ಓದುವ ವಯಸ್ಸಿನಲ್ಲಿ ಗರ್ಭಿಣಿಯಾದ ಅಪ್ರಾಪ್ತಯ ಸ್ಥಿತಿ ನೋಡಿ ಪೋಷಕರು ಕಂಗಾಲಾಗಿದ್ದಾರೆ. ಇದೀಗ ಬಾಲಕಿಯನ್ನು ಸರ್ಕಾರಿ ಬಾಲಮಂದಿರಲ್ಲಿ ಆರೈಕೆ ಮಾಡಲಾಗಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಮಾಹಿತಿ ನೀಡಲಾಗಿದೆ.
ಚಿಕ್ಕಬಳ್ಳಾಪುರ(ಮಾ.09): ತಾಲೂಕಿನ ಸರ್ಕಾರಿ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ 6 ತಿಂಗಳ ಗರ್ಭಿಣಿಯಾಗಿದ್ದು, ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ದಿನವೇ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ಸಂಬಂಧಿ ಯುವಕನೇ ಅತ್ಯಾಚಾರ ಮಾಡಿದ ಆರೋಪ ಕೇಳಿ ಬಂದಿದೆ. ಓದುವ ವಯಸ್ಸಿನಲ್ಲಿ ಗರ್ಭಿಣಿಯಾದ ಅಪ್ರಾಪ್ತಯ ಸ್ಥಿತಿ ನೋಡಿ ಪೋಷಕರು ಕಂಗಾಲಾಗಿದ್ದಾರೆ. ಇದೀಗ ಬಾಲಕಿಯನ್ನು ಸರ್ಕಾರಿ ಬಾಲಮಂದಿರಲ್ಲಿ ಆರೈಕೆ ಮಾಡಲಾಗಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಮಾಹಿತಿ ನೀಡಲಾಗಿದೆ.
ಸಿದ್ದಗಂಗಾ ಮಠ ಜಾತ್ರೆಗೆ ಬಂದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಬಂಡೆಪಾಳ್ಯದ 3 ಆರೋಪಿಗಳ ಬಂಧನ!
ಈ ಕುರಿತು ಚಿಕ್ಕಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕೋ ಪ್ರಕರಣ ದಾಖಲಿಸಲಾಗಿದೆ. 2024ರ ಜನವರಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ವಸತಿಶಾಲೆಯಲ್ಲಿ ವಾಸವಿದ್ದ 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ್ದಳು.