ಜಾರಕಿಹೊಳಿ ರಾಸಲೀಲೆ CD ಕೇಸ್: ಸಿಡಿ ಲೇಡಿ ಬಗ್ಗೆ ಮತ್ತೊಂದು ಸುದ್ದಿ ಸ್ಫೋಟ

Published : Mar 16, 2021, 08:02 PM ISTUpdated : Mar 16, 2021, 08:09 PM IST
ಜಾರಕಿಹೊಳಿ ರಾಸಲೀಲೆ CD ಕೇಸ್: ಸಿಡಿ ಲೇಡಿ ಬಗ್ಗೆ ಮತ್ತೊಂದು ಸುದ್ದಿ ಸ್ಫೋಟ

ಸಾರಾಂಶ

ರಮೇಶ್ ಜಾರಕಿಹೊಳಿ ರಾಸಲೀಲೆ ಸಿ.ಡಿ.ಪ್ರಕರಣಕ್ಕೆ ಕ್ಷಣ-ಕ್ಷಣ ಸ್ಫೋಟ ತಿರುವು ಪಡೆದುಕೊಳ್ಳುತ್ತಿದೆ. ಇದರ ಮಧ್ಯೆ ಮತ್ತೊಂದು ಬ್ರೇಕಿಂಗ್ ಸುದ್ದಿಯೊಂದು ಹೊರಬಿದ್ದಿದೆ. 

ಬೆಳಗಾವಿ, (ಮಾ.16): ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಸಂಬಂಧ SIT tMw ತನಿಖೆ ಚುರುಕುಗೊಳಿಸಿದ್ದು, ಮಹತ್ವದ ಮಾಹಿತಿಗಳನ್ನು ಕಲೆಹಾಕುತ್ತಿದ್ದಾರೆ.

ಇದರ ನಡುವೆ ಮತ್ತೊಂದು ಸುದ್ದಿ ಹೊರಬಿದ್ದಿದ್ದು, ಮಾಜಿ ಸಚಿವರ ಸಿಡಿ ದೃಶ್ಯದಲ್ಲಿದ್ದ ಯುವತಿ ಕಿಡ್ನಾಪ್ ಆಗಿದ್ದಾಳೆ ಎಂದು ದೂರು ದಾಖಲಾಗಿದೆ.

ರಾಸಲೀಲೆ CD ಬೆನ್ನಲ್ಲೇ ರಮೇಶ್ ಜಾರಕಿಹೊಳಿಗೆ ಮತ್ತೊಂದು ಸಂಕಷ್ಟ!

ಹೌದು....ನನ್ನ ಮಗಳನ್ನು ಕಿಡ್ನ್ಯಾಪ್‌ ಮಾಡಿದ್ದರು ಎಂದು ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣದ ಸಂತ್ರಸ್ತೆಯ ತಂದೆ ಠಾಣೆಗೆ ದೂರು ದಾಖಲಿಸಿದ್ದಾರೆ. ಸಿಡಿ ದೃಶ್ಯದಲ್ಲಿದ್ದ ತನ್ನ ಮಗಳು ಕಿಡ್ನ್ಯಾಪ್‌ ಆಗಿದ್ದರು ಎಂದು ಸಂತ್ರಸ್ತೆಯ ತಂದೆ ನಗರದ ಎಪಿಎಂಸಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 

ಬೆಂಗಳೂರಿನ ಹಾಸ್ಟೆಲ್‌ನಲ್ಲಿದ್ದಾಗ ನನ್ನ ಪುತ್ರಿಯನ್ನು ಕಿಡ್ನ್ಯಾಪ್ ಮಾಡಿದ್ದರು ಎಂದು ಆಕಯೆ ತಂದೆ ದೂರಿನಲ್ಲಿ ಆರೋಪಿಸಿದ್ದಾರೆ.

ನನ್ನ ಪುತ್ರಿಯನ್ನು ಹೆದರಿಸಿ, ಕಿರುಕುಳ ನೀಡಿ ಅಶ್ಲೀಲ ವಿಡಿಯೋ ತೆಗೆದಿದ್ದಾರೆ. ಬಳಿಕ ಅದನ್ನು ಸಿಡಿ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ ಎಂದು ಸಂತ್ರಸ್ತೆಯ ತಂದೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ತಂದೆ ದೂರು ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಇದೀಗ, IPC ಸೆಕ್ಷನ್‌ 363, 368, 343, 346, 354, 506ರಡಿಯಲ್ಲಿ ಕೇಸ್ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸಹವಾಸ, ಒತ್ತಾಯಕ್ಕೆ ಗಾಂಜಾ ಜಾಲಕ್ಕೆ ವಿದ್ಯಾರ್ಥಿಗಳು!
ಭದ್ರಾವತಿ: ಜೈ ಭೀಮ್ ನಗರದಲ್ಲಿ ಪ್ರೇಮಿಗಳ ವಿಚಾರಕ್ಕೆ ರಕ್ತಪಾತ: ಇಬ್ಬರು ದುರ್ಮರಣ!