
ಬೆಂಗಳೂರು (ಫೆ.01): ಕಾಮುಕನೊಬ್ಬ ಮೂರೂವರೆ ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸೆಗಿ ಕೊಲೆ ಮಾಡಿರುವ ಹೇಯ ಕೃತ್ಯ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಾಮಾಕ್ಷಿಪಾಳ್ಯದ ಕಾವೇರಿನಗರದಲ್ಲಿ ಸೋಮವಾರ ಸಂಜೆ ಈ ದುರ್ಘಟನೆ ನಡೆದಿದೆ. ಈ ಸಂಬಂಧ ಪ್ರಕರಣ ದಾಖಲಿಸಿರುವ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು, 26 ವರ್ಷದ ಆರೋಪಿಯನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ.
ಬಾಗಲಕೋಟೆ ಮೂಲದ ಮಹಿಳೆ ಕಾಮಾಕ್ಷಿಪಾಳ್ಯದಲ್ಲಿ ಮೂರೂವರೆ ವರ್ಷದ ಬಾಲಕಿ ಜತೆಗೆ ನೆಲೆಸಿದ್ದಳು. ಕೌಟುಂಬಿಕ ಕಲಹದಿಂದ ಗಂಡನಿಂದ ದೂರವಿದ್ದ ಈ ಮಹಿಳೆಗೆ ಇತ್ತೀಚೆಗೆ ಆರೋಪಿಯ ಪರಿಚಯವಾಗಿ ಬಳಿಕ ಇಬ್ಬರ ನಡುವೆ ಅನೈತಿಕ ಸಂಬಂಧ ಏರ್ಪಟ್ಟಿತ್ತು. ಹೀಗಾಗಿ ಆರೋಪಿಯು ಮಹಿಳೆಯ ಮನೆಯಲ್ಲೇ ನೆಲೆಸಿದ್ದ. ಮಹಿಳೆ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಾಳೆ. ಆರೋಪಿಯು ಮದ್ಯದ ದಾಸನಾಗಿದ್ದು, ನಿರ್ದಿಷ್ಟ ಕೆಲಸವಿಲ್ಲ. ಸೋಮವಾರ ಮನೆಯಲ್ಲೇ ಇದ್ದ ಆರೋಪಿಯು ಸಂಜೆ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಬಳಿಕ ಹಲ್ಲೆಗೈದು ಕೊಲೆ ಮಾಡಿದ್ದಾನೆ.
ಉತ್ಸವಕ್ಕೆ ಕೋಟಿ ಖರ್ಚು ಮಾಡುವಿರಿ: ಶಾಲಾ ಸಮವಸ್ತ್ರ ಕೊಡದ ಸರ್ಕಾರಕ್ಕೆ ಹೈಕೋರ್ಟ್ ಚಾಟಿ
ಸಂಜೆ ಗಾರ್ಮೆಂಟ್ಸ್ ಕೆಲಸ ಮುಗಿಸಿ ಮಹಿಳೆ ಮನೆಗೆ ಬಂದಾಗ, ಬಾಲಕಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಳು. ಈ ವೇಳೆ ತಕ್ಷಣ ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ವೇಳೆ ಪರೀಕ್ಷಿಸಿದ ವೈದ್ಯರು ಬಾಲಕಿ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಇಷ್ಟಾದರೂ ಆರೋಪಿ ತನಗೂ ಇದಕ್ಕೂ ಸಂಬಂಧವಿಲ್ಲ ಎನ್ನುವಂತೆ ವರ್ತಿಸಿದ್ದಾನೆ. ಮಹಿಳೆಯ ಜತೆಗೆ ಜಗಳ ತೆಗೆದು ಹಲ್ಲೆಗೆ ಮುಂದಾಗಿದ್ದಾನೆ. ಈ ವೇಳೆ ಸ್ಥಳೀಯರು 112 ಪೊಲೀಸ್ ಸಹಾಯವಾಣಿಗೆ ಕರೆ ಮಾಡಿದ್ದು ಗಲಾಟೆ ಬಗ್ಗೆ ಮಾಹಿತಿ ನೀಡಿದ್ದಾರೆ.
ಪತ್ನಿ ಶೀಲ ಶಂಕಿಸಿ ಕೊಲೆ ಪ್ರಕರಣ: ಪರಾರಿಯಾಗುತ್ತಿದ್ದ ಆರೋಪಿ ಬಂಧನ
ತಕ್ಷಣ ಪೊಲೀಸರು ಮಹಿಳೆಯ ಮನೆ ಬಳಿ ಬಂದಾಗ ಬಾಲಕಿ ಮೃತಪಟ್ಟಿರುವ ವಿಚಾರ ಗೊತ್ತಾಗಿದೆ. ಬಳಿಕ ಪರಿಶೀಲನೆ ಮಾಡಿದಾಗ ಬಾಲಕಿ ಮುಖದ ಮೇಲೆ ಗಾಯಗಳು ಕಂಡು ಬಂದಿವೆ. ಕೂಡಲೇ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ಬಾಲಕಿ ಮೇಲೆ ಅತ್ಯಾಚಾರ ಎಸೆಗಿ, ಕೊಲೆ ಮಾಡಿದ್ದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ. ಆತನನ್ನು ಬಂಧಿಸಿರುವ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಪೊಲೀಸರು ಕೊಲೆ, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ