
ರಾಮನಗರ(ಜು.23): 4 ವರ್ಷದ ಬಾಲಕಿ ಮೇಲೆ ಸಂಬಂಧಿಕನೇ ಕಿಡ್ನಾಪ್ ಮಾಡಿ ಅತ್ಯಾಚಾರವಸೆಸಗಿ ಕೊಲೆಗೈದ ಘಟನೆ ಜಿಲ್ಲೆಯ ಮಾಗಡಿ ಪಟ್ಟಣದ ಹಳೇ ಮಸೀದಿ ಮೊಹಲ್ಲಾದಲ್ಲಿ ನಡೆದಿದೆ.
ನಾಪತ್ತೆಯಾಗಿದ್ದ 4 ವರ್ಷದ ಬಾಲಕಿ ಶವವಾಗಿ ಪತ್ತೆಯಾಗಿದ್ದಾಳೆ. ಮೃತ ಬಾಲಕಿ ತಂದೆ ಸೈಫ್ ಅಲಿಖಾನ್ ಸಂಬಂಧಿ ಇರ್ಫಾನ್ ಖಾನ್ ಎಂಬಾತನೇ ಕೃತ್ಯವೆಸಗಿದ ಕಾಮುಕನಾಗಿದ್ದಾನೆ. ಆರೋಪಿ ಇರ್ಫಾನ್ ಖಾನ್ ಬಾಲಕಿಯನ್ನ ಕಿಡ್ನ್ಯಾಪ್ ಮಾಡಿ ಅತ್ಯಾಚಾರ ಮಾಡಿದ ಬಳಿಕ ಕೊಲೆ ಮಾಡಿ ಶವವನ್ನ ರಸ್ತೆ ಪಕ್ಕದ ಪೊದೆಯಲ್ಲಿ ಎಸೆದು ಎಸ್ಕೇಪ್ ಆಗಿದ್ದ.
11 ವರ್ಷದ ವಿದ್ಯಾರ್ಥಿನಿ ಮೇಲೆ ರೇಪ್... ಬಾಲಕಿ ಸೇರಿದಂತೆ ಮೂವರು ಬಾಲಕರ ಬಂಧನ
ಮೊನ್ನೆ ಚಾಕೊಲೇಟ್ ಕೊಡಿಸುವುದಾಗಿ ಬಾಲಕಿಯನ್ನ ಕಾಮುಕ ಅಪಹರಿಸಿದ್ದನು. ಬಾಲಕಿ ಕಾಣದ ಹಿನ್ನೆಲೆಯಲ್ಲಿ ಮಾಗಡಿ ಟೌನ್ ಠಾಣೆಯಲ್ಲಿ ಪೋಷಕರು ನಾಪತ್ತೆ ಪ್ರಕರಣ ದಾಖಲಿಸಿದ್ದರು. ಬಳಿಕ ಸಿಸಿಟಿವಿ ಪರಿಶೀಲಿಸಿದಾಗ ಇರ್ಫಾನ್ ಖಾನ್ ಬಾಲಕಿಯನ್ನ ಕರೆದೋಯ್ದ ದೃಶ್ಯ ಸೆರೆಯಾಗಿತ್ತು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆಯನ್ನ ಆರಂಭಿಸಿದ್ದರು.
ಆರೋಪಿ ಇರ್ಫಾನ್ ಖಾನ್ ನಿನ್ನೆ ಬೆಂಗಳೂರಿನ ಕಲಾಸಿಪಾಳ್ಯದಲ್ಲಿ ಸಿಕ್ಕಿಬಿದ್ದಿದ್ದ. ಬಳಿಕ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿರೋದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ. ಈ ಸಂಬಂಧ ಮಾಗಡಿ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಲಕಿ ಮೇಲಿನ ಅತ್ಯಾಚಾರ ಖಂಡಿಸಿ ಮುಸ್ಲಿಂ ಸಮುದಾಯದಿಂದ ಪ್ರತಿಭಟನೆ ನಡೆಸಲಾಗಿದೆ. ಮಾಗಡಿ ತಾಲೂಕು ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿ ಬಾಲಕಿ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈದ ಆರೋಪಿಯನ್ನ ಗಲ್ಲಿಗೇರಿಸುವಂತೆ ಒತ್ತಾಯಿಸಿದ್ದಾರೆ. ಬಾಲಕಿ ಸಾವಿಗೆ ನ್ಯಾಯದೊರಕಿಸಿ ಕೊಡುವಂತೆ ಮುಸ್ಲಿಂ ಸಮುದಾಯ ಆಗ್ರಹಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ