* ವಿವಾಹಿತೆಯ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಆರೋಪಿ
* ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿ ಹರೀಶ್
* ಈ ಬಗ್ಗೆ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಹೊನ್ನಾಳಿ(ಜೂ.26): ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕು ತಿಮ್ಲಾಪುರ ಗ್ರಾಮದಲ್ಲಿ ವಿವಾಹಿತೆಯ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರಿಗೆ ಸೆರೆ ಹಿಡಿದಿದ್ದಾರೆ. ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ತಿಮ್ಲಾಪುರ ನಿವಾಸಿ ಹರೀಶ್(32 ವರ್ಷ)ಬಂಧಿತ ಆರೋಪಿ.
ಪೇಂಟಿಂಗ್ ಕೆಲಸ ಮಾಡುತ್ತಿದ್ದ. ಈತ ತಿಮ್ಲಾಪುರ ಗ್ರಾಮದ ಚಿನ್ನಪ್ಪ ಇವರ ಪತ್ನಿ ಗೀತಮ್ಮ(35) ಎಂಬುವವರನ್ನು ಕಳೆದ ಜೂ.22ರಂದು ರಾತ್ರಿ ಅತ್ಯಾಚಾರವೆಸಗಿ, ಉಸಿರುಗಟ್ಟಿಸಿ ಕೊಲೆ ಮಾಡಿದ್ದನು.
ಮಾವಿನ ಹಣ್ಣಿನ ಆಸೆ ತೋರಿಸಿ 3 ವರ್ಷದ ಮಗುವಿನ ಮೇಲೆ ಅತ್ಯಾಚಾರ!
ಈ ಬಗ್ಗೆ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯ ಪತ್ತೆಗಾಗಿ ಚನ್ನಗಿರಿ ಡಿವೈಎಸ್ಪಿ ಕೆ. ಎಂ ಸಂತೋಷ್ ಮಾರ್ಗದರ್ಶನದಲ್ಲಿ ಹೊನ್ನಾಳಿ ಸಿಪಿಐ ಟಿ.ವಿ ದೇವರಾಜ್ ನೇತೃತ್ವದಲ್ಲಿ ಪಿಎಸೈ ಬಸವರಾಜ ಬಿರಾದಾರ್ ಹಾಗೂ ಸಿಬ್ಬಂದಿ ಒಳಗೊಂಡ ತಂಡ ರಚಿಸಲಾಗಿತ್ತು. ತಂಡವು ಆರೋಪಿಯನ್ನು ಪತ್ತೆ ಮಾಡಿದ್ದು, ಸಧ್ಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸಿಬ್ಬಂದಿ ಕಾರ್ಯಕ್ಕೆ ಎಸ್ಪಿ ಸಿ.ಬಿ.ರಿಷ್ಯಂತ್, ಎಎಸ್ಪಿ ಆರ್.ಬಿ.ಬಸರಗಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.