Pocso case: ಪುತ್ರಿಯರಿಂದಲೇ ತಂದೆ ವಿರುದ್ಧ ಅತ್ಯಾಚಾರ ದೂರು, ಆರೋಪಿ ಖುಲಾಸೆ

By Kannadaprabha News  |  First Published Apr 25, 2023, 11:12 PM IST

ಅಪರೂಪದ ಪ್ರಕರಣವೊಂದರಲ್ಲಿ ಪುತ್ರಿಯರೇ ತಮ್ಮ ತಂದೆಯ ಮೇಲೆ ಮಾಡಿದ ಅತ್ಯಾಚಾರ ಆರೋಪದ ಪೈಕಿ ಒಂದು ಪ್ರಕರಣ ನಗರದ ಪೋಕ್ಸೋ ನ್ಯಾಯಾಲಯದಲ್ಲಿ ಇನ್ನೊಂದು ಪ್ರಕರಣದಲ್ಲಿ ಆರೋಪಿಯನ್ನು ಖುಲಾಸೆಗೊಳಿಸಿ ಮಂಗಳೂರು ನ್ಯಾಯಾಲಯ ಆದೇಶ ಹೊರಡಿಸಿದೆ.


ಮಂಗಳೂರು (ಏ.25): ಅಪರೂಪದ ಪ್ರಕರಣವೊಂದರಲ್ಲಿ ಪುತ್ರಿಯರೇ ತಮ್ಮ ತಂದೆಯ ಮೇಲೆ ಮಾಡಿದ ಅತ್ಯಾಚಾರ ಆರೋಪದ ಪೈಕಿ ಒಂದು ಪ್ರಕರಣ ನಗರದ ಪೋಕ್ಸೋ ನ್ಯಾಯಾಲಯದಲ್ಲಿ ಇನ್ನೊಂದು ಪ್ರಕರಣದಲ್ಲಿ ಆರೋಪಿಯನ್ನು ಖುಲಾಸೆಗೊಳಿಸಿ ಮಂಗಳೂರು ನ್ಯಾಯಾಲಯ ಆದೇಶ ಹೊರಡಿಸಿದೆ.

ಇದೊಂದು ವಿಶೇಷ ಪ್ರಕರಣವಾಗಿದ್ದು 2021ರ ಜೂನ್‌ ತಿಂಗಳಿನಲ್ಲಿ ಕಾಟಿಪಳ್ಳದ ನಿವಾಸಿಯಾದ ಅಬ್ದುಲ್‌ ಹಕೀಂ (abdul hakim) (48) ಎಂಬವರ ಮೇಲೆ ಅವರ ಇಬ್ಬರು ಹೆಣ್ಣು ಮಕ್ಕಳು ತಾವು ಅಪ್ರಾಪ್ತರಾಗಿ ಇದ್ದ ಸಂದರ್ಭದಲ್ಲಿ ನಮ್ಮ ತಂದೆ ನಮ್ಮ ಮೇಲೆ ಅತ್ಯಾಚಾರ(Rape) ಎಸಗಿದ್ದಾರೆ ಎಂದು ಆರೋಪ ಮಾಡಿದ್ದರು. ಈ ಬಗ್ಗೆ ಮಂಗಳೂರು ಮಹಿಳಾ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದವು.

Tap to resize

Latest Videos

ಪ್ರೀತಿ ಮಾಡಲು ಅನುಮತಿ, ಅಪ್ರಾಪ್ತರ ಸೆಕ್ಸ್‌ಗೆ ಅನುಮತಿ ಇಲ್ಲ; ಹೈಕೋರ್ಟ್‌

ಈ ಪೈಕಿ ಆರೋಪಿಯ ಕಿರಿಯ ಮಗಳು ನನ್ನ ತಂದೆಯು ಸತತ ಮೂರು ವರ್ಷಗಳಿಂದ ಅತ್ಯಾಚಾರ ಮಾಡಿದ್ದಾರೆ ಎಂದು ಆರೋಪಿಸಿದ್ದಳು. ಈ ಪ್ರಕರಣದಲ್ಲಿ ನ್ಯಾಯಾಲಯ ಕಳೆದ ಎರಡು ತಿಂಗಳಿನ ಹಿಂದೆ ಆರೋಪಿಯನ್ನು ಖುಲಾಸೆಗೊಳಿಸಿದೆ. ಹಿರಿಯ ಮಗಳು ತಂದೆ ವಿರುದ್ಧ ದಾಖಲಿಸಿದ ಅತ್ಯಾಚಾರ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡ ಮಂಗಳೂರಿನ ಹೆಚ್ಚುವರಿ ಸತ್ರ ಮತ್ತು ಎರಡನೇ ಎಫ್‌ಟಿಎಸ್‌ಸಿ ಪೋಕ್ಸೋ ನ್ಯಾಯಾಲಯ ಈ ಪ್ರಕರಣದಲ್ಲೂ ಆರೋಪಿಯ ಮೇಲೆ ಆರೋಪ ಸಾಬೀತು ಮಾಡಲು ಯಾವುದೇ ಸರಿಯಾದ ಸಾಕ್ಷಾಧಾರಗಳು ಇಲ್ಲ ಎಂದು ನಿರ್ಧರಿಸಿತು. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶ ಕೆ.ಎಂ ರಾಧಾಕೃಷ್ಣ ಅವರು ಆರೋಪಿಯನ್ನು ಬಿಡುಗಡೆ ಮಾಡಲು ಆದೇಶ ಮಾಡಿದ್ದಾರೆ.

ಆರೋಪಿ ಪರವಾಗಿ ನ್ಯಾಯವಾದಿಗಳಾದ ಮಹಮ್ಮದ್‌ ಅಸ್ಗರ್‌ ಮುಡಿಪು, ರುಬಿಯ ಅಕ್ತರ್‌, ಶ್ರೀನಿಧಿ ಪ್ರಕಾಶ್‌, ನಿರೀಕ್ಷಾ ವಾದ ಮಂಡಿಸಿದ್ದರು.

ಪೋಕ್ಸೋ ಆರೋಪಿ ಖುಲಾಸೆಗೊಳಿಸಿ ವಿಶೇಷ ಕೋರ್ಟ್ ಆದೇಶ

ಮಂಗಳೂರು 2022ರ ಆಗಸ್ಟ್‌ನಲ್ಲಿ ಮಂಗಳೂರಿನ ಕೋಡಿಕಲ್‌ ವ್ಯಾಯಾಮ ಶಾಲೆಯ ಬಳಿ ನಡೆದಿದ್ದ ಪೋಕ್ಸೋ ಪ್ರಕರಣ(Pocso case)ಕ್ಕೆ ಸಂಬಂಧಿಸಿದಂತೆ ಆರೋಪಿ ವೀರೇಶ್‌ ಆಲಿಯಾಸ್‌ ಭದ್ರಪ್ಪ ಎಂಬಾತನನ್ನು ಆರೋಪ ಮುಕ್ತಗೊಳಿಸಿ ಮಂಗಳೂರು ನ್ಯಾಯಾಲಯ ಆದೇಶ ನೀಡಿದೆ.

ಮಂಗಳೂರಿನ ಎರಡನೇ ವಿಶೇಷ ಪೋಕ್ಸೊ ಮತ್ತು ಹೆಚ್ಚುವರಿ ಜಿಲ್ಲಾ ಹಾಗೂ ಸೆಷನ್ಸ್‌ ನ್ಯಾಯಾಧೀಶ ಕೆ.ಎಂ. ರಾಧಾಕೃಷ್ಣ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

ಮಂಗಳೂರಿನ ಕೋಡಿಕಲ್‌ ಎಂಬಲ್ಲಿ ವಾಸವಾಗಿದ್ದ ಕೊಪ್ಪಳ ಮೂಲದ ವೀರೇಶ್‌ ತನ್ನ ನೆರಮನೆಯ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ(Sexual harassament) ಎಸಗಿದ್ದ ಎಂದು ಆರೋಪಿಸಲಾಗಿತ್ತು.

ಆರೋಪಿ 30 ವರ್ಷ ಪ್ರಾಯದ ವೀರೇಶ ಎಂಬಾತ ಅಪ್ರಾಪ್ತ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂಬುದು ತನಿಖೆ ಮತ್ತು ಸಾಕ್ಷ್ಯಾಧಾರಗಳಿಂದ ದೃಢಪಟ್ಟಿದೆ ಎಂದು ಪ್ರಾಥಮಿಕ ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ಆರೋಪಪಟ್ಟಿಸಲ್ಲಿಸಿದ್ದರು. ಅಭಿಯೋಜನೆಯ ಪರವಾಗಿ ಏಳು ಮಂದಿ ಸಾಕ್ಷಿಗಳನ್ನು ಹಾಜರುಪಡಿಸಿ ಸಾಕ್ಷ್ಯವನ್ನು ದಾಖಲಿಸಿಕೊಳ್ಳಲಾಗಿತ್ತು. ಪ್ರಾಸಿಕ್ಯೂಷನ್‌ ಪರವಾಗಿ ವೈದ್ಯಕೀಯ ಪರೀಕ್ಷಾ ವರದಿ ಸೇರಿದಂತೆ ಏಳು ಸಾಕ್ಷ್ಯಗಳನ್ನು ನಿಶಾನೆಯಾಗಿ ಗುರುತಿಸಲಾಗಿತ್ತು.

ಆದರೆ ಪ್ರಾಸಿಕ್ಯೂಷನ್‌ ಪರ ದಾಖಲೆಗಳನ್ನು ಹಾಜರುಪಡಿಸಿದ್ದರೂ ಮೌಖಿಕ ಹೇಳಿಕೆಗಳನ್ನು ಪರಿಗಣಿಸಿದ ನ್ಯಾಯಾಲಯ, ಅಭಿಯೋಜನೆಯು ಅಪರಾಧವನ್ನು ಸಾಬೀತುಮಾಡಲು ವಿಫಲವಾಗಿದೆ ಎಂದು ಅಭಿಪ್ರಾಯಪಟ್ಟು ಆರೋಪಿಯನ್ನು ಖುಲಾಸೆಗೊಳಿಸಿತು.

ಆರೋಪಿಯ ಪರವಾಗಿ ದ.ಕ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವಕೀಲ ದಿನೇಶ್‌ ಶೆಟ್ಟಿವಾದಿಸಿದ್ದರು.

click me!