
ಬೆಂಗಳೂರು(ಏ.02): ಅತ್ಯಾಚಾರ(Rape) ಪ್ರಕರಣದ ಆರೋಪಿಯೊಬ್ಬ ವೈದ್ಯಕೀಯ ಪರೀಕ್ಷೆ(Medical Test) ಮುಗಿಸಿಕೊಂಡು ಆಸ್ಪತ್ರೆಯಿಂದ ಹೊರಬರುವಾಗ ಸಿನಿಮೀಯ ಮಾದರಿಯಲ್ಲಿ ಪೊಲೀಸರನ್ನು ನೂಕಿ ತಪ್ಪಿಸಿಕೊಂಡಿರುವ ಆಗಿರುವ ಘಟನೆ ನಡೆದಿದೆ.
ಕಮರ್ಷಿಲ್ ಸ್ಟ್ರೀಟ್ ಪೊಲೀಸ್ ಠಾಣೆ ರೌಡಿ ಶೀಟರ್ ಆವೇಜ್(22) ತಪ್ಪಿಸಿಕೊಂಡಿರುವ ಅತ್ಯಾಚಾರ ಆರೋಪಿ(Accsed). ಗುರುವಾರ ಡಿ.ಜೆ.ಹಳ್ಳಿಯಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸೆಗಿದ್ದ. ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಡಿ.ಜೆ.ಹಳ್ಳಿ ಠಾಣೆ ಪೊಲೀಸರು(Police) ಸ್ಥಳಕ್ಕೆ ತೆರಳಿ ಆರೋಪಿಯನ್ನು ಬಂಧಿಸಿದ್ದರು. ಬಳಿಕ ಆರೋಪಿ ಆವೇಜ್‌ನನ್ನು ವೈದ್ಯಕೀಯ ಪರೀಕ್ಷೆಗೆ ಆಸ್ಪತ್ರೆಗೆ(Hospital) ಕರೆದೊಯ್ದು ಪರೀಕ್ಷೆ ಮಾಡಿಸಿ ಬಳಿಕ ಹೊಯ್ಸಳ ವಾಹನದತ್ತ ಕರೆತರುವಾಗ ಇಬ್ಬರು ಪೊಲೀಸರನ್ನು ನೂಕಿ ಆತ ಪರಾರಿಯಾಗಿದ್ದಾನೆ. ಈತನ ಬಂಧನಕ್ಕೆ ನಾಲ್ಕು ವಿಶೇಷ ತಂಡ ರಚಿಸಲಾಗಿದ್ದು, ಶೀಘ್ರದಲ್ಲೇ ಬಂಧಿಸುವುದಾಗಿ ಪೂರ್ವ ವಿಭಾಗದ ಡಿಸಿಪಿ ಭೀಮಾಶಂಕರ್ ಗುಳೇದ್ ತಿಳಿಸಿದ್ದಾರೆ.
Animal Cruelty: ಗರ್ಭಿಣಿ ಮೇಕೆ ಮೇಲೆ ಗ್ಯಾಂಗ್ ರೇಪ್.. ಕೊಂದೇ ಬಿಟ್ಟರು
ಸಂತ್ರಸ್ತೆ ನೇಪಾಳ(Nepal) ಮೂಲದವರಾಗಿದ್ದು, ಪತಿ ಜತೆಗೆ ಡಿ.ಜೆ.ಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಪತಿ ಖಾಸಗಿ ಕಂಪನಿಯಲ್ಲಿ ಸೆಕ್ಯೂರಿಟಿ ಗಾರ್ಡ್(Security Guard) ಆಗಿ ಕೆಲಸ ಮಾಡುತ್ತಿದ್ದಾರೆ. ಗುರುವಾರ ಮುಂಜಾನೆ ಏಕಾಏಕಿ ಮನೆಗೆ ನುಗ್ಗಿರುವ ರೌಡಿ ಶೀಟರ್ ಆವೇಜ್, ಮಹಿಳೆ(Woman) ಮೇಲೆ ಅತ್ಯಾಚಾರ ಮಾಡಿದ್ದಾನೆ. ಈ ವೇಳೆ ಸ್ಥಳೀಯರು ಆತನನ್ನು ಹಿಡಿದು ಡಿ.ಜೆ.ಹಳ್ಳಿ ಠಾಣೆಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ(Arrest).
ಬಳಿಕ ನಿಯಮಾನುಸಾರ ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಆಕೆಯ ಮೇಲೆ ಅತ್ಯಾಚಾರ ಎಸಗಿರುವುದು ದೃಢಪಟ್ಟಿದೆ. ಅದರಂತೆ ಆರೋಪಿಯನ್ನು ವೈದ್ಯಕೀಯ ಪರೀಕ್ಷೆ ಒಳಪಡಿಸಿ ಬಳಿಕ ಹೊಯ್ಸಳ ವಾಹನದಲ್ಲಿ ಠಾಣೆಗೆ ಕರೆತರಲು ಪೊಲೀಸರು ಮುಂದಾಗಿದ್ದರು. ಆಸ್ಪತ್ರೆಗೆಯಿಂದ ಹೊರಗೆ ಬಂದಿರುವ ಆರೋಪಿಯು ಇಬ್ಬರು ಪೊಲೀಸರನ್ನು ಏಕಾಏಕಿ ತಳ್ಳಿ ಕತ್ತಲೆಯಲ್ಲೇ ಪರಾರಿಯಾಗಿದ್ದಾನೆ.
ಆರೋಪಿ ವಿರುದ್ಧ 27 ಪ್ರಕರಣ
ಆರೋಪಿ ಆವೇಜ್ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯ ರೌಡಿ ಶೀಟರ್ ಆಗಿದ್ದಾನೆ. ಈತನ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ 14 ಗಂಭೀರ ಪ್ರಕರಣ ಸೇರಿದಂತೆ ಒಟ್ಟು 27 ಪ್ರಕರಣಗಳು ದಾಖಲಾಗಿವೆ. ಕಳೆದ ಜುಲೈನಲ್ಲಿ ಆರೋಪಿಯನ್ನು ಗಡಿಪಾರು ಮಾಡಲಾಗಿತ್ತು. ಈ ಅವಧಿಯಲ್ಲಿಯೂ ಆರೋಪಿಯು ಅಪರಾಧ ಕೃತ್ಯ ಎಸೆಗಿದ್ದಾನೆ. ಇದೀಗ ಅತ್ಯಾಚಾರ ಎಸೆಗಿ ಪೊಲೀಸರ ವಶದಿಂದ ತಪ್ಪಿಸಿಕೊಂಡು ಹೋಗಿದ್ದಾನೆ. ಹೀಗಾಗಿ ಆತನ ವಿರುದ್ಧ ಮತ್ತೊಂದು ಪ್ರಕರಣ ದಾಖಲಿಸಲಾಗಿದೆ. ಇನ್ನು ಆರೋಪಿಯು ತಪ್ಪಿಸಿಕೊಳ್ಳಲು ಕಾರಣರಾದ ಇಬ್ಬರು ಪೊಲೀಸ್ ಸಿಬ್ಬಂದಿ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳುವುದಾಗಿ ಡಿಸಿಪಿ ಭೀಮಾಶಂಕರ್ ಗುಳೇದ್ ತಿಳಿಸಿದ್ದಾರೆ.
ಡೇಟಿಂಗ್ ಆಪ್..ತಡರಾತ್ರಿ ಪಾರ್ಟಿ ನಂತರ ಯುವತಿ ಮೇಲೆರಗಿದ್ದ ಕಾಮುಕರ ಬಂಧನ
ಬೆಂಗಳೂರು: ರಾಜಧಾನಿಯಲ್ಲಿ (Bengaluru) ಪಶ್ಚಿಮ ಬಂಗಾಳ (West Bengal) ಮೂಲದ ಯುವತಿ ಮೇಲೆ ಸಾಮೂಹಿಕ ಆತ್ಯಾಚಾರ (Gang Rape) ನಡೆದಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿತ್ತು. ಈ ಸಂಬಂಧ ದೆಹಲಿ (New Delhi) ಮೂಲದ ನಾಲ್ವರು ಆರೋಪಿಗಳನ್ನು ಸಂಜಯನಗರ ಪೊಲೀಸರು ಬಂಧಿಸಿದ ಘಟನೆ ಮಾ. 29 ರಂದು ನಡೆದಿತ್ತು.
Bengaluru ಪತಿ ವಿರುದ್ಧವೇ ಅತ್ಯಾಚಾರ ಕೇಸ್ ದಾಖಲಿಸಿದ ಪತ್ನಿ!
ನಗರ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಯುವತಿ (Woman) ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳಾದ ರಜತ್, ಶಿವರಾಣ್, ದೇವ್ ಸರೋಯಿ ಹಾಗೂ ಯೊಗೇಶ್ ಕುಮಾರ್ ಎಂಬುವರನ್ನು ಬಂಧಿಸಿದ್ದರು.
ಬಂಧಿತ ಆರೋಪಿಗಳು ದೆಹಲಿ ಮೂಲದವರಾಗಿದ್ದು ರಾಷ್ಟ್ರೀಯ ಮಟ್ಟದಲ್ಲಿ ಸಿಮ್ಮರ್ (ಈಜುಗಾರರು) ಗುರುತಿಸಿಕೊಂಡಿದ್ದಾರೆ ಎನ್ನಲಾಗಿದೆ. ಆರೋಪಿಗಳ ಪೈಕಿ ರಜತ್ ಡೇಟಿಂಗ್ ಆ್ಯಪ್ ಮೂಲಕ ಯುವತಿಯನ್ನ ಪರಿಚಯಿಸಿಕೊಂಡಿದ್ದ. ಪರಿಚಯ ಸ್ನೇಹಕ್ಕೆ ತಿರುಗಿತ್ತು. ಇಬ್ಬರು ಮೊಬೈಲ್ ನಂಬರ್ ವಿನಿಮಯ ಮಾಡಿಕೊಂಡಿದ್ದರು. ಸಲುಗೆ ಹೆಚ್ಚಾದ ಹಿನ್ನೆಲೆ ಇದೇ ತಿಂಗಳು 24ರಂದು ಯುವತಿಯನ್ನ ರಜತ್ ಮನೆಗೆ ಆಹ್ವಾನಿಸಿದ್ದ. ಆರೋಪಿಯ ಸ್ನೇಹಿತರೆಲ್ಲರೂ ಯುವತಿಯೊಂದಿಗೆ ಪಾರ್ಟಿ ಮಾಡಿದ್ದಾರೆ. ತಡರಾತ್ರಿಯಾಗಿದ್ದ ರಜತ್ ರೂಮಿನಲ್ಲಿ ಯುವತಿ ಉಳಿದುಕೊಂಡಿದ್ದಳು. ಈ ವೇಳೆ ಇಚ್ಚೆಗೆ ವಿರುದ್ಧವಾಗಿ ತನ್ನೊಂದಿಗೆ ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿದ್ದಾರೆ. ಈ ಸಂಬಂಧ ಯುವತಿ ನೀಡಿದ ದೂರಿನ ಮೇರೆಗೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ