಿ.ಡಿ. ಕೇಸ್
* ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಸೆ. 17ಕ್ಕೆ ಮುಂದೂಡಿದ ಕೋರ್ಟ್
* ವಕೀಲೆ ಇಂದಿರಾ ಜೈಸಿಂಗ್‌ ಅನಾರೋಗ್ಯ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆ ಮುಂದೂಡಿಕೆ


ಬೆಂಗಳೂರು, (ಸೆ.15): ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ರಾಸಲೀಲೆ ಸಿ.ಡಿ. ಕೇಸ್ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಸೆ. 17ಕ್ಕೆ ಮುಂದೂಡಿದೆ.

ಪ್ರಕರಣದ ತನಿಖೆಗೆ ಎಸ್‌ಐಟಿ ರಚಿಸಿ ನಗರ ಪೊಲೀಸ್‌ ಆಯುಕ್ತರು ಹೊರಡಿಸಿದ ಆದೇಶ ಪ್ರಶ್ನಿಸಿ ವಕೀಲೆ ಗೀತಾ ಮಿಶ್ರಾ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾ. ಸತೀಶ್‌ ಚಂದ್ರ ಶರ್ಮ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ   ವಿಚಾರಣೆಗೆ  ಕೈಗೆತ್ತುಕೊಂಡಿತು.

Tap to resize

Latest Videos

ಜಾರಕಿಹೊಳಿ ವಿರುದ್ಧ ಮತ್ತೊಂದು ಕೇಸ್‌ : ಹೊಸದಾಗಿ ವಿಚಾರಣೆಗೆ ಹೈಕೋರ್ಟ್ ಸೂಚನೆ

ವಾದ ಮಂಡನೆ ವೇಳೆ ಯುವತಿ ಪರ ಹಿರಿಯ ವಕೀಲೆ ಇಂದಿರಾ ಜೈಸಿಂಗ್‌ ಅವರು ಪದೇಪದೆ ಕೆಮ್ಮುತ್ತಿದ್ದನ್ನು ಗಮನಿಸಿದ ನ್ಯಾಯಪೀಠ, ನಿಮಗೆ ಹುಷಾರಿಲ್ಲವೇ? ಬೇಕಾದರೆ ಅರ್ಜಿ ವಿಚಾರಣೆಯನ್ನು ಮತ್ತೊಂದು ದಿನಕ್ಕೆ ನಿಗದಿಪಡಿಸೋಣ ಎಂದು ಹೇಳಿತು.

ಸ್ವಲ್ಪ ಆರೋಗ್ಯದ ಸಮಸ್ಯೆಯಿದ್ದು, ಒಂದು ದಿನ ವಿಚಾರಣೆ ಮುಂದೂಡಿದರೆ ಉತ್ತಮ ಎಂದು ಇಂದಿರಾ ಜೈಸಿಂಗ್‌ ತಿಳಿಸಿದರು. ಬಳಿಕ ಕೋರ್ಟ್ ಅರ್ಜಿ ವಿಚಾರಣೆಯನ್ನು ಸೆ.17ಕ್ಕೆ ಮುಂದೂಡಿತು.

click me!