ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಮಾಡಿದ ಹಿನ್ನೆಲೆಯಲ್ಲಿ ರಾಷ್ಷ್ರೀಯ ತನಿಖಾ ತಂಡದ (ಎನ್‌ಐಎ) ಅಧಿಕಾರಿಗಳು ಬೆಂಗಳೂರು ಹಾಗೂ ಕೋಯಮತ್ತೂರು ಸೇರಿದಂತೆ 11 ಕಡೆಗಳಲ್ಲಿ ದಾಳಿ ಮಾಡಿದ್ದಾರೆ.
ಬೆಂಗಳೂರು (ಮೇ 21): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚೆಗೆ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಮಾಡಿದ ಹಿನ್ನೆಲೆಯಲ್ಲಿ ರಾಷ್ಷ್ರೀಯ ತನಿಖಾ ತಂಡದ (ಎನ್‌ಐಎ) ಅಧಿಕಾರಿಗಳು ಬೆಂಗಳೂರು ಹಾಗೂ ಕೋಯಮತ್ತೂರು ಸೇರಿದಂತೆ 11 ಕಡೆಗಳಲ್ಲಿ ದಾಳಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಎನ್‌ಐಎ ಅಧಿಕಾರಿಗಳು ದಾಳಿ ಮಾಡಿದ್ದಾರೆ. ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳಿಂದ ಬೆಂಗಳೂರಿನ 4 ಕಡೆಗಳಲ್ಲಿ ದಾಳಿ ಮಾಡಿ ಶೋಧನೆ ಮಾಡುತ್ತಿದ್ದಾರೆ. ಇಬ್ಬರು ಶಂಕಿತರೊಂದಿಗೆ ಸಂಪರ್ಕ ಹೊಂದಿದ ನಾಲ್ಕು ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ಮಾಡಿದ್ದು, ಎನ್‌ಐಎ ಕೆಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.
ರಾಮೇಶ್ವರಂ ಕೆಫೆಬಾಂಬ್ ಸ್ಫೋಟಕ್ಕೆ ಶಂಕಿತರು ಸಾಮಗ್ರಿ ಖರೀದಿಸಿದ್ದು ಚೆನ್ನೈನಲ್ಲಿ!
ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಿಸಿದ ಆರೋಪಿಗಳಾದ ಮತೀನ್ ಮತ್ತು ಶಾಝೀಬ್ ಗೆ ಸಹಾಯ ಮಾಡಿದ ಹಿನ್ನೆಲೆಯಲ್ಇ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಹಾಗೂ ಬನಶಂಕರಿಯಲ್ಲಿ ಒಟ್ಟು ನಾಲ್ಕು ಸ್ಥಳದಲ್ಲಿ ಎನ್ಐಎ ದಾಳಿ ಮಾಡಿ ದಾಖಲೆಗಳನ್ನು ಪಡೆದುಕೊಂಡಿದ್ದಾರೆ. ಶಂಕಿತ ಉಗ್ರ ಮತೀನ್ ಬೆಂಗಳೂರಿಗೆ ಬಂದಾಗ ಸಹಾಯ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಆತನೊಂದಿಗೆ ಸಂಪರ್ಕಕ್ಕೆ ಬಂದಿದ್ದವರ ಮನೆ ಹಾಗೂ ವಾಸ್ ಸ್ಥಳದ ಮೇಲೆ ದಾಳಿ ಮಾಡಿದ್ದಾರೆ. ಇನ್ನು ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಮಾಡಿದ ಪ್ರಕರಣದಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮಾತ್ರವಲ್ಲದೇ ಕೋಯಮತ್ತೂರು ಸೇರಿದಂತೆ ದೇಶದ 11 ಸ್ಥಳಗಳಲ್ಲಿ ಏಕ ಕಾಲದಲ್ಲಿ ದಾಳಿ ಮಾಡಿ ಶೋಧನೆ ಮಾಡುತ್ತಿದ್ದಾರೆ.
ರಾಮೇಶ್ವರಂ ಕೆಫೆಗೆ ಸ್ಪೋಟಿಸಿದ ಮುಸಾವೀರ್, ಮತೀನ್ ತಾಹ ಹಿಂದೂ ಹೆಸರಲ್ಲಿ ಸಂಚಾರ: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ ದೊಡ್ಡ ಬೆಳವಣಿಗೆಯಾಗಿದ್ದು, ಈ ಘಟನೆಯ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹ ಹಾಗೂ ಬಾಂಬ್ ಇರಿಸಿದ್ದ ಮುಸಾವಿರ್ ಹುಸೇನ್ ಶಾಜಿಬ್‌ನನ್ನು ಎನ್‌ಐಎ ಬಂಧಿಸಿದೆ. ಬೆಂಗಳೂರಿನ ಕುಂದಲಹಳ್ಳಿ ಬಾಂಬ್ ಸ್ಪೋಟಿಸಿ ಕೋಲ್ಕತ್ತಾದಲ್ಲಿ ಉಗ್ರರು ತಲೆಮರೆಸಿಕೊಂಡಿದ್ದರು. ಬಂಧನದಿಂದ ಬಚಾವ್ ಆಗಲು ಇಬ್ಬರೂ ಕೂಡ ಸಾಕಷ್ಟು ನಕಲಿ ದಾಖಲೆಗಳನ್ನು ಸೃಷ್ಟಿ ಮಾಡಿದ್ದರು ಎನ್ನುವ ವಿವರ ಕೂಡ ಪತ್ತೆಯಾಗಿದೆ. ಬೇರೆ ಹೆಸರಿನಲ್ಲಿ ಆಧಾರ್ ಕಾರ್ಡ್ ಸೃಷ್ಟಿಸಿಕೊಂಡು ಶಂಕಿತರು ಅಡಗಿದ್ದರು. ಎನ್ಐಎ ತನಿಖೆ ವೇಳೆ ನಕಲಿ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ. ಅಬ್ದುಲ್ ಮತೀನ್ ತಾಹ, ಯಶ್ ಶಹನವಾಜ್ ಪಟೇಲ್ ಹೆಸರನ್ನು ಆಧಾರ್ ಕಾರ್ಡ್ ಸೃಷ್ಟಿಸಿಕೊಂಡಿದ್ದರೆ, ಮುಸಾವಿರ್ ಹುಸೇನ್ ಶಾಜಿಬ್, ಅನ್ಮೋಲ್ ಕುಲಕರ್ಣಿ ಎನ್ನುವ ಹಿಂದು ಹೆಸರಲ್ಲಿ ಆಧಾರ್ ಕಾರ್ಡ್ ರಚಿಸಿಕೊಂಡಿದ್ದರು.
ರಾಮೇಶ್ವರಂ ಕೆಫೆ ಸ್ಫೋಟದ ಮತ್ತೊಂದು ಎಕ್ಸ್ಕ್ಲೂಸಿವ್: ಶಂಕಿತ ಉಗ್ರರ ಟ್ರಾವೆಲ್ ಹಿಸ್ಟರಿ ಹೇಗಿತ್ತು ಗೊತ್ತಾ.!?
ಇಬ್ಬರೂ ಕೂಡ ಇದೇ ದಾಖಲೆಯಲ್ಲಿಯೇ ಕೋಲ್ಕತ್ತಾದ ಪ್ಯಾರಡೈಸ್ ಹೋಟೆಲ್‌ಗೆ ದಾಖಲೆ ನೀಡಿ ವಾಸ್ತವ್ಯ ಮಾಡಿದ್ದರು. ದಾಳಿ ವೇಳೆ ನಕಲಿ ದಾಖಲೆಗಳನ್ನು ಎನ್‌ಐಎ ವಶಕ್ಕೆ ಪಡೆದಾಗ ಈ ಮಾಹಿತಿ ಪತ್ತೆಯಾಗಿದೆ. ನಕಲಿ ದಾಖಲೆಗಳನ್ನ ಎನ್‌ಐಎ ಅಧಿಕಾರಿಗಳು ಕೋರ್ಟ್‌ಗೆ ಸಲ್ಲಿಸಿದ್ದಾರೆ. ಅಲ್ಲದೇ, ಉಗ್ರರು ತಲೆಮರೆಸಿಕೊಂಡಿದ್ದ ಸಂಪೂರ್ಣ ಮಾಹಿತಿ ಸಂಗ್ರಹವನ್ನೂ ಮಾಡಿದ್ದಾರೆ. ಇಬ್ಬರೂ ಉಗ್ರರು ಕೂಡ ತಪ್ಪಿಸಿಕೊಳ್ಳೋದರಲ್ಲಿ ಮಾಸ್ಟರ್ ಮೈಂಡ್ ಆಗಿದ್ದರು. ಪಕ್ಕಾ ಚಾಲಾಕಿತನದಿಂದಲೇ ಕೋಲ್ಕತದಲ್ಲಿ ಇವರು ತಪ್ಪಿಸಿಕೊಳ್ಳುತ್ತಿದ್ದರು. 12 ದಿನ ಕೋಲ್ಕತ್ತದಲ್ಲಿದ್ದ ಇವರು, ಮೂರು ನಾಲ್ಕು ದಿನಕ್ಕೆ ಸ್ಥಳವನ್ನ ಬದಲಾವಣೆ ಮಾಡುತ್ತಿದ್ದರು. ಆದರೆ, ಮುಸಾವಿರ್ ಹಾಗೂ ಮತೀನ್ ತಾಹ ಹೆಜ್ಜೆ ಗುರುತನ್ನು ಪತ್ತೆ ಹಚ್ಚುವಲ್ಲಿ ಎನ್‌ಐಎ ಯಶಸ್ವಿಯಾಗಿತ್ತು.