ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಹೆಸರೇಳಿದ ನಾಲ್ವರು ಆರೋಪಿಗಳು ತುಮಕೂರು ಜೈಲಿಗೆ ಶಿಪ್ಟ್!

By Sathish Kumar KH  |  First Published Jun 24, 2024, 4:33 PM IST

ರೇಣುಕಾಸ್ವಾಮಿ ಕೊಲೆ ಮಾಡಿದ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್ ಅಂಡ್ ಗ್ಯಾಂಗ್‌ನ 17 ಸದಸ್ಯರ ಪೈಕಿ ನಾಲ್ವರನ್ನು ತುಮಕೂರು ಜಿಲ್ಲಾ ಕಾರಾಗೃಹಕ್ಕೆ ವರ್ಗಾಯಿಸಲು ಕೋರ್ಟ್ ಅನುಮತಿ ನೀಡಿದೆ.


ಬೆಂಗಳೂರು (ಜೂ.24): ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಮಾಡಿದ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್ ಅಂಡ್ ಗ್ಯಾಂಗ್‌ನ 17 ಸದಸ್ಯರ ಪೈಕಿ ನಾಲ್ವರನ್ನು ತುಮಕೂರು ಜಿಲ್ಲಾ ಕಾರಾಗೃಹಕ್ಕೆ ವರ್ಗಾಯಿಸಲು ಕೋರ್ಟ್ ಅನುಮತಿ ನೀಡಿದೆ.

ನಟಿ ಪವಿತ್ರಾಗೌಡಗೆ ಅಶ್ಲೀಲ ಕಾಮೆಂಟ್ ಮಾಡಿದ್ದಾನೆಂದು ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ನಟ ದರ್ಶನ್ ಅಂಡ್ ಗ್ಯಾಂಗ್‌ನಿಂದ ಕಿಡ್ನಾಪ್ ಮಾಡಿ ಭೀಕರವಾಗಿ ಕೊಲೆ ಮಾಡಲಾಗಿತ್ತು. ಕೊಲೆ ಘಟನೆ ಬೆನ್ನಲ್ಲಿಯೇ ನಟ ದರ್ಶನ್‌ನಿಂದ 30 ಲಕ್ಷ ರೂ. ಹಣವನ್ನು ಪಡೆದು ತಾವೇ ಕೊಲೆ ಮಾಡಿದ್ದೆಂದು ನಾಲ್ವರು ಆರೋಪಿಗಳು ಸರೆಂಡರ್ ಆಗಿದ್ದರು. ಆದರೆ, ಕೊಲೆಯ ಘಟನೆಯ ಬಗ್ಗೆ ಪೊಲೀಸರು ವಿಚಾರಣೆ ನಡೆಸಿದಾದ ನಟ ದರ್ಶನ್ ಸೇರಿ ಯಾರಾರು ಭಾಗಿಯಾಗಿದ್ದಾರೋ ಎಲ್ಲರ ಹೆಸರನ್ನೂ ಬಾಯಿ ಬಿಟ್ಟಿದ್ದರು.

Tap to resize

Latest Videos

undefined

ಆತ್ಮಹತ್ಯೆ ಮಾಡಿಕೊಂಡ ನಿರ್ಮಾಪಕ ಸೌಂದರ್ಯ ಜಗದೀಶ್ ಕೊಟ್ಟ ಹಣದಲ್ಲಿ ಪವಿತ್ರಾಗೌಡ ಮನೆ ಖರೀದಿ?

ಈ ಹಿನ್ನೆಲೆಯಲ್ಲಿ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡು ದರ್ಶನ್ ಸೇರಿ ಉಳಿದವರ ಹೆಸರನ್ನು ಹೇಳಿದ್ದ ಆರೋಪಿಗಳಾದ  ಕಾರ್ತೀಕ್‌, ಕೇಶವ್ ಹಾಗೂ ನಿಖಿಲ್ ಸೇರಿದಂತೆ ಮತ್ತೊಬ್ಬ ಆರೋಪಿಯನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬೇರೆಡೆ ಸ್ಥಳಾಂತರ ಮಾಡುವಂತೆ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂರ್ ಪ್ರಸನ್ನ ಕುಮಾರ್ ಮನವಿ ಮಾಡಿದ್ದರು. ಇದನ್ನು ಪುರಸ್ಕರಿಸಿದ ನ್ಯಾಯಾಲಯವು ನಾಲ್ವರು ಆರೋಪಿಗಳನ್ನು ತುಮಕೂರು ಜಿಲ್ಲಾ ನ್ಯಾಯಾಲಯಕ್ಕೆ ವರ್ಗಾಯಿಸಲು ಅನುಮತಿ ನೀಡಿದೆ. 

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳು ಒಂದೇ ಕಡೆ ಇರುವುದು ಸುರಕ್ಷಿತವಲ್ಲ. ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಆರೋಪಿಗಳ ಜೈಲು ಬದಲಿಸುವುದು ಸೂಕ್ತವೆಂದು ಪೊಲೀಸರು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿದ ದಿನವೆ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂರ್ ಪ್ರಸನ್ನ ಕುಮಾರ್ ಮನವಿ ಮಾಡಿದ್ದರು. ಆದರೆ, ಇದಕ್ಕೆ ದರ್ಶನ್ ಹಾಗೂ ಆತನ ಗ್ಯಾಂಗ್ ಪರ ವಕೀಲರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರಿಂದ ವಿಚಾರಣೆಯನ್ನು ಮುಂದೂಡಿಕೆ ಮಾಡಲಾಗಿತ್ತು. ಪುನಃ ಈ ಬಗ್ಗೆ ಸೋಮವಾರ ವಿಚಾರಣೆಗೆ ಕೈಗೆತ್ತಿಕೊಂಡ ವೇಳೆ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂರ್ ಪ್ರಸನ್ನ ಕುಮಾರ್ ಯಾಕೆ ಆರೋಪಿಗಳ ವರ್ಗಾವಣೆ ಅಗತ್ಯ ಎಂದು ವಿವರಿಸಿದ್ದಾರೆ. ಆನಂತರ, ನಾಲ್ವರು ಆರೋಪಿಗಳನ್ನು ಸ್ಥಳಾಂತರ ಮಾಡಲು ಅನುಮತಿ ನೀಡಲಾಗಿದೆ.

ಪತ್ನಿ, ಮಗ ಜೈಲು ಭೇಟಿ ವೇಳೆ ದರ್ಶನ್ ಕಣ್ಣೀರ ಧಾರೆ: ಮಗನನ್ನು ತಬ್ಬಿ ಬಿಕ್ಕಿ ಬಿಕ್ಕಿ ಅತ್ತ ನಟ

ರೇಣುಕಾಸ್ವಾಮಿ ಕೊಲೆ ಕೇಸಿನ ಆರೋಪಿಗಳಾದ ಎ8- ರವಿ, ಎ15-ಕಾರ್ತಿಕ್, ಎ16- ಕೇಶವ ಮೂರ್ತಿ ಎ17-ನಿಖಿಲ್ ನಾಯಕ್ ಅವರನ್ನು ತುಮಕೂರು ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ. ಕೊಲೆ ಕೇಸಿನಲ್ಲಿ ಮೊದಲು ಕಾರ್ತೀಕ್‌, ಕೇಶವ್ ಹಾಗೂ ನಿಖಿಲ್ ಮೊದಲು ಪೊಲೀಸರ ಮುಂದೆ ಶರಣಾಗಿದ್ದರು. ಈ ಮೂವರು ಕೊಲೆ ಬಗ್ಗೆ ಸಂಪೂರ್ಣವಾಗಿ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದರು. ಇವರು ಪೊಲೀಸರ ಮುಂದೆ ಬಾಯ್ಬಿಟ್ಟಿದ್ದರಿಂದ ನಟ ದರ್ಶನ್, ನಟಿ ಪವಿತ್ರಾಗೌಡ, ನಟ ಪ್ರದೂಷ್ ಸೇರಿ ಒಟ್ಟು 14 ಜನರು ಅರೆಸ್ಟ್ ಆಗಿದ್ದರು. ಈಗ ಕಾನೂನು ಸುವ್ಯವಸ್ಥೆ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರದಿಂದ ಬೇರೆ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ.

click me!