ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಕ್ರಿಯೆಗೆ ಮಾಡಿದ್ದಲ್ಲದೇ ಬೇರೆ ಯುವತಿಯನ್ನು ಮದುವೆಯಾಗಿ ಮೋಸ ಮಾಡಿರುವ ಕುರಿತು ಪಿಎಸ್ಐ ಮೇಲೆ ಶುಕ್ರವಾರ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ (ಫೆ.18): ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಕ್ರಿಯೆಗೆ ಮಾಡಿದ್ದಲ್ಲದೇ ಬೇರೆ ಯುವತಿಯನ್ನು ಮದುವೆಯಾಗಿ ಮೋಸ ಮಾಡಿರುವ ಕುರಿತು ಪಿಎಸ್ಐ ಮೇಲೆ ಶುಕ್ರವಾರ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೈಯರ್ ಲೆಸ್ ವಿಭಾಗದಲ್ಲಿ ಸಬ್-ಇನ್ಸ್‍ಪೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಲಾಲಸಾಬ್ ನಧಾಪ್ ಮೇಲೆ ಪ್ರಕರಣ ದಾಖಲಾಗಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಯುವತಿಯೋರ್ವಳನ್ನು ಫೇಸ್‌ಬುಕ್ ಮೂಲಕ ಸಂಪರ್ಕವಾಗಿದ್ದಾರೆ.
ಇದಾದ ಬಳಿಕ ಒಬ್ಬರೊಬ್ಬರು ಆತ್ಮೀಯರಾಗಿ ಇಬ್ಬರ ನಡುವೆ ಪ್ರೇಮಾಂಕುರವಾಗಿದೆ. ನಂತರ ದಿನಗಳಲ್ಲಿ ಬೆಂಗಳೂರು, ಹುಬ್ಬಳ್ಳಿ ಧಾರವಾಡ ಸೇರಿದಂತೆ ಇನ್ನಿತರ ಕಡೆಗಳಲ್ಲಿ ಸುತ್ತಾಡಿದ್ದಾರೆ. ಬಳಿಕ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಕ್ರಿಯೆಯನ್ನು ನಡೆಸಿದ್ದಾನೆ. ಇಬ್ಬರು ವಿಷಯ ಕುಟುಂಬಸ್ಥರಿಗೆ ತಿಳಿದಿದ್ದರಿಂದ ಹಿರಿಯರ ಸಮ್ಮುಖದಲ್ಲಿ ಪಿಎಸ್ಐ ಲಾಲಸಾಬ ನದಾಫ್ ಯುವತಿಯನ್ನು ಮದುವೆಯಾಗುವುದಾಗಿ ಬಾಂಡ್ ಮೂಲಕ ಒಪ್ಪಂದ ಪತ್ರಕ್ಕೆ ಸಹಿ ಹಾಕಿದ್ದಾನೆ.
ಕಾಂಗ್ರೆಸ್‌ನವರಿಗೆ ಚೆಂಡುಹೂವು ಇನ್ನೂ ಪರ್ಮನೆಂಟ್: ಸಿ.ಟಿ.ರವಿ ವ್ಯಂಗ್ಯ
ಆದರೂ ಪಿಎಸ್ಐ ಲಾಲ್ ಸಾಬ ನದಾಫ್ ಪ್ರೀತಿಸಿದ ಯುವತಿಯನ್ನು ಒಪ್ಪಂದದಂತೆ ಮದುವೆಯಾಗದೆ ಕಳೆದ ಕೆಲವು ದಿನಗಳ ಹಿಂದಷ್ಟೇ ಬೇರೆ ಯುವತಿಯನ್ನು ಮದುವೆ ಆಗಿದ್ದಾನೆ. ಇದರಿಂದಾಗಿ ಪಿಎಸ್ಐ ನ ಕಾಮಕ್ಕೆ ಬಲಿಯಾದ ಯುವತಿ ನಗರದ ಮಹಿಳಾ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾಳೆ. ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿರುವ ಕುರಿತು ಪ್ರಕರಣ ದಾಖಲಿಸಿದ್ದಾಳೆ. ಇತ್ತ ಕಳೆದ ಒಂದು ತಿಂಗಳಕ್ಕೂ ಹೆಚ್ಚು ಕಾಲದಿಂದ ಆತ ಕರ್ತವ್ಯಕ್ಕೆ ಹಾಜರಾಗಿಲ್ಲ ಎಂದು ತಿಳಿದು ಬಂದಿದೆ.
ರಾಜ್ಯ ಬಿಜೆಪಿ ಸರ್ಕಾರ ಲೂಟಿಗೆ ಮುಂದಾಗಿದೆ: ರಣದೀಪ್ ಸಿಂಗ್ ಸುರ್ಜೇವಾಲ
ಅಲ್ಲದೇ ಕೆಲವು ದಿನಗಳ ಹಿಂದೆ ಈ ಕುರಿತು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಅವರಿಗೆ ಈತನ ಕೃತ್ಯದ ಕುರಿತು ದೂರು ಸಲ್ಲಿಸಿದ್ದರೂ, ಅಂದಿನ ಡಿಸಿಪಿ ಕಾಲ ಹರಣ ಮಾಡಿದ್ದಾರೆ ಎಂದು ಮೋಸಕ್ಕೊಳಗಾದ ಯುವತಿ ಅಸಮಾಧಾನ ವ್ಯಕ್ತಪಡಿಸಿದ್ದಾಳೆ. ಅವರು ಪೊಲೀಸ್ ಕಚೇರಿಯಲ್ಲಿ ವೈಯರ್ ಲೆಸ್ ಶಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಬೆಳಗಾವಿಯ ನಗರದ ಪಿಎಸ್ಐ ಪೊಲೀಸ್ ಅಧಿಕಾರಿ ಮೇಲೆ ಇಂದು ಮಹಿಳಾ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರದ ಪ್ರಕರಣ ದಾಖಲಾಗಿದೆ. ಸದರಿ ಪೊಲೀಸ್ ತನಿಖಾಧೀಕಾರಿಯಾದ ಜನಗೌಡ ಜಾನರವರು ನೇತೃತ್ವದಲ್ಲಿ ಸೂಕ್ತ ರೀತಿಯಲ್ಲಿ ತನಿಖೆಯ ಕ್ರಮ ಕೈಗೊಂಡು ವಿಚಾರಣೆಯನ್ನು ನಡೆಸಿದ್ದಾರೆ.