ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿ ನಟ ದರ್ಶನ್ ಬೆಂಗಳೂರಿನಿಂದ ತುಮಕೂರು ಜೈಲಿಗೆ ಸ್ಥಳಾಂತರ ಮಾಡಲು ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆಯಾಗಲಿದೆ. ರೇಣುಕಾಸ್ವಾಮಿ ಕೊಲೆ ಆರೋಪಿಗಳಿಗೆ ಜೈಲಿನ ಕೆಲ ರೌಡಿಗಳ ಪರಿಚಯದ ಶಂಕೆ ವ್ಯಕ್ತವಾಗಿದೆ.
ಬೆಂಗಳೂರು(ಜೂ.24) ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಆತನ ಗ್ಯಾಂಗ್ ಜೈಲು ಸೇರಿದೆ. ಪೊಲೀಸ್ ಕಸ್ಟಡಿ ಬಳಿಕ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ಗ್ಯಾಂಗ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ನಟ ದರ್ಶನ್ ಸೇರಿದಂತೆ ಕೆಲ ಆರೋಪಿಗಳನ್ನು ತುಮಕೂರು ಜೈಲಿಗೆ ಸ್ಥಳಾಂತರ ಮಾಡಲು ಪೊಲೀಸರು ಮನವಿ ಮಾಡಿದ್ದಾರೆ. ಈ ಕುರಿತು ಅರ್ಜಿ ಇಂದು 24 ಎಸಿಎಂಎಂ ನ್ಯಾಯಾಲಯದಲ್ಲಿ ವಿಚಾರಣೆಯಾಗಲಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳು ಒಂದೇ ಕಡೆ ಇರುವುದು ಸುರಕ್ಷಿತವಲ್ಲ. ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿದ ದಿನವೆ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂರ್ ಪ್ರಸನ್ನ ಕುಮಾರ್ ಮನವಿ ಮಾಡಿದ್ದರು. ಆದರೆ ವಿಚಾರಣೆಯನ್ನು ಜೂನ್ 24ಕ್ಕೆ ಮುಂದೂಡಲಾಗಿತ್ತು. ಪೊಲೀಸರ ಮನವಿಗೆ ದರ್ಶನ್ ಹಾಗೂ ಆತನ ಗ್ಯಾಂಗ್ ಪರ ವಕೀಲರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ
undefined
'ಡಿ' ಗ್ಯಾಂಗ್ ಸಿನಿಮಾ ಟೈಟಲ್ ನೀಡಲು ಫಿಲ್ಕ್ ಛೇಂಬರ್ ನಕಾರ
ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಆರೋಪಿಗಳ ಜೈಲು ಬದಲಿಸುವುದು ಸೂಕ್ತ ಎಂದು ಪೊಲೀಸರು ಹೇಳಿದ್ದಾರೆ. ಎಲ್ಲಾ ಆರೋಪಿಗಳು ಒಂದು ಕಡೆ ಇರುವುದು ಸೂಕ್ತವಲ್ಲ. ಹೀಗಾಗಿ ನಟ ದರ್ಶನ್ ಹಾಗೂ ಇತರ ಕೆಲ ಆರೋಪಿಗಳನ್ನು ತುಮಕೂರು ಜೈಲಿಗೆ ಸ್ಥಳಾಂತರ ಮಾಡಲು ಪೊಲೀಸರು ಸಜ್ಜಾಗಿದ್ದಾರೆ. ಇಂದು ಪೊಲೀಸರ ಅರ್ಜಿ ವಿಚಾರಣೆ ನಡೆಯಲಿದೆ. ಈ ಕುರಿತು ಪೊಲೀಸರ ಮನವಿಯನ್ನು ನ್ಯಾಯಾಲಯ ಪುರಸ್ಕರಿಸುವ ಸಾಧ್ಯತೆ ಇದೆ.
ಪ್ರಮುಖವಾಗಿ ದರ್ಶನ್ ಗ್ಯಾಂಗ್ ನಿಂದಲೇ ಸಹ ಆರೋಪಿಗಳ ಮೇಲೆ ಹಲ್ಲೆ ನಡೆಯುವ ಸಾಧ್ಯತೆ ಇದೆ ಎಂದು ಪೊಲೀಸರು ಹೇಳಿದ್ದಾರೆ. ಇದೇ ಕೇಸಿನ ಆರೋಪಿಗಳು ತಮ್ಮ ಗ್ಯಾಂಗ್ ಸದಸ್ಯರ ಮೇಲೆ ಹಲ್ಲೆ ನಡೆಸುವ ಸಾಧ್ಯತೆ ಇದೆ. ಕೊಲೆ ಪ್ರಕರಣದಲ್ಲಿ ದರ್ಶನ್ ಹೆಸರು ಬಾಯ್ಬಿಟ್ಟ ಆರೋಪಿಗಳ ಮೇಲೆ ಹಲ್ಲೆಯಾಗುವ ಸಾಧ್ಯತೆ ಇದೆ. ಆರೋಪಿಗಳ ಸುರಕ್ಷತೆ ದೃಷ್ಟಿಯಿಂದ ಯಾರ ಮೇಲೆ, ಯಾರು ಹಲ್ಲೆ ನಡೆಸುತ್ತಾರೆ ಅನ್ನೋ ಮಾಹಿತಿಯನ್ನು ಪೊಲೀಸರು ಗೌಪ್ಯವಾಗಿಟ್ಟಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಆತನ ಗ್ಯಾಂಗ್ 12 ದಿನ ಪೊಲೀಸ್ ಕಸ್ಟಡಿಯಲ್ಲಿ ಕಳೆದಿದ್ದರು. ಸ್ಥಳ ಮಹಜರು, ವಿಚಾರಣೆ, ಸಾಕ್ಷ್ಯ ಸಂಗ್ರಹ ಸೇರಿದಂತೆ 12 ದಿನ ಪೊಲೀಸರು ಆರೋಪಿಗಳಿಂದ ಮಹತ್ವದ ಮಾಹಿತಿ ಸಂಗ್ರಹಿಸಿದ್ದರು. ಇದಕ್ಕೆ ಪೂರಕ ಸಾಕ್ಷ್ಯಗಳನ್ನು ಕಲೆ ಹಾಕಿದ್ದರು. ಎರಡನೇ ಬಾರಿ ಪೊಲೀಸ್ ಕಸ್ಟಡಿ ಅಂತ್ಯಗೊಂಡ ಬಳಿಕ ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು. ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ರೇಣುಕಾಸ್ವಾಮಿ ಕೊಲೆ ಆರೋಪಿಗಳ ಪೈಕಿ ಕೆಲ ಆರೋಪಿಗಳು ತುಮಕೂರು ಜೈಲಿಗೆ ಸ್ಥಳಾಂತಗೊಳ್ಳುವ ಸಾಧ್ಯತೆಗಳು ಹೆಚ್ಚಾಗಿದೆ.
ಇತ್ತ ನಟ ದರ್ಶನ್ ಭೇಟಿಯಾಗಲು ಆಪ್ತರು ಜೈಲಿಗೆ ಆಗಮಿಸಿದ್ದು ಅವಕಾಶ ನಿರಾಕರಿಸಲಾಗಿದೆ. ಪವಿತ್ರಾ ಹಾಗೂ ನಟ ದರ್ಶನ್ ಭೇಟಿಯಾಗಲು ಬಂಧ ಆಪ್ತರನ್ನು ವಾಪಸ್ ಕಳುಹಿಸಲಾಗಿದೆ. ಇಷ್ಟೇ ಅಲ್ಲ ಜೈಲು ಸಿಬ್ಬಂದಿಯೊಂದಿಗೆ ಪವಿತ್ರಾ ಗೌಡ ಕಿರಿಕ್ ಮಾಡಿದ್ದಾರೆ ಅನ್ನೋ ಮಾಹಿತಿಯೂ ಬಯಲಾಗಿದೆ. ಪರಪ್ಪನ ಅಗ್ರಹಾರದಲ್ಲಿ ಇದೀಗ ವಿಐಪಿಗಳೇ ತುಂಬಿ ಹೋಗಿದ್ದಾರೆ.
ಹೇಗಿತ್ತು ಜೈಲು ಹಕ್ಕಿ ಪವಿತ್ರಾ ಗೌಡ ಮೊದಲ ದಿನ..? ಪರಪ್ಪನ ಅಗ್ರಹಾರದಲ್ಲಿ ಪವಿತ್ರಾ ಖೈದಿ ನಂ .6024!