ಜಾರಕಿಹೊಳಿ CD ಕೇಸ್: ಸಾರ್ವಜನಿಕವಾಗಿ ಕಾಣಿಸಿಕೊಂಡ ಯುವತಿ

By Suvarna News  |  First Published Mar 13, 2021, 9:07 PM IST

ಮೊದಲ ಬಾರಿಗೆ ಯುವತಿಯೇ ಮುಂದೆ ಬಂದು ಸಾರ್ವಜನಿಕವಾಗಿ ಹೇಳಿಕೆ ನೀಡಿರುವುದು ರಮೇಶ್ ಜಾರಕಿಹೊಳಿ ಸಿಡಿ ಕೇಸ್​ಗೆ ಸ್ಪೋಟಕ ತಿರುವು ಸಿಕ್ಕಿದೆ. ಸಂತ್ರಸ್ತ ಯುವತಿ ಪ್ರತ್ಯಕ್ಷಳಾಗಿದ್ದಾಳೆ.


ಬೆಂಗಳೂರು, (ಮಾ.13): ರಮೇಶ್ ಜಾರಕಿಹೊಳಿ ರಾಸಲೀಲೆ ಸಿ.ಡಿ ಪ್ರಕರಣದ ಕುರಿತಂತೆ ಸಂತ್ರಸ್ತ ಯುವತಿ ಇದೇ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾಳೆ.

ಹೌದು...ಅಜ್ಞಾತ ಸ್ಥಳದಿಂದ 34 ಸೆಕೆಂಡ್​ನ ವಿಡಿಯೋ ಮಾಡಿ ಹರಿ ಬಿಟ್ಟಿರುವ ಸಂತ್ರಸ್ತ ಯುವತಿ, ಗೃಹ ಸಚಿವರು ನನಗೆ ಹಾಗೂ ನನ್ನ ಕುಟುಂಬಕ್ಕೆ ರಕ್ಷಣೆ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದಾಳೆ.

Tap to resize

Latest Videos

ಜಾರಕಿಹೊಳಿ ಸೆಕ್ಸ್ ಸಿ.ಡಿ ಪ್ರಕರಣದ ಕಿಂಗ್ ಪಿನ್ ಬಗ್ಗೆ ಅಚ್ಚರಿ ಮಾಹಿತಿ ಲಭ್ಯ.!

ವಿಡಿಯೋನಲ್ಲಿ ಹೇಳಿದ ಮಾತುಗಳು
ರಮೇಶ್ ಜಾರಕಿಹೊಳಿ ಅವರು ನನಗೆ ಕೆಲಸ ಕೊಡಿಸುವುದಾಗಿ ನಂಬಿಸಿ, ನನ್ನನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ. ಇದರಿಂದ ನನ್ನ ಮಾನ ಮರ್ಯಾದೆ ಊರು ತುಂಬಾ ಹರಾಜಾಗಿದೆ. ನನ್ನ ಮನೆ ಹತ್ತಿರ ಬಂದು ಯಾರೋರೊ ಏನೇನೋ ಹೇಳಿದ್ದಾರೆ. ನನ್ನ ತಂದೆ ತಾಯಿ ಹಾಗೂ ನಾನು ಮೂರ್ನಾಲ್ಕು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದೇವೆ. ಆ  ವಿಡಿಯೋ ಹೇಗೆ ಮಾಡಿದಾರೋ ನನಗೆ ಗೊತ್ತಿಲ್ಲ. ದಯವಿಟ್ಟು ನನಗೆ ರಕ್ಷಣೆ ನೀಡಬೇಕು' ಎಂದು ಯುವತಿ ವಿಡಿಯೋದಲ್ಲಿ ಹೇಳಿದ್ದಾಳೆ.

. ಇನ್ನು ಇಂದಷ್ಟೇ ರಮೇಶ್ ಜಾರಕಿಹೊಳಿ ಅವರು ಬೆಂಗಳೂರಿನ ಸದಾಶಿವನಗರ ಪೊಲೀಸ್​ ಠಾಣೆಯಲ್ಲಿ ಸಿಡಿ ಕೇಸ್​ ಕುರಿತಂತೆ ದೂರು ನೀಡಿದ್ದಾರೆ. ಇದರ ಬೆನ್ನಲ್ಲೇ ಇದೇ ಮೊದಲ ಬಾರಿಗೆ ಯುವತಿಯೇ ಮುಂದೆ ಬಂದು ಸಾರ್ವಜನಿಕವಾಗಿ ಹೇಳಿಕೆ ನೀಡಿರುವುದು ರಮೇಶ್ ಜಾರಕಿಹೊಳಿ ಸಿಡಿ ಕೇಸ್​ಗೆ ಸ್ಪೋಟಕ ತಿರುವು ಸಿಕ್ಕಂತಾಗಿದೆ.

click me!